ತುಮಕೂರು | ಜಿಲ್ಲಾ ಆಸ್ಪತ್ರೆ ಖಾಸಗಿಕರಣ ಕೈಬಿಡಲು ಪ್ರಗತಿಪರ ಸಂಘಟನೆಗಳ ಒತ್ತಾಯ

Date:

 ತುಮಕೂರು ನಗರದ  ಸುಧಾ ಟೀ ಹೌಸ್‌ನಲ್ಲಿ ಜಿಲ್ಲೆಯ ಪ್ರಗತಿಪರ,ದಲಿತ, ಮಹಿಳಾ ಮತ್ತು ಜೀವಪರ ಸಂಘ ಸಂಸ್ಥೆಗಳು ಹಾಗೂ ಸಾರ್ವತ್ರಿಕ ಆರೋಗ್ಯ ಆಂದೋಲನ ಕರ್ನಾಟಕದ ಸಂಯುಕ್ತಾಶ್ರಯದಲ್ಲಿ ತುಮಕೂರು ಜಿಲ್ಲಾ ಆಸ್ಪತ್ರೆ ಖಾಸಗೀಕರಣ ಮಾಡುತ್ತಿರುವ ನಿಲುವು ಖಂಡಿಸಿ ಕೆ.ದೊರೈರಾಜ್ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಸಮಾಲೋಚನಾ ಸಭೆಯಲ್ಲಿ ಜಿಲ್ಲಾಸ್ಪತ್ರೆಯನ್ನು ಖಾಸಗೀಕರಣ ಮಾಡುವ ಪಿಪಿಪಿ ಮಾದರಿಯನ್ನು ಕೈಬಿಡಲು ಆಗ್ರಹಿಸಿ ಹೋರಾಟ ಸಮಿತಿ ರಚಿಸಿ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿಕ್ಕೆ ಆಗ್ರಹಿಸುವುದು ಸೇರದಂತೆ ಮುಖ್ಯಮಂತ್ರಿಗಳಿಗೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಎಲ್ಲಾ ಪ್ರಗತಿಪರ ಸಂಘಟನೆಗಳಿಂದ ಮನವಿ ನೀಡಲು ಸಭೆಯಲ್ಲಿ ತೀರ್ಮಾನಿಸಿ ಗ್ರಾಮೀಣ ಮತ್ತು ನಗರ ಪ್ರದೇಶಗಳ ಸ್ಲಂಗಳಲ್ಲಿ ಆರೋಗ್ಯ ವ್ಯವಸ್ಥೆಯನ್ನು ಬಲಿಷ್ಠಗೊಳಿಸಲು ಆಗ್ರಹಿಸಲಾಯಿತು. 

- Advertisement -

ಸಾರ್ವತ್ರಿಕ ಆರೋಗ್ಯ ಆಂದೋಲನ ಕರ್ನಾಟಕದ ಸಂಚಾಲಕರಾದ ಪ್ರಸನ್ನ ಸಾಲಿಗ್ರಾಮ ಮಾತನಾಡಿ ವಿಶ್ವಸಂಸ್ಥೆ ಐಎಮ್‌ಎಫ್ ಹಿತಾಸಕ್ತಿ ಮೇಲೆ ಖಾಸಗೀಕರಣವೆನ್ನುವುದು ಪರಿಚಯವಾಗಿದೆ, ಸರ್ಕಾರಿ ವ್ಯವಸ್ಥೆಯನ್ನು ಖಾಸಗೀಯವರಿಗೆ ನೀಡಿ ಸರ್ಕಾರಿ ಸೇವಾ ನಿರತ ವ್ಯವಸ್ಥೆಯನ್ನು ಖಾಸಗೀ ಬಂಡವಾಳ ಶಾಹಿಗಳಿಗೆ ನೀಡಲಾಗುತ್ತಿದೆ, ಇದಕ್ಕೆ ಸರ್ಕಾರಗಳೂ ಸಹ ಕುಮ್ಮಕ್ಕು ನೀಡುತ್ತಿದ್ದು ಸಂವಿಧಾನ ವಿರೋಧಿಯ ಹುನ್ನಾರಗಳಿಗೆ ಸರ್ಕಾರಗಳೇ ಬಲಿಯಾಗುತ್ತಿರುವುದು ವಿಪರ್ಯಾಸವಾಗಿದೆ, ಖಾಸಗೀಕರಣದ ವ್ಯಾಮೋಹಕ್ಕೆ ಒಳಗಾಗಿ ಸರ್ಕಾರಗಳು ತಮ್ಮ ಹೊಣೆಗಾರಿಕೆ ಮತ್ತು ಉತ್ತರಾಯಿತ್ವದಿಂದ ನುಣಿಚಿಕೊಳ್ಳುತ್ತಿವೆ. ಇಡೀ ಖಾಸಗೀ ವ್ಯವಸ್ಥೆ ಲಾಭ ಮಾಡುವುದನ್ನು ಬಿಟ್ಟರೇ ಜನರಿಗೆ ಸೇವೆ ನೀಡುವ ಉದ್ದೇಶವಿರುವುದಿಲ್ಲ, ಹಾಗಾಗಿ ಎಲ್ಲಿ ಆರೋಗ್ಯದ ಹಕ್ಕಿಗಾಗಿ ರಾಜಕೀಯ ಹೋರಾಟ ಇರುತ್ತದೆಯೇ ಅಲ್ಲಿ ಸರ್ಕಾರಿ ವ್ಯವಸ್ಥೆ ಇರುತ್ತದೆ. ಎಲ್ಲಿ ವಿರೋಧ ಇರುವುದಿಲ್ಲವೋ ಅಲ್ಲಿ ಖಾಸಗೀಕರಣವನ್ನು ಅಳವಡಿಸಿಕೊಳ್ಳಲಾಗುತ್ತಿದೆ ಎಂದು ಹೇಳಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕರ್ನಾಟಕ ಸರ್ಕಾರವು ಪ್ರಸ್ತುತ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಹೊಂದಿರದ 11 ಜಿಲ್ಲೆಗಳ ಸರ್ಕಾರಿ ಆಸ್ಪತ್ರೆಗಳನ್ನು ಸಾರ್ವಜನಿಕ-ಖಾಸಗಿ-ಸಹಭಾಗಿತ್ವ(ಪಿಪಿಪಿ) ಮಾದರಿಯಲ್ಲಿ 11 ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಯೋಚಿಸುತ್ತಿದೆ. ತುಮಕೂರು, ದಾವಣಗೆರೆ, ಚಿತ್ರದುರ್ಗ, ಬಾಗಲಕೋಟೆ, ಕೋಲಾರ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ವಿಜಯಪುರ, ವಿಜಯನಗರ, ಮತ್ತು ರಾಮನಗರ ಜಿಲ್ಲೆಗಳು ಈ ಪಟ್ಟಿಯಲ್ಲಿದ್ದು 2019ರಲ್ಲಿ ಕೇಂದ್ರ ನೀತಿ ಆಯೋಗದ ಶಿಫಾರಸ್ಸು ಮತ್ತು ಮಾರ್ಗದರ್ಶಿ ತತ್ವಗಳ ಹಿನ್ನಲೆಯಲ್ಲಿ ಸರ್ಕಾರಿ ಆರೋಗ್ಯ ವ್ಯವಸ್ಥೆಗೆ ಸಂಪನ್ಮೂಲಗಳು ಮತ್ತು ಹಣಕಾಸಿನ ಕ್ರೊಡೀಕರಣಕ್ಕಾಗಿ ಖಾಸಗಿ ಸಂಸ್ಥೆಗಳಿಗೆ ಬಿಟ್ಟುಕೊಡುವುದು ದುರದೃಷ್ಠಕರವಾಗಿದೆ ಹಾಗಾಗಿ ತುಮಕೂರು ಜಿಲ್ಲೆಯ ನಾಗರೀಕ ಸಂಘಟನೆಗಳು ಸರ್ಕಾರಿ ಜಿಲ್ಲಾ ಆಸ್ಪತ್ರೆಯನ್ನು ಉಳಿಸಿಕೊಳ್ಳಬೇಕು ಇದರಿಂದ ಬಡವರಿಗೆ, ರೈತರಿಗೆ, ದುರ್ಬಲ ವರ್ಗಗಳು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯಿಂದ ರಕ್ಷಣೆ ಪಡೆಯುತ್ತಾರೆ ಎಂದರು, ಸಾರ್ವತ್ರಿಕ ಆರೋಗ್ಯ ಆಂದೋಲನದ ಪ್ರತಿನಿಧಿಗಳಾದ ಸ್ವಾತಿ, ವೈಶಾಲಿ ಮಾತನಾಡಿ ಕೋಲಾರ, ಬಿಜಾಪುರ ಮತ್ತು ದಾವಣಗೆರೆಯಲ್ಲಿ ಸರ್ಕಾರಿ ಆಸ್ಪತ್ರೆ ಉಳಿಸಲು ಸಂಘ ಸಂಸ್ಥೆಗಳು ಹೋರಾಟ ಮಾಡುತ್ತಿವೆ ಈಗಿನ ಸರ್ಕಾರ ಧ್ವಂದ್ವ ನಿಲುವಿನಲ್ಲಿದೆ ಎಂದರು. 

ಸಭೆಯ ಅಧ್ಯಕ್ಷತೆಯನ್ನು ಹಿರಿಯ ಚಿಂತಕರಾದ ಕೆ.ದೊರೈರಾಜ್ ವಹಿಸಿದ್ದರು, ಪ್ರಾಸ್ತವಿಕವಾಗಿ ಡಾ.ಕೆ.ಬಿ ಓಬಲೇಶ್ ಮಾತನಾಡಿದರು, ಸ್ವಾಗತ ಮತ್ತು ನಿರೂಪಣೆಯನ್ನು ಎ.ನರಸಿಂಹಮೂರ್ತಿ ನೆರವೇರಿಸಿದರು, ವಿವಿಧ ಸಂಘಟನೆಗಳ ಮುಖಂಡರಾದ ಸಿ.ಯತಿರಾಜು, ಬಿ.ಉಮೇಶ್, ಪಂಡಿತ್‌ಜವಾಹರ್, ಡಾ.ವೈಕೆ ಬಾಲಕೃಷ್ಣಪ್ಪ, ಶಿರಾದ ಟೈರ್ ರಂಗನಾಥ್, ಕೊರಟಗೆರೆಯ ಸಿದ್ದಲಿಂಗಸ್ವಾಮಿ, ಎನ್.ಕೆ ಸುಬ್ರಮಣ್ಯ, ಅನುಪಮಾ, ಕಲ್ಯಾಣಿ, ನಟರಾಜಪ್ಪ, ಅಜ್ಜಪ್ಪ, ಸೈಯದ್ ಅಲ್ತಾಫ್, ಅರುಣ್, ತಿರುಮಲಯ್ಯ, ಸಿದ್ದಲಿಂಗಯ್ಯ, ಕೃಷ್ಣಮೂರ್ತಿ, ಬಿಎಸ್‌ಪಿಯ ಜಿಲ್ಲಾಧ್ಯಕ್ಷರಾದ ಆಂಜಿನಪ್ಪ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡು ಒಕ್ಕೋರಲಿನಿಂದ ತುಮಕೂರು ಜಿಲ್ಲಾಸ್ಪತ್ರೆಯನ್ನು ಖಾಸಗೀಕರಣ ಪಿಪಿಪಿ ಮಾದರಿಯಿಂದ ಕೈಬಿಡಲು ಆಗ್ರಹಿಸಿದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...