ತುಮಕೂರು | ನಿವೇಶನ-ಹಕ್ಕುಪತ್ರದ ಹಕ್ಕಿಗಾಗಿ ಹೋರಾಟ; ನಾಲ್ಕನೇ ದಿನಕ್ಕೆ ಕಾಲಿಟ್ಟ ಧರಣಿ

Date:

ತುಮಕೂರು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ವಾಸಿಸುತ್ತಿರುವ ಹಂದಿ ಜೋಗಿ ಸಮುದಾಯ, ಅಲ್ಪಸಂಖ್ಯಾತರು ಮತ್ತು ದಲಿತ ಸಮುದಾಯ ಸೇರಿದಂತೆ ಹಲವು ಜಾತಿ-ಜನಾಂಗದ ಜನರು ಸ್ವಂತ ನಿವೇಶನ ಹಾಗೂ ಭೂಮಿ ಹಕ್ಕು ಪತ್ರಗಳಿಲ್ಲದೆ ನಿರ್ಗತಿಕಾರಾಗಿ ಜೀವನ ನಡೆಸುತ್ತಿದ್ದಾರೆ. ಅವರೆಲ್ಲರಿಗೂ ನಿವೇಶನ ಹಂಚಿಕೆ ಮಾಡಿ, ವಸತಿ ನೀಡಿ, ಹಕ್ಕು ಪತ್ರಗಳನ್ನು ವಿತರಿಸಬೇಕೆಂದು ಆಗ್ರಹಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಆಗ್ರಹಿಸಿದೆ. ತುಮಕೂರಿನಲ್ಲಿ ಸಮಿತಿಯ ನೇತೃತ್ವದಲ್ಲಿ ಸಮುದಾಯಗಳ ಜನರು ಧರಣಿ ನಡೆಸುತ್ತಿದ್ದು, ಧರಣಿ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.

- Advertisement -

ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಜೂನ್ 18ರಿಂದ ಮಧುಗಿರಿ ತಾಲೂಕಿನ ಜನಕಲೋಟಿ, ತಿಗಳರಹಳ್ಳಿ, ಐಡಿಹಳ್ಳಿ, ವಿರುಪಗೊಂಡನಹಳ್ಳಿ, ಬ್ಯಾಲ್ಯ ಹಾಗೂ ಕೊರಟಗೆರೆ ತಾಲೂಕಿನ ಹೊಳವನಹಳ್ಳಿ, ಹುಲಿಕುಂಟೆ ಗ್ರಾಮ, ಇರಕಸಂಸ್ರ ಕಾಲೋನಿ, ಓಬನಹಳ್ಳಿ ಮತ್ತು ತುಮಕೂರು ತಾಲೂಕಿನ ಅಮಲಾಪುರ, ಗಂಗಸಂದ್ರ, ಕೌತಮಾರನಹಳ್ಳಿಯ ನಿವೇಶನ ರಹಿತ ಸಂತ್ರಸ್ತರು ಕುಟುಂಬಗಳು ಧರಣಿ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ನಿವೇಶನಗಳನ್ನು ಒದಗಿಸಿಕೊಡುವಂತೆ ಹಲವು ಬಾರಿ ಪ್ರತಿಭಟನೆಗಳನ್ನು ನಡೆದರೂ ಸರ್ಕಾರ ತಮ್ಮ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ. ತಮ್ಮ ಬೇಡಿಕೆಗಳನ್ನು ಈಡೇರಿಸುತ್ತಿಲ್ಲ. ಮೂಲಭೂತ ಸೌಲಭ್ಯಗಳನ್ನು ಪಡೆಯುವುದು ಪ್ರತಿಯೊಬ್ಬ ನಾಗರಿಕರ ಹಕ್ಕು. ಆದರೆ, ಜಿಲ್ಲಾಡಳಿತವು ಜನರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ” ಎಂದು ಧರಣಿ ನಿರತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಂದು ಚಿಕ್ಕ ಪೆಂಡಾಲ್‌ನಲ್ಲಿಯೇ 100 ಜನ ಕುಳಿತು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಪೆಂಡಾಲ್ ಕಂಬಿಗಳಿಗೆ ಜೋಕಾಲಿ ಹಾಕಿ ಎಳೆ ಕಂದಮ್ಮಗಳೊಂದಿಗೆ ತಾಯಂದಿರು ಕೂಡ ಧರಣಿಯಲ್ಲಿದ್ದಾರೆ. ಮಳೆ, ಗಾಳಿಗೂ ಜಗ್ಗದೆ ಪ್ರತಿಭಟಿಸುತ್ತಿದ್ದಾರೆ. ಆರೂ, ಅವರ ಹೋರಾಟಕ್ಕೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಅವರ ಅಳಲನ್ನು ಕೇಳುತ್ತಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...