ತುಮಕೂರು | ಸಾರ್ವಜನಿಕ ಸಭೆ,ಸಮಾರಂಭಗಳಿಗೆ ಅನುಮತಿ ಇಲ್ಲ : ಮೂರು ಸಾವಿರ ಸ್ವಯಂ ಸೇವಕರ ನೇಮಕಕ್ಕೆ ಕ್ರಮ

Date:

ರಾಷ್ಟ್ರದ ಗಡಿಯಲ್ಲಿ ಭಾರತ-ಪಾಕಿಸ್ತಾನ ನಡುವೆ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯಿಂದ ಸಂಭವನೀಯ ಅಪಘಾತಗಳಿಂದ ಸಾರ್ವಜನಿಕರನ್ನು ರಕ್ಷಿಸಲು ಜಿಲ್ಲೆಯಲ್ಲಿ 3000 ಸ್ವಯಂ ಸೇವಕರನ್ನು ನೇಮಕ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. 

- Advertisement -

ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸ್ವಯಂ ಸೇವಕರನ್ನು ನೇಮಕ ಮಾಡಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಸ್ವಯಂ ಸೇವಕರ ನೇಮಕಾತಿಗಾಗಿ ಕಮ್ಯಾಂಡೆಂಟ್ ಹೋಮ್‌ಗಾರ್ಡ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು, ನೆಹರು ಯುವ ಕೇಂದ್ರದ ಉಪನಿರ್ದೇಶಕರನ್ನು ನಿಯೋಜಿಸಲಾಗಿದೆ. ಯುದ್ಧಕ್ಕೆ ಸಂಬಂಧಿಸಿದಂತೆ ತುರ್ತು ಸಂದರ್ಭಗಳು ಘೋಷಣೆಯಾದಾಗ ಜನರ ಜೀವ ಹಾಗೂ ಆಸ್ತಿಗಳ ರಕ್ಷಣೆಗಾಗಿ ಸ್ವಯಂ ಸೇವಕರ ನೆರವನ್ನು ಪಡೆಯಲಾಗುವುದು ಎಂದು ತಿಳಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಲಿಚ್ಛಿಸುವವರು 18 ವರ್ಷ ವಯೋಮಾನದವರಾಗಿದ್ದು, ದೈಹಿಕವಾಗಿ ಸದೃಢರಾಗಿರಬೇಕು. ಆಸಕ್ತರು ನಿಗಧಿತ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಬಗ್ಗೆ ಈಗಾಗಲೇ ಸ್ಥಳೀಯ ಆಡಳಿತ ವ್ಯಾಪ್ತಿಯಲ್ಲಿ ಪ್ರಚುರ ಪಡಿಸಲಾಗಿದೆ. ಸ್ವಯಂ ಸೇವಕರಾಗಿ ಆಯ್ಕೆಯಾದವರಿಗೆ ಸೂಕ್ತ ತರಬೇತಿ ನೀಡಲಾಗುವುದು ಎಂದರು. 

ತುರ್ತು ಸಂದರ್ಭಗಳನ್ನು ಎದುರಿಸಲು ಹಾಗೂ ಸಾರ್ವಜನಿಕರಿಗೆ ನೆರವು ನೀಡಲು ಈಗಾಗಲೇ ಜಿಲ್ಲೆಯಲ್ಲಿ ಗುರುತಿಸಿರುವ ಸುಮಾರು 20 ಸೂಕ್ಷ್ಮ ಪ್ರದೇಶಗಳಿಗೆ ಬಿಎಸ್‌ಎನ್‌ಎಲ್ ವತಿಯಿಂದ ಹಾಟ್ ಲೈನ್ ಸಂಪರ್ಕ ನೀಡಲಾಗುವುದು. ಇದರಿಂದ ಸ್ಥಳೀಯ ಸಮಸ್ಯೆಗಳನ್ನು ತ್ವರಿತವಾಗಿ ಜಿಲ್ಲಾಡಳಿತಕ್ಕೆ ತಲುಪಿಸಲು ಅನುಕೂಲವಾಗಲಿದೆ. ಅಲ್ಲದೆ, ನಗರ ಸ್ಥಳೀಯ ಸಂಸ್ಥೆ ಹಾಗೂ ತಾಲ್ಲೂಕು ಕಚೇರಿಗಳಲ್ಲಿಯೂ ಸಹಾಯವಾಣಿ ಕೇಂದ್ರಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. 

ಮುಂಜಾಗ್ರತಾ ಕ್ರಮವಾಗಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ 24×7 ಸಹಾಯವಾಣಿ ಕೇಂದ್ರ ಸ್ಥಾಪಿಸಲು ಸರ್ಕಾರ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಸ್ಮಾರ್ಟ್ ಸಿಟಿಯ ಇಂಟಿಗ್ರೇಟೆಡ್ ಕಮ್ಯಾಂಡ್ ಅಂಡ್ ಕಂಟ್ರೋಲ್ ಕೇಂದ್ರದಲ್ಲಿ ಸಹಾಯವಾಣಿ ಸಂಖ್ಯೆ: 0816-2213400ಯನ್ನು ಸ್ಥಾಪಿಸಲಾಗಿದೆ. ಈ ಸಹಾಯವಾಣಿ ಕೇಂದ್ರದಲ್ಲಿ ಕಂದಾಯ, ಪೊಲೀಸ್, ಬೆಸ್ಕಾಂ, ಅಗ್ನಿಶಾಮಕ ಅಧಿಕಾರಿಗಳು ಉಪಸ್ಥಿತರಿದ್ದು, ಸ್ವೀಕೃತ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಿ ಪರಿಹಾರ ನೀಡಲಿದ್ದಾರೆ. ಯುದ್ಧ ದಾಳಿ ಸಂಭವಿಸಿದಾಗ ಎಚ್ಚರಿಕೆ ಸದ್ದು ನೀಡಲು ಎಲ್ಲಾ ತಾಲ್ಲೂಕು ಕಚೇರಿಗಳಲ್ಲಿ ಸೈರನ್ ಅಳವಡಿಸಬೇಕು ಎಂದು ಎಲ್ಲಾ ತಹಶೀಲ್ದಾರರಿಗೆ ಸೂಚನೆ ನೀಡಲಾಗಿದೆ. 

ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಲ್ಲಿ ದಾಸ್ತಾನು ಇರುವ ರಾಗಿ, ಗೋಧಿ, ಅಕ್ಕಿ, ಮತ್ತಿತರ ಅಗತ್ಯ ವಸ್ತುಗಳ ಅಭಾವ ಸೃಷ್ಟಿಯಾಗದಂತೆ ಹಾಗೂ ಆಹಾರ ಧಾನ್ಯಗಳು ಕ್ರಮವಾಗಿ ಕಾಳ ಸಂತೆಯಲ್ಲಿ ಮಾರಾಟವಾಗದಂತೆ ನಿಗಾವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರಲ್ಲದೆ, ಜನರು ಆತಂಕ ಪಡುವ ಸುಳ್ಳು ಸುದ್ದಿಗಳನ್ನು ಮಾಧ್ಯಮಗಳಲ್ಲಿ ಬಿತ್ತರಿಸಬಾರದು. ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಸಂದೇಶಗಳನ್ನು ಹರಿಯಬಿಡುವವರು ಯಾರೇ ಆಗಲಿ ಅವರನ್ನು ಕಾನೂನು ಕ್ರಮಕ್ಕೆ ಗುರಿಪಡಿಸಲಾಗುವುದು. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ಸಾಮಾಜಿಕ ಜಾಲತಾಣಗಳ ಮೇಲೆ 24×7 ನಿಗಾವಹಿಸಲಿದೆ ಎಂದು ತಿಳಿಸಿದರು. 

ತುರ್ತು ಸೇವೆ ಒದಗಿಸುವ ಪೊಲೀಸ್, ಅಗ್ನಿಶಾಮಕದಳ, ಬೆಸ್ಕಾಂ, ಆರೋಗ್ಯ ಇಲಾಖೆಗಳಲ್ಲಿ ಮಾನವ ಸಂಪನ್ಮೂಲ ಹಾಗೂ ಮೂಲಭೂತ ಸೌಕರ್ಯಗಳನ್ನು ಸಿದ್ಧವಿಟ್ಟುಕೊಳ್ಳಲು ಸರ್ಕಾರ ನಿರ್ದೆಶನ ನೀಡಿರುವ ಹಿನ್ನೆಲೆಯಲ್ಲಿ ರಜೆ ಮೇಲೆ ತೆರಳಿರುವ ತುರ್ತು ಸೇವೆ ನೀಡುವ ಇಲಾಖೆಗಳ ಅಧಿಕಾರಿ, ನೌಕರರ ರಜೆಯನ್ನು ರದ್ದುಪಡಿಸಿ, ಮರಳಿ ಕರ್ತವ್ಯಕ್ಕೆ ಹಾಜರಾಗಲು ಸೂಚನೆ ನೀಡಲಾಗಿದೆ. ಜಿಲ್ಲೆಯ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ 9000 ಹಾಸಿಗೆಗಳು ಲಭ್ಯವಿದ್ದು, 12 ಆಕ್ಸಿಜನ್ ಪ್ಲಾಂಟ್, ವೆಂಟಿಲೇಟರ್, ಆಂಬುುಲೆನ್ಸ್ ಗಳು ಸುಸ್ಥಿತಿಯಲ್ಲಿವೆ ಎಂದು ಮಾಹಿತಿ ನೀಡಿದರು. 

 ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಮಾತನಾಡಿ, ಯುದ್ಧದ ಸಂದರ್ಭದಲ್ಲಿ ಸಾರ್ವಜನಿಕ ಸಭೆ, ಸಮಾರಂಭಗಳಿಗೆ ಅನುಮತಿ ನೀಡಲಾಗುವುದಿಲ್ಲ. ಹೆಚ್ಚಿನ ಜನ ಸೇರುವ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಮದುವೆ, ಮತ್ತಿತರ ಶುಭ ಸಮಾರಂಭಗಳಿಗೆ ಕಡಿಮೆ ಜನರು ಮಾತ್ರ ಸೇರಲು ಅವಕಾಶ ನೀಡಲಾಗುವುದು ಎಂದು ಹೇಳಿದರಲ್ಲದೆ, ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಿಯಬಿಡುವವರನ್ನು ಕಾನೂನು ಕ್ರಮಕೈಗೊಳ್ಳಲಾಗುವುದು. ಯಾವುದೇ ತಪ್ಪು ಸಂದೇಶಗಳು ವಾಟ್ಸ್ಪ್ ಮೂಲಕ ಹಂಚಿಕೊಂಡರೆ ಸದರಿ ಗ್ರೂಪ್ ಅಡ್ಮಿನ್ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. 

 ಹೆಚ್ಚಿನ ಜನ ಸೇರುವ ಶಾಪಿಂಗ್ ಮಾಲ್, ಬಸ್ ನಿಲ್ದಾಣ, ರೈಲು ನಿಲ್ದಾಣಗಳಲ್ಲಿ ಶ್ವಾನದಳ, ಪೊಲೀಸ್ ಸಿಬ್ಬಂದಿಗಳಿಂದ ತಪಾಸಣೆ ನಡೆಸಲಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿಯೂ ಎಚ್ಚರಿಕೆ ವಹಿಸಲಾಗಿದೆ. ಜಿಲ್ಲೆಯಲ್ಲಿ 250 ನಾಕಾಬಂದಿ ಬಿಂದುಗಳನ್ನು ಗುರುತಿಸಲಾಗಿದೆ. ಯಾವುದೇ ಅನುಮಾನಾಸ್ಪದ ವಸ್ತುಗಳು ಕಂಡು ಬಂದರೆ ಅದನ್ನು ಮುಟ್ಟದೆ ಸಹಾಯ ವಾಣಿ ಸಂಖ್ಯೆ: 112ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ಹೇಳಿದರು.  

ಸರ್ಕಾರದಿಂದ ಮಾರ್ಗಸೂಚಿಗಳು ಬಂದ ಕೂಡಲೇ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಮಾಕ್‌ಡ್ರಿಲ್(ಅಣಕು ಪ್ರದರ್ಶನ) ಮಾಡಲಾಗುವುದು. ಉದ್ವಿಗ್ನ ಸಂದರ್ಭವನ್ನು ದುರುಪಯೋಗಪಡಿಸಿಕೊಂಡು ಜಿಲ್ಲೆಯಲ್ಲಿ ಕೋಮು ಭಾವನೆಯನ್ನು ಕೆರಳಿಸುವ ಗಲಭೆಗಳಿಗೆ ಅವಕಾಶ ನೀಡಬಾರದು. ಯಾವುದೇ ಪ್ರತಿಭಟನೆಗಳಿಗೂ ಅನುಮತಿ ನೀಡಲಾಗುವುದಿಲ್ಲ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯಿಂದ ಎಚ್ಚರಿಕೆ ಸಂದೇಶ ಬಂದರೆ ಪ್ರತಿಯೊಬ್ಬರೂ ಅನುಸರಿಸಬೇಕು. ತಪ್ಪಿದಲ್ಲಿ ಅಂತಹವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಸ್ಪಷ್ಟಪಡಿಸಿದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...