ತುಮಕೂರು | ರೈತರನ್ನು ಒಕ್ಕಲೆಬ್ಬಿಸುವ ಪ್ರಯತ್ನ ಕೈಬಿಡದಿದ್ದರೆ ಪ್ರತಿಭಟನೆ ಸ್ವರೂಪ ತೀವ್ರ: ಕೆಪಿಆರ್‌ಎಸ್ ಯಶವಂತ್

Date:

ಸರ್ಕಾರಿ ಕಂದಾಯ ಭೂಮಿಯನ್ನು ಯಾವುದೇ ಭೌತಿಕ ಪರಿಶೀಲನೆ ನಡೆಸದೆ, ಅರಣ್ಯ ಇಲಾಖೆಗೆ ವರ್ಗಾಯಿಸಿರುವ ಎಂಆರ್‌ಗಳನ್ನು ರದ್ದುಪಡಿಸಬೇಕು. ಪೊಲೀಸ್ ಕಾವಲಿನಲ್ಲಿ ಗಿಡ ನೆಡುವ ಕಾಮಗಾರಿಯನ್ನು ನಿಲ್ಲಿಸಬೇಕು. ದೌರ್ಜನ್ಯ-ದಬ್ಬಾಳಿಕೆ ಮೂಲಕ ಬಗರ್ ಹುಕಂ ರೈತರನ್ನು ಒಕ್ಕಲೆಬ್ಬಿಸುವ ಪ್ರಯತ್ನ ನಿಲ್ಲಿಸದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸಬೇಕಾಗುತ್ತದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ ಯಶವಂತ ಅವರು ಎಚ್ಚರಿಸಿದರು.

- Advertisement -

ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಚೇಳೂರು ಹೋಬಳಿ ಗಂಗಯ್ಯನಪಾಳ್ಯದಲ್ಲಿ ರೈತರ ಬಗರ್ ಹುಕುಂ ಭೂಮಿಗೆ ಅರಣ್ಯ ಇಲಾಖೆಯವರು ನಡೆಸಿರುವ ಅತಿಕ್ರಮ ಪ್ರವೇಶ ಖಂಡಿಸಿ ರೈತರು ನಡೆಸುತ್ತಿರುವ ಮೂರನೇ ದಿನದ ಪ್ರತಿಭಟನೆಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಅರಣ್ಯ ಇಲಾಖೆಯ ಕಾನೂನುಬಾಹಿರ ಕೆಲಸಕ್ಕೆ ಸುಮಾರು 400 ಮಂದಿ ಪೊಲೀಸರ ಕಾವಲು ಕಾನೂನುಬದ್ಧ ರೈತರ ಹಕ್ಕುಗಳ ಮೇಲೆ ದಾಳಿಯಾಗಿದೆ. ಬಗರ್ ಹುಕಂ ಸಾಗುವಳಿ ಸಕ್ರಮ ಕೋರಿ ಸಲ್ಲಿಸಿರುವ ಅರ್ಜಿಗಳು ಇತ್ಯರ್ಥಕ್ಕೆ ಬಾಕಿ ಇರುವಾಗ, ಅರಣ್ಯ ಇಲಾಖೆ ರೈತರನ್ನು ಒಕ್ಕಲೆಬ್ಬಿಸುತ್ತಿರುವುದು ಕಾನೂನುಬಾಹಿರ” ಎಂದು ಆರೋಪಿಸಿದರು.

ರೈತ ಹೋರಾಟ ತುಮಕೂರು

“ಪೊಲೀಸರ ಸರ್ಪಗಾವಲಿನಲ್ಲಿ ಸುಮಾರು ಐದು ತಿಂಗಳ ಹಿಂದೆ ಅರಣ್ಯ ಇಲಾಖೆ ಅತಿಕ್ರಮ ವಿರೋಧಿಸಿದ ರೈತರ ಮೇಲೆ ದೊಣ್ಣೆಗಳಿಂದ ಹಲ್ಲೆ ನಡೆದಿದ್ದು, ಹತ್ತಾರು ರೈತರು ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಗಂಗಯ್ಯನಪಾಳ್ಯದ ರೈತರ ಮೇಲೆ ನಡೆದ ದೌರ್ಜನ್ಯ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ವ್ಯಕ್ತವಾದ ಬಳಿಕ ಜಿಲ್ಲಾಧಿಕಾರಿ ಸೂಚನೆಯಂತೆ ಬಗರ್ ಹುಕಂ ಭೂಮಿ ತಂಟೆಗೆ ಬರುವುದಿಲ್ಲವೆಂದು ಹೇಳಿದ್ದ ಅರಣ್ಯ ಇಲಾಖೆಯವರು ಮತ್ತೆ ತಮ್ಮ ಮಾತು ಉಲ್ಲಂಘಿಸಿರುವುದು ಖಂಡನೀಯ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಗಂಗಯ್ಯನಪಾಳ್ಯದ ರೈತರ ಭೂಮಿ ವಿವಾದವನ್ನು ಪರಿಹರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲು ಲಿಖಿತ ಮನವಿ ಮಾಡಿದ್ದರೂ, ಪೊಲೀಸ್ ಬಲ ಬಳಸಿ ದೌರ್ಜನ್ಯ ನಡೆಸುವುದು ನಾಗರಿಕ ಸರ್ಕಾರಕ್ಕೆ ಸೂಕ್ತವಾದುದ್ದಲ್ಲ. ವಿವಾದ ಪರಿಹಾರವಾಗುವ ತನಕ ಯಾವುದೇ ರೀತಿಯ ಕಾಮಗಾರಿ ಕೈಗೊಳ್ಳದಂತೆ ಜಿಲ್ಲಾ ಉಸ್ತುವಾರಿ ಸಚಿವರು ಕೂಡಲೇ ಅರಣ್ಯ ಇಲಾಖೆಗೆ ಸೂಚಿಸಬೇಕು. ಇಲ್ಲವಾದರೆ ಪ್ರತಿಭಟನೆ ತೀವ್ರ ಸ್ವರೂಪ ಪಡೆಯಲಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ತುಂಗಭದ್ರಾ ಎಡದಂಡೆ ಕಾಲುವೆ ಸಂಖ್ಯೆ 76/5ರ ವ್ಯಾಪ್ತಿಗೆ ನೀರು ಹರಿಸುವಂತೆ ರೈತರ ಆಗ್ರಹ

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಆರ್ ಎಸ್ ಚನ್ನಬಸವಣ್ಣ, ಪ್ರಧಾನ ಕಾರ್ಯದರ್ಶಿ ಸಿ ಅಜ್ಜಪ್ಪ, ದೂಡ್ಡನಂಜಯ್ಯ, ನರಸಿಂಹಮೂರ್ತಿ, ನಾಗರಾಜು, ರಾಜಮ್ಮ, ಎನ್ ಕೆ ಸುಬ್ರಹ್ಮಣ್ಯ ಸೇರಿದಂತೆ ಬಹುತೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ತುಮಕೂರು | ರೈತರ ಸಂಕಷ್ಟಕ್ಕೆ ಸ್ಪಂದಿಸಿ : ವೈಜ್ಞಾನಿಕ ಬರ ಪರಿಹಾರಕ್ಕೆ ಆಗ್ರಹ

ಭೀಕರ ಬರಗಾಲದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರೂ ಕೇಂದ್ರ ಮತ್ತು ರಾಜ್ಯ...

ತುಮಕೂರು | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ಪಡೆಯಬೇಕು ಹಾಗೂ ಇದುವರೆಗೆ...