ತುಮಕೂರು | ರಾಜಕೀಯ ವೈಷಮ್ಯ: ಗುಂಪುಗಳ ನಡುವೆ ಘರ್ಷಣೆ

Date:

ರಾಜಕೀಯ ವೈಷಮ್ಯದಿಂದಾಗಿ ಇಬ್ಬರ ನಡುವಿನ ಜಗಳ, ಎರಡು ಗುಂಪುಗಳ ನಡುವಿನ ಘರ್ಷಣೆಗೆ ಕಾರಣವಾಗಿದ್ದು, ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಮಧುಗಿರಿ ತಾಲೂಕಿನ ಕಡಗತ್ತೂರು ಗ್ರಾಮದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಘಟನೆಯಲ್ಲಿ ಬೈಕ್‌ಗೆ ಬೆಂಕಿ ಹಚ್ಚಲಾಗಿದ್ದು, ಬೈಕ್‌ ಸಂಪೂರ್ಣ ಸುಟ್ಟು ಕರಕಲಾಗಿದೆ. ವ್ಯಕ್ತಿಯೊಬ್ಬರ ಪರಿಸ್ತಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಗ್ರಾಮದ ಜೆಡಿಎಸ್‌ ಮುಖಂಡ ಮುದ್ದಪ್ಪ ಮತ್ತು ಕಾಂಗ್ರೆಸ್ ಮುಖಂಡ ಕೃಷ್ಣಪ್ಪ ನಡುವೆ ಜಗಳ ಆರಂಭವಾಗಿದೆ. ಅವರಿಬ್ಬರ ನಡುವಿನ ಗಲಾಟೆ ತಾರಕಕ್ಕೇರಿದ್ದು, ಎರಡು ಗುಂಪುಗಳ ನಡುವಿನ ಹೊಡೆದಾಟಕ್ಕೆ ಕಾರಣವಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕೃಷ್ಣಪ್ಪ ಸಂಗಡಿಗರು ಮುದ್ದಪ್ಪ ಅವರ ಬೈಕ್‌ಗೆ ಬೆಂಕಿ ಹಚ್ಚಿದ್ದಾರೆ. ಇದರಿಂದ ಸಿಟ್ಟಾದ ಮುದ್ದಪ್ಪ ಮತ್ತು ಬೆಂಬಲಿಗರು ಕೃಷ್ಣಪ್ಪ ಮೇಲೆ ಹಲ್ಲೆ ಮಾಡಿದ್ದಾರೆ. ತಲೆಗೆ ಗಂಭೀರವಾಗಿ ಗಾಯವಾಗಿದೆ ಎಂದು ತಿಳಿದುಬಂದಿದೆ.

ಘಟನೆ ಸಂಬಂಧ ಕೊಡಿಗೇಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ದೇಶದ ಪ್ರಜಾಪ್ರಭುತ್ವ, ಸಂವಿಧಾನ ರಕ್ಷಣೆಗೆ ಕಾಂಗ್ರೆಸ್‌ ಬೆಂಬಲಿಸಿ: ಮಾನವ ಬಂಧುತ್ವ ವೇದಿಕೆ

ದೇಶದ ಪ್ರಜಾಪ್ರಭುತ್ವ, ಸಂವಿಧಾನದ ರಕ್ಷಣೆಗಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಜನರು...

ಮತದಾರರಿಗೆ ಉಚಿತ ಆಹಾರ ನೀಡಲು ಹೋಟೆಲ್‌ಗಳಿಗೆ ಹೈಕೋರ್ಟ್ ಅನುಮತಿ

ಚುನಾವಣೆಯ ದಿನ ಮತದಾನ ಮಾಡಿದವರಿಗೆ ಉಚಿತ ಆಹಾರ ವಿತರಣೆ ಮಾಡಲು ಬೃಹತ್...

ಇಲ್ಲಾ ಗೌಡ್ರೇ, ಇದು ನ್ಯಾಯ ಅಲ್ಲ, ಇನ್ನು ನಿಲ್ಲಿಸ್ಬಿಡಿ ಸಾಕು: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಮನವಿ

ಪ್ರಜ್ವಲ್‌ ರೇವಣ್ಣನ ವಿಡಿಯೋಗಳನ್ನ ನೋಡಿ ಹಾಸನದ ಜನ ಬೆಚ್ಚಿ ಬಿದ್ದಿದ್ದಾರೆ. ಮೊದಮೊದಲು...

ದಾವಣಗೆರೆ | ಕಾಂಗ್ರೆಸ್‌ಗೆ ಮಡಿವಾಳ ಸಮಾಜ ಬೆಂಬಲ; ಬೇಡಿಕೆಗಳ ಈಡೇರಿಕೆಗೆ ಆಗ್ರಹ

ರಾಜ್ಯದಲ್ಲಿನ ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸುವುದು, ರಾಜ್ಯದ ಎಲ್ಲ ತಾಲೂಕಿನಲ್ಲಿ...