ತುಮಕೂರು | ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ವಿರೋಧಿಸಿ ಮೇ 16ರಂದು ಪ್ರತಿಭಟನೆ; ಡಿವೈಎಸ್‌ಪಿ ನೇತೃತ್ವದ ಪೂರ್ವಭಾವಿ ಸಭೆ

Date:

ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಸ್ಥಗಿತಗೊಳಿಸಲು ಇದೇ ತಿಂಗಳ 16ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ವಿರೋಧಿ ಹೋರಾಟ ಸಮಿತಿ ಸದಸ್ಯರೊಂದಿಗೆ ಡಿವೈಎಸ್‌ಪಿ ಶೇಖರ್ ನೇತೃತ್ವದಲ್ಲಿ ಸಭೆ ನಡೆಸಿ ಕಾನೂನಾತ್ಮಕ ಸಲಹೆ ಸೂಚನೆ ನೀಡಿದರು.

- Advertisement -

ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದ ವೃತ್ತ ನಿರೀಕ್ಷಕ ಕಚೇರಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಈ ಪೈಪ್‌ಲೈನ್ ಯೋಜನೆಯ ಆಗು-ಹೋಗುಗಳ ಬಗ್ಗೆ ಹೋರಾಟಗಾರರು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ತುಮಕೂರು ಜಿಲ್ಲೆಗೆ ಹೇಮಾವತಿ ನೀರು ಹಂಚಿಕೆ ಪ್ರಕಾರ 24 ಟಿಎಂಸಿ ನೀರು ನೀಡಲಾಯಿತು. ಈಗ ವಾಮಮಾರ್ಗ ಮೂಲಕ ಮಾಗಡಿಗೆ ತೆಗೆದುಕೊಂಡು ಹೋಗುವುದು ಸರಿಯಲ್ಲ. ಜಿಲ್ಲೆಯ ರೈತರಿಗೆ ಅನ್ಯಾಯ ಮಾಡುವ ಈ ಯೋಜನೆ ಅನುಷ್ಠಾನವೇ ಅಕ್ರಮ. ನೀರಿನ ವಿಚಾರದಲ್ಲಿ ಗುಬ್ಬಿ ತಾಲೂಕಿನ ರೈತರಿಗೆ ಅತಿ ಹೆಚ್ಚು ಅನ್ಯಾಯವಾಗುತ್ತಿದೆ” ಎಂದು ಸಮಿತಿಯ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

“ಪೈಪ್‌ಲೈನ್ ಕಾಮಗಾರಿ ಬಗ್ಗೆ ಕಿಂಚಿತ್ತೂ ಮಾಹಿತಿ ಸಿಕ್ಕಿಲ್ಲ. ಡಿಪಿಆರ್, ಯಾವ ಮಾರ್ಗ, ಯಾವ ರೈತನ ಜಮೀನು, ಭೂಮಿ ವಶದ ಯಾವುದೇ ಪ್ರಕ್ರಿಯೆ ನಡೆಸದೆ ಈಗಾಗಲೇ ಕೆನಾಲ್ ಕೆಲಸ ಆರಂಭಿಸಿರುವುದು ಈ ಭಾಗದ ರೈತರನ್ನು ಹಾಳು ಮಾಡಿ ಅವರು ಮಾಗಡಿ ಕಡೆ ನೀರು ಕೊಂಡೊಯ್ಯುವುದು ಅಕ್ರಮವಾಗಿದೆ. ಈ ಹಿನ್ನಲೆ ನಮ್ಮ ನೀರು ನಮ್ಮ ಹಕ್ಕು, ಹೋರಾಟ ಮಾಡುತ್ತೇವೆ. ಅದು ಕಾನೂನು ಕ್ರಮಬದ್ಧ ಹೋರಾಟ” ಎಂದರು.

“ಗುಬ್ಬಿ ತಾಲೂಕಿನ ಸಾವಿರಾರು ರೈತರಿಗೆ ಅನ್ಯಾಯವಾಗಿರುವ ಈ ಯೋಜನೆಯನ್ನು ಈ ಹಿಂದೆ ಬಿಜೆಪಿ ಸರ್ಕಾರ ರದ್ದು ಮಾಡಿತ್ತು. ಓರ್ವ ಪ್ರಭಾವಿ ಆಣತಿಯಂತೆ ಮರು ಚಾಲನೆಯಾಗಿರುವ ಕಾಮಗಾರಿ ಇಡೀ ಜಿಲ್ಲೆಯ ರೈತರ ಮರಣ ಶಾಸನವಾಗಿದೆ. ಗುಬ್ಬಿ ನಗರಕ್ಕೆ ಕುಡಿಯುವ ನೀರು ಒದಗಿಸುವ ಹೇರೂರು ಕೆರೆಗೆ ಎರಡು ಹಂತದಲ್ಲಿ ನೀರು ನೀಡುತ್ತಿರುವುದೂ ಕೂಡಾ ನಿಂತು ಹೋಗಲಿದೆ. ನೀರಿಗೆ ಹಾಹಾಕಾರ ಉದ್ಭವವಾಗುವ ಮುನ್ನ ಈ ಹೋರಾಟ ಅನಿವಾರ್ಯ. ಚುನಾವಣಾ ನೀತಿ ಸಂಹಿತೆ ಅನುಗುಣವಾಗಿ ಪ್ರತಿಭಟನೆ ನಡೆಯಲಿದೆ” ಎಂದು ಹೋರಾಟಗಾರರು ವಿವರಿಸಿದರು.

“ಜಿಲ್ಲೆಯ ಜನರ ಅಳಿವು ಉಳಿವಿನ ಪ್ರಶ್ನೆಯಾದ ಹೇಮಾವತಿ ಜೀವಜಲ ನಮ್ಮ ಹಕ್ಕು ಎಂಬುದು ಸರ್ಕಾರದ ಗಮನಕ್ಕೆ ಸೆಳೆಯಲಿದ್ದೇವೆ. ಈ ಹೋರಾಟಕ್ಕೆ ರೈತ ಸಂಘ, ವಿವಿಧ ಮಠಾಧೀಶರು, ಪಕ್ಷಾತೀತ ರಾಜಕೀಯ ಮುಖಂಡರು, ಚುನಾಯಿತ ಪ್ರತಿನಿಧಿಗಳು ಆಗಮಿಸಲಿದ್ದಾರೆ” ಎಂದು ಹೇಳಿದರು.

ಎಲ್ಲ ಚರ್ಚೆ ಆಲಿಸಿದ ಡಿವೈಎಸ್‌ಪಿ ಶೇಖರ್ ಮಾತನಾಡಿ, “ನೀತಿ ಸಂಹಿತೆ ಜಾರಿ ಇರುವ ಕಾರಣ ನಿಯಮಾನುಸಾರ ಕ್ರಮಬದ್ಧ ಹೋರಾಟ ನಡೆಸಬೇಕಿದೆ. ಕಾನೂನು ಸುವ್ಯವಸ್ಥೆಯ ಜವಾಬ್ದಾರಿ ಪೊಲೀಸ್ ಇಲಾಖೆ ಮೇಲಿದೆ. ಶಾಂತಿಯುತ ಪ್ರತಿಭಟನೆ ನಡೆಸುವ ಬಗ್ಗೆ ಚರ್ಚೆ ಮಾಡಿದಂತೆ ಕ್ರಮ ಬದ್ಧವಾಗಿ ಹೋರಾಟಕ್ಕೆ ಅನುಮತಿ ಅಗತ್ಯವಿದೆ. ಸಾಧ್ಯವಾದಷ್ಟೂ ಅಧಿಕಾರಿಗಳ ಜೊತೆ ಚರ್ಚಿಸಿ ಬಗೆಹರಿಸಿಕೊಳ್ಳುವ ಪ್ರಯತ್ನ ನಡೆಯಲಿ” ಎಂಬ ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ನೀರು ಪೂರೈಕೆಗೆ ಮೀನಾಮೇಷ; ಅತ್ತನೂರು ಗ್ರಾ. ಪಂಚಾಯಿತಿಗೆ ಮಹಿಳೆಯರಿಂದ ಮುತ್ತಿಗೆ

ಸಭೆಯಲ್ಲಿ ಬಿಜೆಪಿ ಮುಖಂಡ ಎಸ್ ಡಿ ದಿಲೀಪ್ ಕುಮಾರ್, ಜೆಡಿಎಸ್ ಮುಖಂಡ ಜಿ ಎನ್ ಬೆಟ್ಟಸ್ವಾಮಿ, ಬಿಜೆಪಿ ತಾಲೂಕು ಅಧ್ಯಕ್ಷ ಬಿ ಎಸ್ ಪಂಚಾಕ್ಷರಿ, ಜಿಲ್ಲಾ ಉಪಾಧ್ಯಕ್ಷ ಎಚ್ ಟಿ ಭೈರಪ್ಪ, ಸಿ ಆರ್ ಶಂಕರ್ ಕುಮಾರ್, ಪಪಂ ಸದಸ್ಯ ಜಿ ಆರ್ ಶಿವಕುಮಾರ್, ಸಿದ್ದರಾಮಯ್ಯ, ಲೋಕೇಶ್, ಪ್ರಮೋದ್, ಸಿಪಿಐ ಗೋಪಿನಾಥ್, ಗುಬ್ಬಿ ಪಿಎಸ್‌ಐ ಸುನಿಲ್ ಕುಮಾರ್, ಸಿ ಎಸ್ ಪುರ ಪಿಎಸ್‌ಐ ಶಿವಕುಮಾರ್ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...