ತುಮಕೂರು | ಪ್ರಧಾನಿಯಿಂದ ಜಿಲ್ಲೆಗೆ ಶೀಘ್ರ ದೊಡ್ಡ ಯೋಜನೆ ಘೋಷಣೆ :  ಕೇಂದ್ರ ಸಚಿವ ಸೋಮಣ್ಣ

Date:

Advertisements

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಯೋಜನೆಗಳು, ಅವರು ರಾಷ್ಟ್ರಕ್ಕೆ ನೀಡಿರುವ ಕೊಡುಗೆ, ಅವರ ದೂರದೃಷ್ಟಿಯ ಚಿಂತನೆ ದೇಶದ ಪ್ರಗತಿಗೆ ಸಹಕಾರಿಯಾಗಿದೆ. ಇನ್ನು 6-7 ತಿಂಗಳಲ್ಲಿ ಪ್ರಧಾನಿ ಮೋದಿಯವರೇ ತುಮಕೂರು ಜಿಲ್ಲೆಗೆ ದೊಡ್ಡ ಯೋಜನೆಯನ್ನು ಘೋಷಣೆ ಮಾಡಲಿದ್ದಾರೆ, ಆ ಯೋಜನೆ ಯಾವುದೆಂದು ನಾನು ಈಗ ಹೇಳುವುದಿಲ್ಲ, ಕಾದು ನೋಡಿ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.

ತುಮಕೂರು ನಗರದ ಗ್ರಂಥಾಲಯ ಸಭಾಂಗಣದಲ್ಲಿ ನಡೆದ ಜಿಲ್ಲಾ ರೈಲ್ವೇ ಪ್ರಯಾಣಿಕರ ವೇದಿಕೆಯ ದಶಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಾನು ನಿರೀಕ್ಷೆ ಮಾಡಿರಲಿಲ್ಲ, ಕೇಂದ್ರ ಸರ್ಕಾರದಲ್ಲಿ ಮಂತ್ರಿಯಾದೆ, ನಿರೀಕ್ಷೆ ಮಾಡದೆ ರೈಲ್ವೇ ಸಚಿವನಾದೆ. ಇದೆಲ್ಲಾ ತುಮಕೂರು ಕ್ಷೇತ್ರದ ಜನರ, ಗುರುಗಳ ಆಶೀರ್ವಾದದ ಫಲ ಎಂದರು.

ರೈಲ್ವೆ ಇಲಾಖೆಯಲ್ಲಿ ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಯೋಜನೆಗಳಿಗೆ ವೇಗ ನೀಡಲು ಪ್ರಧಾನಿ ಮೋದಿಯವರು ನೆರವಾಗಿದ್ದಾರೆ. ಭೂಸ್ವಾಧೀನ ಪ್ರಕ್ರಿಯೆ ಮುಗಿಯದೆ ಉಳಿದಿದ್ದ ತುಮಕೂರು-ರಾಯದುರ್ಗ, ತುಮಕೂರು-ದಾವಣಗೆರೆ ರೈಲು ಮಾರ್ಗದ ಭೂಸ್ವಾಧೀನ ಕೆಲಸವನ್ನು ತೀವ್ರಗೊಳಿಸಿ ಆ ಕಾರ್ಯ ಬಹುತೇಕ ಅಂತಿಮ ಹಂತದಲ್ಲಿದೆ. ಇಷ್ಟು ವರ್ಷಗಳಿಂದ ಆಗದ ತುಮಕೂರು ನಗರದ ರೈಲ್ವೆ ನಿಲ್ದಾಣವನ್ನು 88 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಾಣ ಮಾಡಿ, ಡಾ.ಶಿವಕುಮಾರ ಸ್ವಾಮೀಜಿಗಳ ಹೆಸರನ್ನು ನಾಮಕರಣ ಮಾಡಿವ ಯೋಜನೆ ಚಾಲನೆ ಸಿಕ್ಕಿದೆ. ಇದೆಲ್ಲಾ ನಿಮ್ಮ ಆಶೀರ್ವಾದ, ನೀವು ಮತ ನೀಡಿ ಕೊಟ್ಟ ಅವಕಾಶ ಎಂದರು.

Advertisements
1000539913

ರೈಲ್ವೆ ಇಲಾಖೆಯಲ್ಲಿ ಹಲವಾರು ಉದ್ಯೋಗಾವಕಾಶಗಳಿವೆ. ಇದೂವರೆಗೆ ಹಿಂದಿ, ಇಂಗ್ಲೀಷಿನಲ್ಲಿ ನೇಮಕಾತಿ ಪರೀಕ್ಷೆಗಳನ್ನು ಬರೆಯಬೇಕಾಗಿತ್ತು. ಈಗ ಕನ್ನಡದಲ್ಲೂ ಪರೀಕ್ಷೆ ಬರೆದು ಕನ್ನಡಿಗರು ರೈಲ್ವೆ ಇಲಾಖೆಯ ವಿವಿಧ ಹಂತದ ಹುದ್ದೆಗಳನ್ನು ಪಡೆಯಬಹುದು. ಇದು ಮಹತ್ವದ ಬದಲಾವಣೆ ಅಲ್ಲವೆ? ಎಂದು ಕೇಳಿದರು.

ರೈಲ್ವೆ ಗೇಟುಗಳನ್ನು ತೆರವು ಮಾಡಿ ಆ ಭಾಗದಲ್ಲಿ ಮೇಲ್ಸೇತುವೆ, ಕೆಳಸೇತುವೆ ನಿರ್ಮಾಣ ಮಾಡುವ ಕಾರ್ಯಕ್ಕೆ ಆದ್ಯತೆ ನೀಡಲಾಗಿದೆ. ಪ್ರಯಾಣಿಕರ ಸುರಕ್ಷತೆ ಹಾಗೂ ಅನುಕೂಲಕ್ಕಾಗಿ ಇಲಾಖೆಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಸಾವಿರಾರು ಕೋಟಿ ರೂ. ಖರ್ಚು ಮಾಡಿ 1426 ಕಿ.ಮೀ ಉದ್ದ ಸಿಗ್ಮಲ್‌ರಹಿತ ಮಾರ್ಗ ಮಾಡಲಾಗುತ್ತಿದೆ ಎಂದು ಹೇಳಿದರು.

ಜಿಲ್ಲಾ ರೈಲು ಪ್ರಯಾಣಿಕರ ವೇದಿಕೆಯ ಜಿಲ್ಲೆಯ ರೈಲ್ವೆ ಅಭಿವೃದ್ಧಿಯ ಮುನ್ನೋಟದ ಕಿರು ಹೊತ್ತಿಗೆ ಹಾಗೂ ನಮ್ಮ ರೈಲು ಎಂಬ ಸ್ಮರಣ ಸಂಚಿಕೆಯನ್ನು ಸಚಿವ ವಿ.ಸೋಮಣ್ಣ ಈ ವೇಳೆ ಬಿಡಗಡೆ ಮಾಡಿದರು.

ವೇದಿಕೆಯ ಪ್ರಧಾನ ಕಾರ್ಯದರ್ಶಿ ಕರಣಂ ರಮೇಶ್ ರಚಿಸಿ ನಿರ್ದೇಶನ ಮಾಡಿದ ರೈಲು ಕುರಿತ ಸಾಕ್ಷಚಿತ್ರವನ್ನು ಶಾಸಕ ಜಿ.ಬಿ.ಜ್ಯೋತಿಗಣೇಶ್ ಅನಾವರಣಗೊಳಿಸಿದರು. 

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯೂಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ರೈಲು ಪ್ರಯಾಣಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. 

1000541489

ವೇದಿಕೆಯ ದಶಮಾನೋತ್ಸವದ ಪ್ರಯುಕ್ತ ಏರ್ಪಡಿಸಿದ್ದ ರೈಲು ಮತ್ತು ರೈಲಿನ ಸುರಕ್ಷತೆ ವಿಷಯದ ಪ್ರಬಂಧ ಮತ್ತು ಚಿತ್ರಕಲಾ ಸ್ಪರ್ಧೆ ವಿಜೇತರಿಗೆ ಬಹುಮಾನ ನೀಡಲಾಯಿತು.

ಮಾಜಿ ಸಂಸದ ಜಿ.ಎಸ್.ಬಸವರಾಜು ಅವರನ್ನು ವೇದಿಕೆಯಿಂದ ಸನ್ಮಾನಿಸಿ ಗೌರವಿಸಲಾಯಿತು.

 ಜಿಲ್ಲಾಧಿಕಾರಿ ಶುಭ ಕಲ್ಯಾಣ್, ವಿಧಾನ ಪರಿಷತ್ ಮಾಜಿ ಸದಸ್ಯ ಡಾ.ಎಂ.ಆರ್.ಹುಲಿನಾಯ್ಕರ್, ಹಾಲಪ್ಪ ಪ್ರತಿಷ್ಠಾನ ಅಧ್ಯಕ್ಷ ಮುರಳಿಧರ ಹಾಲಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವೈ.ಹೆಚ್.ಹುಚ್ಚಯ್ಯ, ಬಿಜೆಪಿ ಮುಖಂಡ ಎಸ್.ಶಿವಪ್ರಸಾದ್ ಮೊದಲಾದವರು ಭಾಗವಹಿಸಿದ್ದರು.

ದಶಮಾನೋತ್ಸವ ಸಮಿತಿ ಅಧ್ಯಕ್ಷ ಬಿ.ಕೆ.ಜಯಪ್ರಕಾಶ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ರೈಲ್ವೇ ಪ್ರಯಾಣಿಕರ ವೇದಿಕೆ ಅಧ್ಯಕ್ಷೆ ಬಾ.ಹ.ರಮಾಕುಮಾರಿ, ಪ್ರಧಾನ ಕಾರ್ಯದರ್ಶಿ ಕರಣಂ ರಮೇಶ್, ಉಪಾಧ್ಯಕ್ಷರಾದ ಪರಮೇಶ್ ಸಿಂದಗಿ ಬಿ.ಆರ್., ಮಾಧವಮೂರ್ತಿ ಗುಡಿಬಂಡೆ, ಜಂಟಿ ಕಾರ್ಯದರ್ಶಿಗಳಾದ ಸಗರ ಚಕ್ರವರ್ತಿ, ಎಂ.ಆರ್.ರಘು, ಖಜಾಂಚಿ ಆರ್.ಬಾಲಾಜಿ, ಸದಸ್ಯರಾದ ರಘೋತ್ತಮರಾವ್, ಸಿ.ನಾಗರಾಜ್ ರಾಮಾಂಜನೇಯ, ರವಿಶಂಕರ್, ಉಮಾಶಂಕರ್, ಶಿವಕುಮಾರ್ ದೀಪಕ್, ಭರತ್‌ಕುಮಾರ್, ಮಹಮದ್‌ಹುಸೇನ್, ಹರೀಶ್, ಪ್ರಸನ್ನ, ಶಿವಾನಂದ್, ಮೋಹನ್‌ಕುಮಾರ್, ದಯಾನಂದ್, ಅಶ್ವತ್ಥನಾರಾಯಣ ಸಿದ್ದಲಿಂಗೇಶ್ವರ, ವೀರಪ್ಪ, ಸೋಮೇಶಪ್ಪ, ಚೇತನ್ ಮೊದಲಾದವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X