ತುಮಕೂರು | ಪರಿಸರ ಉಳಿಸುವ ವಾಗ್ದಾನ ಪಕ್ಷಗಳ ಪ್ರಣಾಳಿಕೆ ಸೇರಲಿ: ಡಾ. ವಾಸು

Date:

ಆರೋಗ್ಯ ರಕ್ಷಣೆ ವ್ಯಕ್ತಿಗತವಾಗಿ ಉಳಿದಿಲ್ಲ. ಹಾಗಾಗಿ ವಾಯುಗುಣ ವೈಪರೀತ್ಯ ಮತ್ತು ಆರೋಗ್ಯದ ಕುರಿತ ಸರ್ಕಾರಗಳ ನೀತಿ, ನಿರೂಪಣೆಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗಬೇಕಿದೆ ಎಂದು ಜಾಗೃತ ಕರ್ನಾಟಕದ ಡಾ ಎಚ್ ವಿ ವಾಸು ಹೇಳಿದರು.

ತುಮಕೂರು ನಗರದ ಐಎಂಎ ಸಭಾಗಂಣದಲ್ಲಿ ಗಾಂಧೀ ಸಹಜ ಬೇಸಾಯ ಆಶ್ರಮ, ಭಾರತೀಯ ವೈದ್ಯಕೀಯ ಸಂಘ, ತುಮಕೂರು ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘ ಸಂಯುಕ್ತ ಆಶ್ರಯದಲ್ಲಿ ‘ವಾಯುಗುಣ ವೈಪರಿತ್ಯ ಕೃಷಿ ಸವಾಲುಗಳು, ಸಮಸ್ಯೆಗಳು ಹಾಗೂ ಮಾಲಿಕೆಯ 4ನೇ ಸಮಾಲೋಚನಾ ಕಾರ್ಯಾಗಾರ ಮತ್ತು ‘ವಾಯುಗುಣ ವೈಪರೀತ್ಯ ಹಾಗೂ ಆರೋಗ್ಯ (ಕಾಪ್) (ಸಿಓಪಿ-28) ಘೋಷಣೆ’ ವಿಷಯ ಕುರಿತು ನಡೆದ ಸಭೆಯಲ್ಲಿ ಮಾತನಾಡಿದರು.

“ಪರಿಸರ ಉಳಿಸುವ ವಾಗ್ದಾನ ರಾಜಕೀಯ ಪಕ್ಷಗಳ ಪ್ರಣಾಳಿಕೆ ಸೇರುವಂತಾಗಬೇಕು. ಪರಿಸರ ಮತ್ತು ಆರೋಗ್ಯ ಕುರಿತು ತರಬೇಕಾದ ಯೋಜನೆ ಕುರಿತು ಸಾರ್ವಜನಿಕ ವಲಯದಲ್ಲಿ ಚರ್ಚೆ ನಡೆಯುವಂತೆ ಮಾಡಬೇಕು. ಭೂಮಿ ಕೇವಲ ಮನುಷ್ಯರಿಗೆ ಸೇರಿದಲ್ಲ, ಸಕಲ ಜೀವ ಚರಾಚರಗಳಿಗೆ ಸೇರಿದ್ದು ಎಂಬುದನ್ನು ಮನಗಾಣಬೇಕಿದೆ. ಮರ ಕತ್ತರಿಸಿದರೆ ಜಿಡಿಪಿ ಏರುತ್ತದೆ ಎಂಬ ಲಾಭ ಕೋರತನದ ಲೆಕ್ಕಚಾರ ಹವಾಮಾನ ವೈಪರಿತ್ಯಕ್ಕೆ ಕಾರಣವಾಗಿದೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕೋವಿಡ್ ಸಂದರ್ಭದಲ್ಲಿ ಸಮುದಾಯ ಆರೋಗ್ಯದ ಮಹತ್ವ ಜಗತ್ತಿಗೆ ಅರಿವಾಗಿದೆ. ಆದರೆ ಹೆಚ್ಚು ಆದಾಯದ ಹಿಂದೆ ಬಿದ್ದು ಇಂತಹ ವಿಷಯವನ್ನು ಅಧ್ಯಯನ ಮಾಡಲು ಆಯ್ಕೆ ಮಾಡಿಕೊಳ್ಳದ ದುಃಸ್ಥಿಯಲ್ಲಿದ್ದೇವೆ” ಎಂದು ಹೇಳಿದರು.

“ನಮ್ಮ ಸುತ್ತಮುತ್ತಲಿನ ವತಾವರಣ ಹೇಗಿರುತ್ತದೆ ಎನ್ನುವುದರ ಮೇಲೆ ನಮ್ಮ ಆರೋಗ್ಯ ನಿರ್ಧಾರವಾಗುತ್ತದೆ. ಈ ಬಗ್ಗೆ ಸರ್ಕಾರಗಳು ಹೆಚ್ಚಿನ ಗಮನ ಹರಿಸಬೇಕು. ಮನುಷ್ಯನಿಗೆ ಬಂದಿರುವ ಖಾಯಿಲೆಗಳಲ್ಲಿ ಹೆಚ್ಚಿನ ಪಾಲು ಪ್ರಾಣಿಗಳಿಂದಲೇ ಬಂದಂತಹವು. ಈ ಹಿನ್ನೆಲೆಯಲ್ಲಿ ಪರಿಸರದ ಆರೋಗ್ಯವೂ ಮಖ್ಯವಾಗುತ್ತದೆ” ಎಂದರು.

ಪರಿಸರವಾದಿ ಸಿ ಯತಿರಾಜು ಮಾತನಾಡಿ, “ಜಗತ್ತಿನ 50 ಮಾಲಿನ್ಯಯುಕ್ತ ನಗರಗಳ ಸಾಲಿನಲ್ಲಿರುವ 30 ನಗರಗಳು ಭಾರತದಲ್ಲಿಯೇ ಇವೆ. ಜಗತ್ತಿನಲ್ಲಿ ಶೇ.46ರಷ್ಟು ನದಿಗಳು ಮಾಲಿನ್ಯಗೊಂಡಿವೆ. 1.6 ಮಿಲಿಯನ್ ಜನರು ಪರಿಶುದ್ಧ ಗಾಳಿಯ ಕೊರತೆಯಿಂದ ಸಾವನ್ನಪ್ಪುತ್ತಿದ್ದಾರೆ. ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಕಾಪ್ (ಸಿಓಪಿ-28) ನಿರ್ಣಯಗಳಿಗೆ ಭಾರತ ಸಹಿ ಹಾಕಬೇಕು” ಎಂದು ಒತ್ತಾಯಿಸಿದರು.

“ಅತಿ ಹೆಚ್ಚಿನ ಪ್ರಮಾಣದಲ್ಲಿ ಹವಾಮಾನ ವೈಪರೀತ್ಯಕ್ಕೆ ತುತ್ತಾಗಿರುವ ದೇಶಗಳ ಪಟ್ಟಿಯಲ್ಲಿ ಭಾರತ 7ನೇ ಸ್ಥಾನದಲ್ಲಿದೆ. ಆರೋಗ್ಯ ಸೇವೆಗಳು ಶೇ.70ರಷ್ಟು ನಗರ ಕೇಂದ್ರಿತವಾಗಿವೆ. ನಮ್ಮಲ್ಲಿ ಜೀವ ವೈವಿಧ್ಯತೆಗೆ ಅನುಗುಣವಾಗಿ ಭೂಮಿಯಿಲ್ಲ. ಬಂಡವಾಳಶಾಹಿಗಳ ವ್ಯಾಪಾರಕ್ಕೆ ಅನುಕೂಲವಾಗುವಂತೆ ಪರಿಸರ ಸಂಬಂಧಿ ಕಾನೂನುಗಳನ್ನು ದುರ್ಬಲಗೊಳಿಸಲಾಗುತ್ತಿದೆ. ನಾವು ಪ್ರತೀ ಸಮಸ್ಯೆಗಳಿಗೆ ವೈಯಕ್ತಿಕ ನೆಲೆಯಲ್ಲಿ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತೇವೆ. ಆದರೆ, ಪ್ರಕೃತಿ ಆಧಾರಿತ ಪರಿಹಾರಗಳನ್ನು ಕಂಡುಕೊಳ್ಳುವ ಕಡೆ ಸಾಗಬೇಕಿದೆ” ಎಂದು ತಿಳಿಸಿದರು.

“ಕಾಪ್ (ಸಿಓಪಿ-28) ನಿರ್ಣಯಗಳಿಗೆ ಭಾರತ ಸಹಿ ಹಾಕಬೇಕು. ಪ್ರಕೃತಿ ದತ್ತವಾದ ಬದುಕಿನ ಕಡೆಗೆ ಸಾಗಬೇಕು, ಇದಕ್ಕೆ ಸರ್ಕಾರ ಒತ್ತು ನೀಡಬೇಕು. ಈ ರೀತಿಯ ಕಾರ್ಯಾಗಾರಗಳನ್ನು ಗ್ರಾಮೀಣ ಭಾಗಕ್ಕೆ ಕೊಂಡೊಯ್ಯಬೇಕು. ಗ್ರಾಮೀಣ ಭಾಗದಲ್ಲಿರುವ ವೈದ್ಯಕೀಯ ಸೇವೆಗಳನ್ನು ಸುಧಾರಿಸಬೇಕು” ಎಂಬ ನಿರ್ಣಯಗಳನ್ನು ಕೈಗೊಂಡರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅಸ್ಪೃಶ್ಯತಾ ನಿವಾರಣಾ ಜಾಗೃತಿ ಕಲಾ ಜಾಥಾ

ಕಾರ್ಯಕ್ರಮದಲ್ಲಿ ಭಾರತೀಯ ವೈದ್ಯಕೀಯ ಸಂಘದ ಕಾರ್ಯದರ್ಶಿ ಡಾ. ಮಹೇಶ್, ಔಷಧಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಎನ್ ಎಸ್ ಅನಂತ್, ಔಷಧ ವ್ಯಾಪಾರಿಗಳ ಸಂಘದ ಕಾರ್ಯದರ್ಶಿ ಎನ್ ಎಸ್ ಪಂಡಿತ್ ಜವಾಹರ್, ಗಾಂಧಿ ಸಹಬೇಸಾಯ ಆಶ್ರಮದ ಡಾ.ಮಂಜುನಾಥ್, ಡಾ ರಂಗಸ್ವಾಮಿ, ಎನ್ ಎಸ್ ಸ್ವಾಮಿ, ರಾಮಕೃಷ್ಣಪ್ಪ, ಶಿವಲಿಂಗಯ್ಯ, ಡಾ ಗಂಗಾಧರ್, ಪ್ರತಾಪ್, ನಾಗರಾಜ್, ಕೃಷಿಕ ರವೀಶ್, ಕಿಶೋರ್ ಸೇರಿದಂತೆ ಇತರರು ಇದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚೊಂಬು, ಗ್ಯಾಸ್ ಹೊರತುಪಡಿಸಿ ಶಾಂತಿಯುತ ಮತದಾನಕ್ಕೆ ಸಾಕ್ಷಿಯಾದ ಬೆಂಗಳೂರು

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ...

ಕಸ ಸುರಿಯುವ ಜಾಗವಾಗಿ ಮಾರ್ಪಟ್ಟ ಬೆಂಗಳೂರಿನ ಮೇಲ್ಸೇತುವೆಗಳು!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸವಾರರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ....

ರಾಯಚೂರು | ಅಬಕಾರಿ ಇಲಾಖೆ ದಾಳಿ; ₹500 ಮುಖಬೆಲೆಯ ನೋಟಿನ 62 ಬಂಡಲ್ ಪತ್ತೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಳಿಗಲ್ಲಿಯ ಗೌಳಿಯೊಬ್ಬರ ಮನೆಯಲ್ಲಿ ಗೋಣಿ ಚೀಲದ...