ತುಮಕೂರು | ಆತ್ಮಕಥೆ ಆತ್ಮರತಿಯಾಗಬಾರದು : ಹಿರಿಯ ಸಾಹಿತಿ ಪ್ರೊ. ಎಸ್. ಜಿ. ಸಿದ್ದರಾಮಯ್ಯ

Date:

Advertisements

“ನಮ್ಮನ್ನು ನಾವು ಜಗತ್ತಿಗೆ ತೆರೆದಿಡುವ ನೈತಿಕ ಕ್ರಮವೇ ಆತ್ಮಕಥೆಯಾದ್ದರಿಂದ, ಆತ್ಮವಿಮರ್ಶೆಯ ಮುಖೇನ ಆತ್ಮಕಥೆಯನ್ನು ರಚಿಸಬೇಕೇ ಹೊರತು ಆತ್ಮರತಿಯಾಗಬಾರದು” ಎಂದು ಕನ್ನಡದ ಹಿರಿಯ ಸಾಹಿತಿ ಪ್ರೊ. ಎಸ್. ಜಿ. ಸಿದ್ದರಾಮಯ್ಯ ಹೇಳಿದರು.

ತುಮಕೂರು ವಿವಿಯ ಡಿವಿಜಿ ಕನ್ನಡ ಅಧ್ಯಯನ ಕೇಂದ್ರವು ಮಂಗಳವಾರ ಆಯೋಜಿಸಿದ್ದ ಪ್ರೊ. ಎಸ್. ಜಿ. ಸಿದ್ದರಾಮಯ್ಯ ಅವರ ಆತ್ಮಕಥನ ‘ಯರೆಬೇವು’ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಆತ್ಮಕಥೆಗಳು ಸಮಾಜದ ಏಣಿ ಶ್ರೇಣಿಗಳು, ಅವಮಾನಗಳು, ದುಗುಡ-ದುಮ್ಮಾನಗಳ ಜೊತೆಗೆ ಆ ಕಾಲಘಟ್ಟದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಿನ್ನೆಲೆಗಳ ಕೈಗನ್ನಡಿಯಾಗಿವೆ. ಬಾಳಕಥನ ಎಂಬುದು ರೂಪಕವಿದ್ದಂತೆ. ಪಾರದರ್ಶಕತೆಯಿಂದ ಕೂಡಿದ ಆತ್ಮಕಥೆ ಮಾತ್ರ ಶ್ರೇಷ್ಠವಾದದ್ದು” ಎಂದರು.

Advertisements

“ಹಿರಿಯ ಸಾಹಿತಿಗಳಾದ ಪಿ. ಲಂಕೇಶ್, ಗಿರೀಶ್ ಕಾರ್ನಾಡ್, ಶ್ಯಾಮರಾಯರು, ಕುವೆಂಪು, ಶಿವರಾಮ ಕಾರಂತರ ಆತ್ಮಕಥೆಗಳು ನೈಜಭಾವವನ್ನು ಹೊಂದಿವೆ. ಬರೆಹಕ್ಕೆ ವಸ್ತುವಾಗುವಂತೆ ಬದುಕಬೇಕೆಂಬ ಪರಿಕಲ್ಪನೆಯಲ್ಲಿ ಅನೇಕ ಮಹಿಳಾ ಸಾಹಿತಿಗಳ ಉತ್ಕೃಷ್ಟ ಆತ್ಮಕಥಾನಕಗಳು ಕೂಡ ಬಂದಿವೆ. ಸಾಲು ಮರದ ತಿಮ್ಮಕ್ಕ, ಮಾಟಗಾನಹಟ್ಟಿಯ ದಾಸಪ್ಪನಂತಹ ಅದೆಷ್ಟೋ ಅನಾಮಧೇಯ ಆತ್ಮಕಥೆಗಳನ್ನು ನಾವಿಂದು ಕಟ್ಟಬೇಕಿದೆ” ಎಂದರು.

“ನಮ್ಮ ಪುರಾಣಗಳಲ್ಲಿ ಬರುವ ಮಹಿಳಾ ಪಾತ್ರಗಳಾದ ಸೀತೆ, ಉರ್ಮಿಳಾ, ಶಾಂತ, ಅಂಬೆ, ಅಂಬಿಕೆ, ಅಂಬಾಲಿಕೆ, ಕುಂತಿ, ಭಾನುಮತಿಯರು ಆತ್ಮಕಥನವನ್ನು ಒಂದು ವೇಳೆ ಬರೆದಿದ್ದಿದ್ದರೆ ಅವರ ತುಡಿತ-ಮಿಡಿತಗಳು, ಆ ಕಾಲಘಟ್ಟದ ಸತ್ಯ ಕಥೆಗಳನ್ನು ಬಿಚ್ಚಿಡುತ್ತಿದ್ದವು. ಆದ್ದರಿಂದ ವಿದ್ಯಾರ್ಥಿಗಳು ಆತ್ಮಕತೆಗಳಲ್ಲಿನ ಸೂಕ್ಷ್ಮತೆಯನ್ನು ಗ್ರಹಿಸುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು” ಎಂದು ಪ್ರೊ. ಎಸ್. ಜಿ. ಸಿದ್ದರಾಮಯ್ಯ ಸಲಹೆ ನೀಡಿದರು.

“ಯರೆಬೇವು ಆತ್ಮಕಥೆಯು ನನ್ನ ಕಾಲಘಟ್ಟದ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಹಿನ್ನೆಲೆಯನ್ನು ಕಟ್ಟಿಕೊಡುತ್ತದೆ. ಬಾಲ್ಯದ ಗೆಳೆಯರ ಅನುಭವ, ಗ್ರಾಮೀಣ ಸೊಗಡಿನ ಚಿತ್ರಣಗಳನ್ನು ಕಟ್ಟಿಕೊಡುತ್ತದೆ” ಎಂದು ತಿಳಿಸಿದರು.

ತುಮಕೂರು ವಿವಿಯ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಮಾತನಾಡಿ, “ಪದವಿಯ ಜೊತೆಗೆ ಸಾಹಿತ್ಯ ಜ್ಞಾನವಿದ್ದಾಗ ಸಮಾಜಮುಖಿ ಕಾರ್ಯಗಳಲ್ಲಿ ಆಸಕ್ತಿ ಬೆಳೆಯುತ್ತದೆ. ಉತ್ತಮ ಆಲೋಚನೆಗಳು, ಚಿಂತನೆಗಳು ಸ್ಫುಟಿಸಬೇಕಾದರೆ ಸುತ್ತಲಿನ ಪರಿಸರ ಕೂಡ ಸಹಕರಿಸಬೇಕು” ಎಂದು ಹೇಳಿದರು.

ಡಿವಿಜಿ ಕನ್ನಡ ಅಧ್ಯಯನ ಕೇಂದ್ರದ ಅಧ್ಯಕ್ಷ ಪ್ರೊ. ನಿತ್ಯಾನಂದ ಬಿ. ಶೆಟ್ಟಿ ಮಾತನಾಡಿ, “ವಿದ್ಯಾರ್ಥಿಗಳಿಗೆ ಸಮಾಜದ ಸಮಸ್ಯೆಗಳ ಕುರಿತು ಬರೆಯಬೇಕೆಂಬ ತುಡಿತವಿರುತ್ತದೆ. ಅವರ ಬರೆಹಗಳನ್ನು ಸರಿಯಾದ ಕ್ರಮದಲ್ಲಿ ಸೇರಿಸಿ, ಸಮಗ್ರವಾಗಿಸುವ ಕಲ್ಪನೆಯನ್ನು ಆತ್ಮಕಥೆಗಳು ನೀಡುತ್ತವೆ” ಎಂದರು.

ವಿವಿಯ ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರಸನ್ನ ಕುಮಾರ್ ಕೆ. ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

Download Eedina App Android / iOS

X