ತುಮಕೂರು | ಸರ್ಕಾರಿ ಇಲಾಖೆಗಳಲ್ಲಿ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ

Date:

ಸರ್ಕಾರದ ವಿವಿಧ ಇಲಾಖೆಗಳಲ್ಲಿ ನೇಮಕಾತಿ ಹಾಗೂ ನೇಮಕಾತಿಗೆ ವಯೋಮಿತಿ ಹೆಚ್ಚಿಸುವಂತೆ ಆಗ್ರಹಿಸಿ ಜಿಲ್ಲಾ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳ ಹೋರಾಟ ಸಮಿತಿ ವತಿಯಿಂದ ತುಮಕೂರು ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

- Advertisement -

ತುಮಕೂರು ನಗರದ ಟೌನ್‌ಹಾಲ್ ವೃತ್ತದಲ್ಲಿ ಸಮಾವೇಶಗೊಂಡ ಸಮಿತಿಯ ಪದಾಧಿಕಾರಿಗಳು ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ತಲುಪಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಿ, ಶೀಘ್ರವಾಗಿ ಸರ್ಕಾರಿ ಇಲಾಖೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು. ವಯೋಮಿತಿ ಹೆಚ್ಚಿಸಬೇಕು. ಕೆಇಎ ಹಾಗೂ ಕೆಪಿಎಸ್ಸಿ ಶುಲ್ಕ ಕಡಿಮೆ ಮಾಡಬೇಕು ಎಂಬ ಬೇಡಿಕೆಗಳನ್ನು ಸಚಿವರ ಮುಂದಿಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ರಾಜ್ಯದ ವಿವಿಧ ಇಲಾಖೆಗಳಲ್ಲಿ ಮತ್ತು ಪೊಲೀಸ್ ಇಲಾಖೆಯಲ್ಲಿ ಕಾನ್‌ಸ್ಟೇಬಲ್, ಪಿಎಸ್‌ಐ ಸೇರಿದಂತೆ ಹಲವು ಹುದ್ದೆಗಳಿಗೆ ವಯೋಮಿತಿ ಹೆಚ್ಚಿಸಿ ನೇಮಕಾತಿ ಆರಂಭಿಸುವಂತೆ ಸಮಿತಿಯ ಪ್ರತಿಭಟನಾನಿರತರು ಒತ್ತಾಯಿಸಿದರು.

1002182183

ಹಲವು ವರ್ಷಗಳು ಕಳೆದರೂ ಈವರೆಗೆ ಯಾವುದೇ ನೇಮಕಾತಿ ಆಗದೇ ಲಕ್ಷಾಂತರ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಶಿಕ್ಷಣ ಇಲಾಖೆಯಲ್ಲಿ ನೇಮಕಾತಿಯಾಗದೇ ಶಿಕ್ಷಕರ ಕೊರತೆ ಎದ್ದು ಕಾಣುತ್ತಿದೆ. ಏಳೆಂಟು ವರ್ಷಗಳಿಂದ ಎಫ್‌ಡಿಎ, ಎಸ್‌ಡಿಎ, ಪಶು ವೈದ್ಯರು, ಭೂ ಸರ್ವೇ ಸೇರಿದಂತೆ ಬಹುತೇಕ 40ಕ್ಕೂ ಅಧಿಕ ಇಲಾಖೆಗಳಲ್ಲಿ ಸುಮಾರು 2.80 ಲಕ್ಷ ಸಾವಿರ ಹುದ್ದೆಗಳು ಖಾಲಿ ಇದ್ದರೂ ನೇಮಕಾತಿ ಮಾಡಿಲ್ಲ. ಆದ್ದರಿಂದ ಕೂಡಲೇ ರಾಜ್ಯ ಸರ್ಕಾರ ಸರ್ಕಾರಿ ಇಲಾಖೆಗಳಲ್ಲಿ ನೇಮಕಾತಿಯನ್ನು ಶೀಘ್ರವಾಗಿ ಆರಂಭಿಸುವ ಮೂಲಕ ನಿರುದ್ಯೋಗ ಸಮಸ್ಯೆಗಳನ್ನು ನಿವಾರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ಬಾರಿ ನಡೆಸಿದ ಕೆಎಎಸ್ ಪರೀಕ್ಷೆಯಲ್ಲಿ ಕನ್ನಡ ಭಾಷೆಯ ಅನುವಾದದಲ್ಲಿ ಸಾಕಷ್ಟು ತಪ್ಪುಗಳಿದ್ದು, ಅಭ್ಯರ್ಥಿಗಳು ಗೊಂದಲಕ್ಕೀಡಾಗಿದ್ದರು. ಆದ್ದರಿಂದ ಈ ಪರೀಕ್ಷೆಯನ್ನು ರದ್ದುಪಡಿಸಿ ಹೊಸ ಅಧಿಸೂಚನೆ ಹೊರಡಿಸಬೇಕು ಎಂದು ಒತ್ತಾಯಿಸಿದರು.

ಸರ್ಕಾರದ ಅನೇಕ ಇಲಾಖೆಗಳಲ್ಲಿ ಹುದ್ದೆಗಳು ಖಾಲಿ ಇದ್ದರೂ ನೇಮಕಾತಿ ಆಗದ ಕಾರಣ ಸಾವಿರಾರು ವಿದ್ಯಾರ್ಥಿಗಳು ವಯೋಮಿತಿ ಮೀರಿದೆ. ವಯೋಮಿತಿ ಕನಿಷ್ಠ 5 ವರ್ಷ ಸಡಿಲಿಕೆ ಮಾಡಿ ತಕ್ಷಣ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು ಎಂದು ಪ್ರತಿಭಟನಾನಿರತರು ಸಚಿವ ಡಾ. ಜಿ. ಪರಮೇಶ್ವರ್ ರವರಿಗೆ ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಸುನೀಲ್, ಮಲ್ಲಿಕಾರ್ಜುನ್ ಕೊರವರ್ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ತುಮಕೂರು | ರೈತರ ಸಂಕಷ್ಟಕ್ಕೆ ಸ್ಪಂದಿಸಿ : ವೈಜ್ಞಾನಿಕ ಬರ ಪರಿಹಾರಕ್ಕೆ ಆಗ್ರಹ

ಭೀಕರ ಬರಗಾಲದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರೂ ಕೇಂದ್ರ ಮತ್ತು ರಾಜ್ಯ...

ತುಮಕೂರು | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ಪಡೆಯಬೇಕು ಹಾಗೂ ಇದುವರೆಗೆ...