ತುಮಕೂರು | ಒಳಮೀಸಲಾತಿ ಸಮೀಕ್ಷೆ ಜಾಗೃತಿಗೆ ಮೇ 1 ರಿಂದ ಜನಾಂದೋಲನ : ಡಾ.ವೈ.ಕೆ.ಬಾಲಕೃಷ್ಣ

Date:

Advertisements

ಒಳಮೀಸಲಾತಿಗೆ ಸಂಬಂಧಿಸಿದಂತೆ ಜಿಲ್ಲೆಯ ಪರಿಶಿಷ್ಟ ಜಾತಿಯ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮೇ 1 ರಿಂದ 7ರವರೆಗೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಒಳಮೀಲಾತಿ ಹೋರಾಟ ಸಮಿತಿಯಿಂದ ಜನಾಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಪ್ರಧಾನ ಸಂಚಾಲಕ ಡಾ.ವೈ.ಕೆ.ಬಾಲಕೃಷ್ಣ ತಿಳಿಸಿದ್ದಾರೆ.

ತುಮಕೂರು ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಒಳಮೀಸಲಾತಿ ಹೋರಾಟ ಸಮಿತಿಯ ತಾಲೂಕು ಅಧ್ಯಕ್ಷರುಗಳ ಸಭೆಯಲ್ಲಿ ಮಾತನಾಡಿದ ಅವರು, ಮೇ 1 ರಂದು ಕೊರಟಗೆರೆಯಿಂದ ಆರಂಭವಾಗುವ 7ನೇ ತಾರೀಖು ಮುಕ್ತಾಯಗೊಳ್ಳಲಿದೆ.ಆಯಾಯ ತಾಲೂಕಿನಲ್ಲಿ ಮಾದಿಗ ಸಮುದಾಯದ ಮುಖಂಡರನ್ನು ಭೇಟಿಯಾಗಿ, ಅವರಿಗೆ ಸಮೀಕ್ಷೆಯ ರೂಪುರೇಷೆ, ಅರ್ಜಿ ಭರ್ತಿ ಮಾಡಬೇಕಾದ ವಿಷಯಗಳು, ಸೇರಿದಂತೆ ಎಲ್ಲವನ್ನು ತಿಳಿಸಿ, ಯಾವುದೇ ಕುಟುಂಬ ಸಮೀಕ್ಷೆಯಿಂದ ಹೊರಗೆ ಉಳಿಯದಂತೆ ನೋಡಿಕೊಳ್ಳಬೇಕಿದೆ ಎಂದರು.

ಒಳಮೀಸಲಾತಿಗೆ ಸಂಬಂಧಿಸಿದಂತೆ ನ್ಯಾ. ನಾಗಮೋಹನ್ ದಾಸ್ ಸಮಿತಿವತಿಯಿಂದ ಸಮೀಕ್ಷೆಗೆ ಸಂಬಂಧಿಸಿದಂತೆ ಪ್ರತಿಯೊಬ್ಬ ಮಾದಿಗ ಸಮುದಾಯದ ಮುಖಂಡರು ಜಾಗೃತರಾಗಿ ಜಾತಿ ಕಲಂನಲ್ಲಿ ಪರಿಶಿಷ್ಟ ಜಾತಿ, ಉಪ ಜಾತಿ ಕಲಂನಲ್ಲಿ ಮಾದಿಗ ಎಂದು ನಮೂದಿಸಬೇಕು,ಗೊಂದಲಕ್ಕೆ ಒಳಗಾಗುವ ಯಾವ ಜಾತಿ ಸೂಚಕ ಪದಗಳನ್ನು ಬಳಸದೆ ಕೇವಲ ಮಾದಿಗ ಎಂದು ಬರಸಬೇಕು.ಜೊತೆಗೆ,ನಿಮ್ಮ ಅಕ್ಕಪಕ್ಕದ ಮನೆಯ, ಅಥವಾ ತೋಟಗಳಲ್ಲಿ, ಊರಿನ ಹೊರಗೆ ಮನೆ ಮಾಡಿಕೊಂಡಿರುವ ಮಾದಿಗ ಸಮುದಾಯ ಜನರನ್ನು ಗುರುತಿಸಿ,ಅವರು ಸಹ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕೆಂದು ಡಾ.ವೈ.ಕೆ.ಬಾಲಕೃಷ್ಣಪ್ಪ ಮನವಿ ಮಾಡಿದರು.

Advertisements

ಇಂದು ತುಮಕೂರು ನಗರಕ್ಕೆ ಸಂಬಂಧಿಸಿದಂತೆ ಅಧಿಕಾರಿ, ನೌಕರರು, ಮುಖಂಡರುಗಳ ಸಭೆ ನಡೆಸಲಾಗಿದೆ.ಸಮೀಕ್ಷೆ ನಡೆಸಲು ಮನೆಗಳ ಬಳಿ ಬಂದಾಗ, ಗೊಂದಲಕ್ಕೆ ಒಳಗಾಗದೆ ವಿವರಗಳನ್ನು ನಮೂದಿಸಬೇಕು,ಮಾದಿಗ ಸಮುದಾಯ ಮೀಸಲಾತಿಯಲ್ಲಿ ನ್ಯಾಯಯುತ ಪಾಲು ಪಡೆಯಲು ಇರುವ ಏಕೈಕ ಅವಕಾಶ.ಹಾಗಾಗಿ ರಾಜಕೀಯ ವೈಮನಸ್ಸುಗಳನ್ನು ಬದಿಗೊತ್ತಿ ಎಲ್ಲರೂ ಇದರಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕಾಗಿದೆ.ಇದು ನಾವು ಮುಂದಿನ ಪೀಳಿಗೆಗೆ ನೀಡುತ್ತಿರುವ ಬಳುವಳಿ ಎಂದು ಎಲ್ಲಾ ಮಾದಿಗ ಸಮುದಾಯದ ಮುಖಂಡರು ತಿಳಿದು ಪಾಲ್ಗೊಳ್ಳುವಂತೆ ಡಾ.ವೈ.ಕೆ.ಬಾಲಕೃಷ್ಣ ಸಲಹೆ ನೀಡಿದರು.

ಸಭೆಯಲ್ಲಿ ಜಿ.ಪಂ.ಮಾಜಿ ಅಧ್ಯಕ್ಷ ವೈ.ಹೆಚ್.ಹುಚ್ಚಯ್ಯ,ಮುಖಂಡರಾದ ಬೆಳಗುಂಬ ವೆಂಕಟೇಶ್,ಶ್ರೀನಿವಾಸ್ ಆಯನಹಳ್ಳಿ, ಹೆತ್ತೇನಹಳ್ಳಿ ಮಂಜು, ರಮೇಶ್, ಮಳೆಕೋಟೆ ಹನುಮಂತರಾಯಪ್ಪ, ಪಿ.ಎನ್.ರಾಮಯ್ಯ, ಗೂಳರಿವೆ ನಾಗರಾಜು, ನರಸಿಂಹಯ್ಯ, ನರಸೀಯಪ್ಪ,ಜಯಮೂರ್ತಿ, ಡಾ.ಬಸವರಾಜು,ಶಿವನಂಜಪ್ಪ,ಡಾ.ಮುಕುಂದ ಎಲ್, ಗಂಗಾಧರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X