ತುಮಕೂರು | ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಸೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ

Date:

Advertisements

ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಸೇರಿಸುವಂತೆ ಮತ್ತು ಕಾಡುಗೊಲ್ಲರಿಗೆ ಕಾಡುಗೊಲ್ಲ ಎಂದು ಜಾತಿ ಪ್ರಮಾಣ ಪತ್ರ ನೀಡುವಂತೆ ಒತ್ತಾಯಿಸಿ, ಗುಬ್ಬಿ ಪಟ್ಟಣದ ತಾಲೂಕು ಕಚೇರಿಯ ಮುಂದೆ ಕರ್ನಾಟಕ ರಾಜ್ಯ ಕಾಡುಗೊಲ್ಲರ ಸಂಘ ಒಂದು ದಿನದ ಸಾಂಕೇತಿಕ ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಆರತಿ ಅವರಿಗೆ ಮನವಿ ಪತ್ರ ಸಲ್ಲಿಸಿದೆ.

ಕಾಡುಗೊಲ್ಲರ ಸಂಘದ‌ ತಾಲೂಕು ಅಧ್ಯಕ್ಷ ದೇವರಾಜು ಮಾತನಾಡಿ, ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಿರುವ ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡ ಮೀಸಲು ಪಟ್ಟಿಗೆ ಸೇರಿಸಬೇಕು. ಕಾಡುಗೊಲ್ಲರಿಗೆ ಕಾಡುಗೊಲ್ಲ ಎಂದು ಜಾತಿ ಪ್ರಮಾಣ ಪತ್ರ ನೀಡಬೇಕು. ಕಾಡುಗೋಲ್ಲ ಸಮುದಾಯದ ಗ್ರಾಮಗಳನ್ನು ಕಂದಾಯ ಗ್ರಾಮಗಳೆಂದು ಘೋಷಿಸಬೇಕು ಎಂದು ಒತ್ತಾಯಿಸಿದರು. ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲದೆ ಹೋದರೆ ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಕಾಡುಗೊಲ್ಲರ ಸಂಘದ ತಾಲೂಕು ಕಾರ್ಯಾಧ್ಯಕ್ಷ ಗುಡ್ದದಹಳ್ಳಿ ಬಸವರಾಜು ಮಾತನಾಡಿ, ಶತಮಾನಗಳಿಂದಲೂ ಕಾಡುಗೊಲ್ಲರು ಹೋರಾಟ ಮಾಡುತ್ತಾ ಬಂದಿದ್ದು, ಸರ್ಕಾರ ಕಾಡುಗೊಲ್ಲರಿಗೆ ಯಾವುದೇ ಮನ್ನಣೆ ನೀಡಿಲ್ಲ. ಈ ಹಿಂದಿನ ಸರ್ಕಾರ ನೆಪಮಾತ್ರಕ್ಕೆ ಕಾಡುಗೊಲ್ಲರ ಅಭಿವೃದ್ಧಿ ನಿಗಮ ಸ್ಥಾಪಿಸಿತ್ತು. ಆದರೆ, ಸಮುದಾಯದ ಜನರಿಗೆ ಯಾವುದೇ ಸೌಲಭ್ಯ ದೊರಕಿಲ್ಲ, ಲೋಕಸಭಾ ಚುನಾವಣೆ ಬರುವುದರೂಳಗೆ ಕಾಡುಗೊಲ್ಲರನ್ನು ಎಸ್.ಟಿ. ಪಟ್ಟಿಗೆ ಸೇರಿಸಬೇಕು. ಸರ್ಕಾರ ಕ್ರಮ ಕೈಗೊಳ್ಳದೆ ಹೋದರೆ ಕಾಡುಗೊಲ್ಲರನ್ನು ಸಂಘಟಿಸಿ ವಿಧಾನಸೌಧ ಚಲೋ ಮತ್ತು ದೆಹಲಿ ಚಲೋ ನಡೆಸಿ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಹೇಳಿದರು.

Advertisements

ಜೆಡಿಎಸ್ ತಾಲೂಕು ಅಧ್ಯಕ್ಷ ಚಿಕ್ಕವೀರಯ್ಯ ಮಾತನಾಡಿ ಕಾಡುಗೂಲ್ಲ ಸಮುದಾಯವನ್ನು ರಾಜಕೀಯವಾಗಿ ಬಳಸಿಕೊಳ್ಳದಕ್ಕೆ ಸೀಮಿತಗೊಳಿಸದೆ ನ್ಯಾಯಯುತವಾಗಿ ಕಾಡುಗೊಲ್ಲ ಸಮುದಾಯಕ್ಕೆ ಎಸ್‌ಟಿ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕಾಡುಗೂಲ್ಲ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಈರಣ್ಣ, ಯರಪ್ಪ, ತಿಮ್ಮಯ್ಯ, ಚಿಕ್ಕವೀರಯ್ಯ ಕಕ್ಕೆನಹಳ್ಳಿ ಮಂಜಣ್ಣ, ಉಮೇಶ್, ಸದಾಶಿವು, ಮಹಾಲಿಂಗಯ್ಯ, ಶ್ರೀನಿವಾಸ್, ತೀರ್ಥಪ್ರಸಾದ್, ಸಮುದಾಯದ ನೂರಾರು ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X