ತುಮಕೂರು | ಪರಮೇಶ್ವರ್ ಸಿಎಂ ಆಗಲೆಂದು ಮಠಾಧೀಶರುಗಳಿಂದ ಸುದ್ದಿಗೋಷ್ಠಿ

Date:

ಸಜ್ಜರು, ವಿದ್ಯಾವಂತರು ಆಗಿರುವ ಗೃಹ ಮಂತ್ರಿಗಳಾದ ಡಾ.ಜಿ.ಪರಮೇಶ್ವರ್ ಅವರನ್ನು ಈ ರಾಜ್ಯದ ಮುಖ್ಯಮಂತ್ರಿಗಳಾಗಿ ನೇಮಕ ಮಾಡುವಂತೆ ಕಾಂಗ್ರೆಸ್ ಪಕ್ಷದ ಮುಖಂಡರನ್ನು ತುಮಕೂರು ಜಿಲ್ಲೆಯ ವಿವಿಧ ಮಠಾಧೀಶರು ಒತ್ತಾಯಿಸಿದ್ದಾರೆ.

- Advertisement -

ತುಮಕೂರು ನಗರದ ಕೊಲ್ಲಾಪುರದಮ್ಮ ಸಮುದಾಯಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿವಿಧ ಮಠಾಧೀಪತಿಗಳು, ಎಂಟು ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿ ಎರಡು ಬಾರಿಯೂ ಪಕ್ಷವನ್ನು ಮುನ್ನೆಡೆಸಿ, ಒಮ್ಮೆ ಪೂರ್ಣ ಬಹುಮತ ದೊಂದಿಗೆ, ಮತ್ತೊಮ್ಮೆ ಜೆಡಿಎಸ್ ಪಕ್ಷದ ಸಹಕಾರದೊಂದಿಗೆ ಅಧಿಕಾರ ಹಿಡಿಯಲು ಕಾರಣ ಕರ್ತರಾಗಿದ್ದಾರೆ.ಅಲ್ಲದೆ ಮೂರು ಬಾರಿ ಗೃಹ ಸಚಿವರಾಗಿ,ವಿವಿಧ ಮಂತ್ರಿ ಪದವಿಗಳನ್ನು ಅತ್ಯಂತ ಜವಾಬ್ದಾರಿಯಿಂದ ನಿಭಾಯಿಸಿ, ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದೆ ಕಾರ್ಯನಿರ್ವಹಿಸಿದ್ದಾರೆ. ಹಾಗಾಗಿ ಅವರನ್ನು ಪಕ್ಷದ ಹೈಕಮಾಂಡ್ ಮುಖ್ಯಮಂತ್ರಿಯಾಗಿ ಘೋಷಿಸಬೇಕು ಎಂಬುದು ಜಿಲ್ಲೆಯ ಎಲ್ಲಾ ಮಠಾಧೀಶರು,ಮುಖಂಡರು, ಕಾರ್ಯಕರ್ತರ ಒತ್ತಾಯವಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಗೃಹಮಂತ್ರಿಯಾಗಿರುವ ಡಾ.ಜಿ.ಪರಮೇಶ್ವರ್ ವಿದೇಶದಲ್ಲಿ ಕಲಿತರು, ದೇಶ ಸೇವೆಗೆ ತಮ್ಮನ್ನು ತಾವು ಅರ್ಪಿಸಿಕೊಂಡಿದ್ದಾರೆ. ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಮೂಲಕ ಒಂದೇ ಸೂರಿನಡಿ ಎಲ್.ಕೆ.ಜಿ.ಯಿಂದ ಪದವಿ, ಮೆಡಿಕಲ್, ಇಂಜಿನಿಯರಿಂಗ್ ವರೆಗೆ ಶಿಕ್ಷಣ ನೀಡುತ್ತಾ, ಲಕ್ಷಾಂತರ ಜನರ ಬಾಳಿಗೆ ಬೆಳಕಾಗಿದ್ದಾರೆ.ಅಲ್ಲದೆ ಜಿಲ್ಲೆಯ ಅಭಿವೃದ್ದಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ತುಮಕೂರು ವಿಶ್ವವಿದ್ಯಾಲಯ ಸೇರಿದಂತೆ ಹಲವು ಯೋಜನೆಗಳ ಹಿಂದೆ ಡಾ.ಜಿ.ಪರಮೇಶ್ವರ್ ಅವರ ಶ್ರಮವಿದೆ.ದೂರದೃಷ್ಟಿಯುಳ್ಳ ಇಂತಹ ವ್ಯಕ್ತಿಗಳು ಮುಖ್ಯಮಂತ್ರಿಗಳಾದರೆ ರಾಜ್ಯ ಮತ್ತಷ್ಟು ಅಭಿವೃದ್ದಿ ಹೊಂದಲಿದೆ.ಹಾಗಾಗಿ ಪಕ್ಷದ ಹೈಕಮಾಂಡ್ ನಮ್ಮ ಒತ್ತಾಯಪೂರ್ವ ಮನವಿಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಮಠಾಧೀಶರು ತಿಳಿಸಿದರು.

ತುಮಕೂರು ಜಿಲ್ಲೆ ರಾಜ್ಯದ 17ಕ್ಕೂ ಹೆಚ್ಚು ಜಿಲ್ಲೆಗಳಿಗೆ ರಹದಾರಿ ಕಲ್ಪಿಸಿದೆ.ಪ್ರಮುಖ ಕೈಗಾರಿಕಾ ಹಬ್ ಆಗಿ ಪರಿವರ್ತನೆಯಾಗುತ್ತಿದೆ. ಅಲ್ಲದೆ ಮೆಟ್ರೋ ಸೇರಿದಂತೆ ವಿವಿಧ ಸಂಪರ್ಕ ಯೋಜನೆಗಳು ವಿಸ್ತಾರಗೊಳ್ಳುವ ಹಂತದಲ್ಲಿವೆ. ಈ ವೇಳೆ ತುಮಕೂರು ಜಿಲ್ಲೆಗೆ ಮುಖ್ಯಮಂತ್ರಿ ಸ್ಥಾನ ದೊರೆತರೆ ಜಿಲ್ಲೆ ಮತ್ತಷ್ಟು ಅಭಿವೃದ್ದಿಯಾಗಲಿದೆ. ಮೈಸೂರು, ಶಿವಮೊಗ್ಗ ಹಾಸನ ಇವುಗಳು ಮುಖ್ಯಮಂತ್ರಿಗಳ ಕ್ಷೇತ್ರ ಎಂಬ ಕಾರಣಕ್ಕೆ ಎಲ್ಲಾ ರೀತಿಯಿಂದ ಅಭಿವೃದ್ದಿಯಾಗಿವೆ. ತುಮಕೂರು ಜಿಲ್ಲೆಗೆ ಮುಖ್ಯಮಂತ್ರಿ ಸ್ಥಾನ ದೊರೆತರೆ ಅಭಿವೃದ್ದಿಯ ವೇಗ ಮತ್ತಷ್ಟು ದ್ವಿಗುಣಗೊಳ್ಳಲಿದೆ.ಹಾಗಾಗಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ನಮ್ಮ ಕೋರಿಕೆಯನ್ನು ಮನ್ನಿಸಿ, ಡಾ.ಜಿ.ಪರಮೇಶ್ವರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು. ಈ ಸಂಬಂಧ ಅಗತ್ಯ ಬಿದ್ದರೆ ಜಿಲ್ಲೆಯ ಎಲ್ಲಾ ಸ್ವಾಮೀಜಿಗಳು, ಎಐಸಿಸಿ ಪ್ರಮುಖರನ್ನು ಭೇಟಿಯಾಗಿ ಮನವರಿಕೆ ಮಾಡಿಕೊಡಲು ಸಹ ಹಿಂಜರಿಯುವುದಿಲ್ಲ ಎಂದರು.

ಸುದ್ದಿಗೋಷ್ಠಿಯಲ್ಲಿ ಸಿದ್ದರಬೆಟ್ಟದ ಶ್ರೀವೀರಭದ್ರಶಿವಾಚಾರ್ಯಸ್ವಾಮೀಜಿ,ಕುಂಚಟಿಗ ಮಹಾ ಸಂಸ್ಥಾನ ಮಠದ ಡಾ. ಶ್ರೀಹನು ಮಂತನಾಥಸ್ವಾಮಿಜಿ,ಬೆಳ್ಳಾವಿಯ ಕಾರದೇಶ್ವರ ಮಠದ ಶ್ರೀಕಾರದ ವೀರಬಸವ ಸ್ವಾಮೀಜಿ,ತಿಪಟೂರಿನ ಷಡಕ್ಷರ ಮಠದ ಶ್ರೀಷಡಕ್ಷರ ಮುನಿ ಸ್ವಾಮೀಜಿ,ಅರೆಶಂಕರಮಠದ ಶ್ರೀಸಿದ್ದರಾಮಚೈತನ್ಯಸ್ವಾಮೀಜಿ,ವಿಶ್ವಕರ್ಮ ಮಠದ ಶ್ರೀನೀಲಕಂಠಸ್ವಾಮೀಜಿ, ರುದ್ರಮುನಿ ಸ್ವಾಮೀಜಿ,ಮೃತ್ಯುಂಜಯಸ್ವಾಮೀಜಿ,ಬಿಂದುಶೇಖರ ಓಡೆಯರ್,ಶ್ರೀವಿದ್ಯಾವಿಭವಸ್ವಾಮೀಜಿ ಸೇರಿದಂತೆ 25ಕ್ಕೂ ಹೆಚ್ಚು ಸ್ವಾಮಿಜಿಗಳು ಪಾಲ್ಗೊಂಡು ತಮ್ಮ ಅಭಿಪ್ರಾಯ ಹಂಚಿಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುದ್ದೇಬಿಹಾಳ | ದಾಸೋಹಿ ರೈತ ಉತ್ಪಾದಕ ಸಹಕಾರಿ ಸಂಘದ ಆರ್ಥಿಕ ಚಟುವಟಿಕೆ: ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

ರೈತರೇ ಮಾಲೀಕರಾಗಿ, ರೈತರ ಆರ್ಥಿಕ ಸಬಲೀಕರಣವನ್ನೇ ಕೇಂದ್ರವಾಗಿಟ್ಟುಕೊಂಡು ಅಸ್ತಿತ್ವಕ್ಕೆ ಬಂದಿರುವ ದಾಸೋಹಿ...

ಮಾನವೀಯತೆಯೇ ಎಲ್ಲ ಧರ್ಮಗಳ ಸಾರ: ಸಿದ್ದರಾಮಯ್ಯ

ಪ್ರವಾದಿ ಮುಹಮ್ಮದ್‌(ಸ) ಅವರು ಯಾವುದೇ ಒಂದು ಧರ್ಮ ಅಥವಾ ಸಮುದಾಯಕ್ಕೆ ಮಾತ್ರ...

ಕೋಲಾರ | ಮರಗಳ ಹರಾಜು ಅಕ್ರಮ, ತನಿಖೆಗೆ ವಿಶೇಷ ತಂಡ ರಚಿಸಲು ರೈತ ಸಂಘ ಆಗ್ರಹ

ಕೋಲಾರ–ವೇಮಗಲ್ ರಸ್ತೆ ವಿಸ್ತರಣೆಗೆ ಮರಗಳ ತೆರವು ಸಂಬಂಧ ನಡೆದಿರುವ ಹರಾಜು ಪ್ರಕ್ರಿಯೆಯಲ್ಲಿ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...