ತುಮಕೂರು | ಏ.1ರಿಂದ ಕೊಬ್ಬರಿ ಖರೀದಿ ಆರಂಭ

Date:

ಕನಿಷ್ಠ ಬೆಂಬಲ ಬೆಲೆಯಡಿ ಸೋಮವಾರದಿಂದ (ಏಪ್ರಿಲ್ 1) ಕೊಬ್ಬರಿ ಖರೀದಿ ಪ್ರಕ್ರಿಯೆ ಆರಂಭವಾಗಲಿದೆ.

ನೋಂದಣಿ ಕಾರ್ಯ ಮುಗಿದ 20 ದಿನಗಳ ಬಳಿಕ ಸರ್ಕಾರ ಕೊಬ್ಬರಿ ಖರೀದಿಗೆ ಮುಂದಾಗಿದೆ. ತುಮಕೂರು ಜಿಲ್ಲೆಯ 26 ಕೇಂದ್ರಗಳಲ್ಲಿ ಏಕಕಾಲಕ್ಕೆ ಖರೀದಿ ಶುರುವಾಗಲಿದೆ. ಖರೀದಿ ಕೇಂದ್ರಗಳಲ್ಲಿ ಅಧಿಕಾರಿಗಳು, ಗ್ರೇಡರ್‌ಗಳು, ತೂಕದ ಯಂತ್ರ, ಕೊಬ್ಬರಿ ತುಂಬಲು ಬೇಕಾದ ಚೀಲಗಳು, ಸಂಗ್ರಹಕ್ಕೆ ಗೋದಾಮು ಸೇರಿದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ.

ತುಮಕೂರು ಜಿಲ್ಲೆಯಾದ್ಯಂತ 27,212 ಮಂದಿ ರೈತರು 3,17,917 ಕ್ವಿಂಟಲ್‌ ಕೊಬ್ಬರಿ ಮಾರಾಟಕ್ಕೆ ನೋಂದಣಿ ಮಾಡಿದ್ದಾರೆ. ಆರಂಭದಲ್ಲಿ ಒಂದು ಕೇಂದ್ರದಲ್ಲಿ ದಿನವೊಂದಕ್ಕೆ 100 ಕ್ವಿಂಟಲ್‌ನಿಂದ 150 ಕ್ವಿಂಟಲ್‌ ಕೊಬ್ಬರಿ ಖರೀದಿಸಲಾಗುತ್ತದೆ. ಪ್ರತಿದಿನ 10ರಿಂದ 15 ಮಂದಿ ರೈತರು ಕೊಬ್ಬರಿ ಮಾರಾಟ ಮಾಡಬಹುದು. ಈಗಾಗಲೇ, ನೋಂದಣಿ ಮಾಡಿಕೊಂಡಿರುವ ಕೇಂದ್ರಗಳಲ್ಲಿಯೇ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಎಲ್ಲ ಖರೀದಿ ಕೇಂದ್ರಗಳ ಬಳಿ ಏಪ್ರಿಲ್‌ 6ರವರೆಗೆ ಮಾರುಕಟ್ಟೆಗೆ ಕೊಬ್ಬರಿ ತರಬೇಕಿರುವ ರೈತರ ಪಟ್ಟಿ ಪ್ರಕಟಿಸಲಾಗಿದೆ. ಹೆಸರು ನೋಂದಣಿ ಮಾಡಿಕೊಂಡಿರುವ ಆಧಾರದ ಮೇಲೆ ಪಟ್ಟಿ ಹಾಕಲಾಗಿದೆ. ಎಲ್ಲ ರೈತರು ಒಂದೇ ದಿನ ಕೇಂದ್ರಗಳ ಹತ್ತಿರ ಬಂದು ಕಾಯುವುದನ್ನು ತಪ್ಪಿಸುವ ಉದ್ದೇಶದಿಂದ ಮುಂಚಿತವಾಗಿಯೇ ರೈತರಿಗೆ ಮಾಹಿತಿ ನೀಡಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ವಿವಿಧ ಸಮುದಾಯಗಳ ಮುಖಂಡರೊಂದಿಗೆ ಸಭೆ; ಮತಯಾಚನೆ ಮಾಡಿದ ಕೈ ಅಭ್ಯರ್ಥಿ

ಈ ವರ್ಷ ಕೊಬ್ಬರಿ ಖರೀದಿಗೆ ಎರಡು ಬಾರಿ ನೋಂದಣಿ ಪ್ರಕ್ರಿಯೆ ನಡೆದಿತ್ತು. ಮೊದಲ ಬಾರಿಗೆ ಜನವರಿಯಲ್ಲಿ ನೋಂದಣಿ ಆರಂಭಿಸಲಾಯಿತು. ನೋಂದಣಿಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದ ನಂತರ ಇಡೀ ಪ್ರಕ್ರಿಯೆಯನ್ನು ರದ್ದುಪಡಿಸಿ, ಮರುನೋಂದಣಿಗೆ ಅವಕಾಶ ಮಾಡಿಕೊಡಲಾಯಿತು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಎಚ್‌ಡಿಕೆ ಹೇಳಿಕೆಗೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರ ಖಂಡನೆ

ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು...

ಕಲಬುರಗಿ | ಪ್ರಜಾಪ್ರಭುತ್ವದ ಉಳಿವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌ಗೆ ಬೆಂಬಲ: ದಸಂಸ

2024ರ ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳಿವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌...

ದಾವಣಗೆರೆ | ಭಾರತ ದೇಶ ಇರುವವರೆಗೂ ಸಂವಿಧಾನ ಇರುತ್ತದೆ: ಪ್ರಾಂಶುಪಾಲ ಕಲ್ಲೇಶ್‌

ಭಾರತ ದೇಶ ಇರುವವರೆಗೂ ಸಂವಿಧಾನ ಇರುತ್ತದೆ. ಅದರ ಬದಲಾವಣೆ ಯಾರಿಂದಲೂ ಸಾಧ್ಯವಿಲ್ಲ...

ರಾಯಚೂರು | ಎಚ್‌ಡಿಕೆಯಿಂದ ಮಹಿಳೆಯರಿಗೆ ಅವಮಾನ, ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಕುರಿತು ಜೆಡಿಎಸ್ ರಾಜ್ಯಾಧ್ಯಕ್ಷ...