ತುಮಕೂರು | ಶೋಷಿತರ ಬದುಕಲ್ಲಿ ಅರಿವಿನ ಹಣತೆ ಹಚ್ಚಿದ ಪ್ರೊ.ಬಿ.ಕೃಷ್ಣಪ್ಪ : ಎನ್‌.ವೆಂಕಟೇಶ್‌

Date:

Advertisements

ಶೋಷಿತ ಸಮುದಾಯಗಳಲ್ಲಿ ಹೋರಾಟದ ಕಿಚ್ಚು ಹತ್ತಿಸಿದ ಪ್ರೊ.ಬಿ.ಕೃಷ್ಣಪ್ಪ ಅವರ ಹೋರಾಟದ ಹಾದಿಯಲ್ಲಿ ಯುವ ಸಮುದಾಯ ಹೆಜ್ಜೆ ಹಾಕಬೇಕಿದೆ. ಶಿಕ್ಷಣ, ಸಂಘಟನೆಯ ಮೂಲಕ ಸಮುದಾಯದ ಅಭಿವೃದ್ಧಿ ಹೊಂದಬೇಕಿದೆ ಎಂದು ಡಾ.ಬಾಬು ಜಗಜೀವನ್‌ ರಾಂ ಪ್ರಶಸ್ತಿ ಪುರಸ್ಕೃತ ಹಿರಿಯ ಹೋರಾಟಗಾರ ಎನ್‌.ವೆಂಕಟೇಶ್‌ ಅಭಿಪ್ರಾಯಪಟ್ಟರು.

ತುಮಕೂರು ನಗರದಲ್ಲಿ ಒಳಮೀಸಲಾತಿ ಹೋರಾಟ ಸಮಿತಿ ದಲಿತ ಸಂಘಟನೆಗಳ ಒಕ್ಕೂಟ ಹಮ್ಮಿಕೊಂಡಿದ್ದ ಪ್ರೊ.ಬಿ.ಕೃಷ್ಣಪ್ಪ ಜನ್ಮಾದಿನಾಚರಣೆ ಹಾಗೂ ಒಳಮೀಸಲಾತಿ ಮುಂದಿನ ಹೆಜ್ಜೆ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರೊ.ಬಿ.ಕೃಷ್ಣಪ್ಪ ಅವರು ಪ್ರಾರಂಭಿಸಿದ ದಲಿತ ಸಂಘರ್ಷ ಸಮಿತಿ ಶೋಷಿತ, ಹಿಂದುಳಿದ ವರ್ಗಗಳಲ್ಲಿ ಸ್ವಾಭಿಮಾನದ ಹೋರಾಟವನ್ನು, ತಾರತಮ್ಯದ ವಿರುದ್ಧ ಹೋರಾಡುವ ಶಕ್ತಿಯನ್ನು ತುಂಬಿತು. ಶೋಷಿತ ಮತ್ತು ಹಿಂದುಳಿದವರು ಇಂದು ಸಂಘಟಿತರಾಗಬೇಕಿದೆ ಎಂದರು.

Advertisements

ದಲಿತ ಸಂಘರ್ಷ ಸಮಿತಿ ಹಾಗೂ ವಿರೋಧ ಪಕ್ಷಗಳ ಬೆಂಬಲದೊಂದಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಪ್ರೊ.ಬಿ.ಕೃಷ್ಣಪ್ಪ ಅವರು ರಾಜೀವ್‌ ಗಾಂಧಿಯವರ ಸಾವಿನ ಕಾಂಗ್ರೆಸ್‌ ಪರ ಅನುಕಂಪದ ಅಲೆಯಲ್ಲಿ ಸೋಲನ್ನು ಅನುಭವಿಸಿದರು. ಸೋಲಿನ ನಂತರವೂ ಹೋರಾಟದಿಂದ ವಿಮುಖರಾಗಲಿಲ್ಲ. ಚುನಾವಣಾ ರಾಜಕೀಯದಲ್ಲಿ ಸೋಲನ್ನು ಕಂಡ ಪ್ರೊ.ಬಿ.ಕೃಷ್ಣಪ್ಪ ಅವರು ದಲಿತ ಸಂಘರ್ಷ ಸಮಿತಿಯೊಂದಿಗೆ, ಬಹುಜನ ಸಮಾಜವಾದಿ ಪಕ್ಷವನ್ನು ರಾಜ್ಯದಲ್ಲಿ ಸ್ಥಾಪಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾದರು. ತಮ್ಮ 59ನೇ ವರ್ಷದಲ್ಲಿ ನಮ್ಮನ್ನು ಅಗಲುವ ಮೂಲಕ ಶೋಷಿತ, ದಲಿತ ವರ್ಗಗಳಲ್ಲಿ ಪ್ರಜ್ವಲಿಸಿದ ಸ್ವಾಭಿಮಾನದ ಜ್ಯೋತಿ ನಂದಿತು ಎಂದರು.

ಪ್ರೊ.ಬಿ.ಕೃಷ್ಣಪ್ಪ ಅವರು ತೋರಿದ ಹಾದಿಯಲ್ಲಿ ಇಂದಿನ ಯುವ ಸಮೂಹ ಸಾಗಬೇಕಿದೆ, ಶೋಷಿತ ಮತ್ತು ಹಿಂದುಳಿದವರಿಗೆ ಶಿಕ್ಷಣ ಮತ್ತು ಸಂಘಟನೆಯ ಶಕ್ತಿಯನ್ನು ತೋರಿಸುವ ಮೂಲಕ ಸಮಾಜವನ್ನು ಸರಿ ದಾರಿಯಲ್ಲಿ ಮುನ್ನೆಡೆಸಬೇಕಾದ ಮಹತ್ವದ ಜವಾಬ್ದಾರಿ ಇದೆ ಎನ್ನುವುದನ್ನು ಅರಿಯಬೇಕು ಎಂದರು.

ಪತ್ರಕರ್ತ ಎಸ್.ನಾಗಣ್ಣ ಮಾತನಾಡಿ ಪ್ರೊ.ಬಿ.ಕೃಷ್ಣಪ್ಪ ಅವರು ದಲಿತ ಸಮುದಾಯವನ್ನು ಸಂಘಟಿಸುವ ಮೂಲಕ ದಲಿತ ಸಮುದಾಯಗಳಲ್ಲಿ ರಾಜಕೀಯ, ಶಿಕ್ಷಣದ ಅರಿವನ್ನು ಮೂಡಿಸಿದರು. ಇಂದಿನ ಕಾಲಘಟ್ಟದಲ್ಲಿ ದಲಿತರು ಮತ್ತು ಹಿಂದುಳಿದ ವರ್ಗಗಳು ಒಂದಾಗಿ ಹೋರಾಟ ನಡೆಸಬೇಕಾದ ಅವಶ್ಯಕತೆ ಇದೆ ಎಂದರು.

ದಲಿತ ಸಮುದಾಯಗಳಿಗೆ ಒಳ ಮೀಸಲಾತಿ ದೊರಕಬೇಕಾಗಿದ್ದು, ಹಿಂದುಳಿದ ವರ್ಗಗಳಿಗೂ ಜನಸಂಖ್ಯೆಗೆ ಅವಶ್ಯಕವಾದ ಮೀಸಲಾತಿಯನ್ನು ಪಡೆಯುವ ಅವಶ್ಯಕತೆ ಇದೆ. ಹಿಂದುಳಿದ ವರ್ಗಗಳಿಗೂ, ದಲಿತ ಸಮುದಾಯಗಳಿಗೂ ಮೀಸಲಾತಿಯನ್ನು ತಪ್ಪಿಸುವ ನಿಟ್ಟಿನಲ್ಲಿ ಪಟ್ಟಭದ್ರರ ಹುನ್ನಾರಗಳು ನಡೆಯುತ್ತಿರುವುದರ ವಿರುದ್ಧ ಎಚ್ಚರಿಕೆಯನ್ನು ವಹಿಸಬೇಕಿದೆ ಎಂದರು.

ಒಳಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷ ಡಾ.ವೈ.ಕೆ.ಬಾಲಕೃಷ್ಣಪ್ಪ ಮಾತನಾಡಿ ರಾಜ್ಯದ ದಲಿತರ ಪಾಲಿಗೆ ಪ್ರೊ.ಬಿ.ಕೃಷ್ಣಪ್ಪ ಅವರು ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರಂತೆ ಪ್ರಭಾವ ಬೀರಿದ ಮಹಾನ್‌ ನಾಯಕ, ಚಂದ್ರಗುತ್ತಿ ರಾಜ್ಯದಲ್ಲಿ ಅನೇಕ ಅನಿಷ್ಠ ಆಚರಣೆಗಳನ್ನು ನಿಲ್ಲಿಸಲು ದಲಿತ ಸಂಘರ್ಷ ಸಮಿತಿ ಹಾಗೂ ಪ್ರೊ.ಬಿ.ಕೃಷ್ಣಪ್ಪ ಕಾರಣ ಎಂದರು.

ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೆ ಸಮೀಕ್ಷೆಯನ್ನು ನಡೆಸುತ್ತಿರುವುದರ ಬೆನ್ನಲ್ಲೆ ಹೊಸದಾಗಿ ಜಾತಿ ಗಣತಿಯನ್ನು ನಡೆಸಲು ತೀರ್ಮಾನಿಸಿದೆ. ಒಳ ಮೀಸಲಾತಿ ಗಣತಿ ಈಗಾಗಲೇ ಬಹುತೇಕ ಮುಗಿಯುವ ಹಂತದಲ್ಲಿ ಇರುವುದರಿಂದ ಮೊದಲು ಒಳ ಮೀಸಲಾತಿಯನ್ನು ನೀಡಿದ ಬಳಿಕ ಜಾತಿಗಣತಿಯನ್ನು ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ಬಾಬು ಜಗಜೀವನ್‌ ರಾಂ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಎನ್.ವೆಂಕಟೇಶ್‌, ಪ್ರೊ.ಕೆ.ದೊರೈರಾಜು ಅವರನ್ನು ಸನ್ಮಾನಿಸಲಾಯಿತು. 

ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಕೆಂಚಮಾರಯ್ಯ, ನಗರಸಭಾ ಮಾಜಿ ಅಧ್ಯಕ್ಷ ವಾಲೆಚಂದ್ರಯ್ಯ, ನಗರಸಭೆ ಮಾಜಿ ಸದಸ್ಯ ನರಸೀಯಪ್ಪ, ಹನುಮಂತರಾಯಪ್ಪ, ಟೂಡಾ ಮಾಜಿ ಸದಸ್ಯ ಜಯಮೂರ್ತಿ, ಜಿ.ಪಂ.ಸಿಎಒ ನರಸಿಂಹಮೂರ್ತಿ, ಹೋರಾಟಗಾರ ನರಸಿಂಹಯ್ಯ, ನಾಗಾರ್ಜುನ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಶಿವನಂಜಪ್ಪ ಸೇರಿದಂತೆ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X