ತುಮಕೂರು | ಪಾವಗಡ ರೖತ ಸಂಘದ ತಾಲೂಕು ಅಧ್ಯಕ್ಷರಾಗಿದ್ದ ಪೂಜಾರಪ್ಪ ಅಮಾನತು

Date:

Advertisements

ಕರ್ನಾಟಕ ರಾಜ್ಯ ರೈತ ಸಂಘದ ನೀತಿ, ನಿಯಮಗಳ ವಿರುದ್ದವಾಗಿ ನಡೆದುಕೊಂಡಿರುವ ತುಮಕೂರು ಜಿಲ್ಲೆ ಪಾವಗಡ ತಾಲೂಕು ಅಧ್ಯಕ್ಷರಾಗಿದ್ದ ಪೂಜಾರಪ್ಪ ಅವರನ್ನು ಅಧ್ಯಕ್ಷ ಸ್ಥಾನದಿಂದ ಅಮಾನತ್ತು ಮಾಡಲಾಗಿದೆ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ತಿಳಿಸಿದರು.

ತುಮಕೂರು ವಿಜ್ಞಾನ ಕೇಂದ್ರದಲ್ಲಿ ನಡೆದ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಸೋಮವಾರ (ಏ.2) ಮಾತನಾಡಿದ ಅವರು, ರಾಜ್ಯದಲ್ಲಿ 1981-82ರಲ್ಲಿ ಹುಟ್ಟಿದ ಕರ್ನಾಟಕ ರಾಜ್ಯ ರೈತ ಸಂಘ ಹಲವು ಸಿದ್ದಾಂತಗಳೊಂದಿಗೆ ಕಾರ್ಯನಿರ್ವಹಿಸುತ್ತಿದೆ.ರೈತ ಸಂಘದ ಹುಟ್ಟಿಗೆ ಕಾರಣರಾದ ಪ್ರೊ. ಎಂ.ಡಿ. ನಂಜುಂಡಸ್ವಾಮಿ, ಎಂ.ಡಿ. ಸುಂದರೇಶ್ ಸೇರಿದಂತೆ ಹಲವರು ನಮಗೆ ಮಾರ್ಗದರ್ಶನ ಮಾಡಿದ್ದು, ಅದರಂತೆ ನಡೆದುಕೊಳ್ಳುತ್ತಾ ಬಂದಿದ್ದೇವೆ. ಆದರೆ, ಸಂಘದ ನಿಯಮಗಳನ್ನು ಗಾಳಿಗೆ ತೂರಿ, ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಜಿ.ಸಿ. ಶಂಕರಪ್ಪ ಅವರ ವಿರುದ್ದ ಮಾಧ್ಯಮಗೋಷ್ಠಿಯಲ್ಲಿ ಅವಹೇಳನಕಾರಿಯಾಗಿ ನಿಂದಿಸಿರುವುದಲ್ಲದೆ, ಬೆದರಿಕೆ ಹಾಕಿದ್ದಾರೆ ಎಂದರು.

ಪಾವಗಡ ತಾಲೂಕು ಅಧ್ಯಕ್ಷರಾದ ಪೂಜಾರಪ್ಪ ಅವರ ನಡೆ, ಸಂಘವಿರೋಧಿಯಾಗಿದ್ದು, ಅವರ ವಿರುದ್ದ ವಿಚಾರಣೆಗೆ ಸಮಿತಿ ಯೊಂದನ್ನು ನೇಮಕ ಮಾಡಿದ್ದು, ಸಮಿತಿಯ ವರದಿ ಬರುವವರೆಗೂ ಅವರನ್ನು ಪಾವಗಡ ತಾಲೂಕು ಅಧ್ಯಕ್ಷ ಸ್ಥಾನದಿಂದ ಅಮಾನತ್ತು ಮಾಡಲಾಗಿದೆ ಎಂದರು.

Advertisements

ಕಳೆದ 10ವರ್ಷಗಳಿಂದ ರೈತ ಸಂಘದ ಪಾವಗಡ ತಾಲೂಕು ಘಟಕ ಕೆಲಸ ಮಾಡುತ್ತಿದ್ದು, ಪೂಜಾರಪ್ಪ ಅವರನ್ನು ಅಧ್ಯಕ್ಷರಾಗಿದ್ದ ನೇಮಕ ಮಾಡಲಾಗಿತ್ತು. ಕಳೆದ ಒಂದು ವರ್ಷದಿಂದ ಅವರ ನಡವಳಿಕೆಗಳಲ್ಲಿ ವ್ಯತ್ಯಾಸ ಕಂಡುಬರುತ್ತಿದ್ದು, ತಮಗೆ ಅಧಿಕಾರ ಇಲ್ಲದಿದ್ದರೂ ಸಂಘದ ಕೆಲ ಪದಾಧಿಕಾರಿಗಳನ್ನು ಜಿಲ್ಲಾ ಸಂಘದ ಗಮನಕ್ಕೆ ತಾರದೆ ವಜಾ ಮಾಡಿ, ತಮಗೆ ಇಷ್ಟ ಬಂದವರನ್ನು ನೇಮಕ ಮಾಡಿಕೊಂಡಿದ್ದಾರೆ. ಅಲ್ಲದೆ, ರೈತ ಸಂಘಟನೆಗಳ ಸಮನ್ವಯ ಸಮಿತಿಗಳ ಅಧ್ಯಕ್ಷನೆಂದು ಸ್ವಯಂ ಘೋಷಿಸಿಕೊಂಡು ರೈತ ಸಂಘದ ಶಾಲು ತೆಗೆದು, ಬೇರೆ ಶಾಲು ಹಾಕಿರುವುದು ಖಂಡನೀಯ ಎಂದು ಎ.ಗೋವಿಂದರಾಜು ತಿಳಿಸಿದರು.

ಸದರಿ ವಿಚಾರವಾಗಿ 29-03-2024 ರಂದು ಜಿಲ್ಲಾ ಸಮಿತಿಯ ಮುಂದೆ ಹಾಜರಾಗಿ ವಿವರಣೆ ನೀಡುವಂತೆ ನೋಟಿಸ್ ಜಾರಿ ಮಾಡಲು ಜಿಲ್ಲಾ ಸಮಿತಿ ಮುಂದಾಗಿ ನೋಟಿಸ್ ಜಾರಿ ಮಾಡುವ ಮುಂಚೆಯೇ ಸುದ್ದಿಗೋಷ್ಠಿ ಕರೆದು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಸಿ. ಶಂಕರಪ್ಪ ವಿರುದ್ದ ಇಲ್ಲಸಲ್ಲದ ಆರೋಪ ಮಾಡಿ, ಏಕವಚನದಲ್ಲಿ ನಿಂದಿಸಿ, ಬೆದರಿಕೆ ಹಾಕಿದ್ದಲ್ಲದೆ, ಸದರಿ ಸುದ್ದಿಗೋಷ್ಠಿಯ ವಿಡಿಯೋವನ್ನು ರೈತ ಸಂಘದ ಎಲ್ಲಾ ಸಾಮಾಜಿಕ ಜಾಲತಾಣಕ್ಕೆ ಹಾಕಿ ಸಂಘದ ಘನತೆ, ಗೌರವ ಹಾಳು ಮಾಡಲು ಯತ್ನಿಸಿದ ಪೂಜಾರಪ್ಪ ಅವರ ವಿರುದ್ದ ತನಿಖೆ ನಡೆಸಲು ರೈತ ಸಂಘದ ಎಲ್ಲಾ ತಾಲೂಕು ಅಧ್ಯಕ್ಷರುಗಳನ್ನು ಒಳಗೊಂಡ 12 ಜನರ ಶಿಸ್ತು ಸಮಿತಿಯನ್ನು ನೇಮಕ ಮಾಡಿರುವುದಾಗಿ ತಿಳಿಸಿದರು.

ಮುಂದಿನ 15 ದಿನದಲ್ಲಿ ಸಮಿತಿ ವರದಿ ನೀಡಲಿದೆ.ಸದರಿ ವರದಿಯನ್ನು ಜಿಲ್ಲಾ ಸಮಿತಿ ಪರಾಮರ್ಶಿಸಿ, ಅಗತ್ಯ ಕ್ರಮ ಕೈಗೊಳ್ಳಲಿದೆ. ಅಲ್ಲಿಯವರೆಗೆ ಪಾವಗಡ ತಾಲೂಕು ಅಧ್ಯಕ್ಷರಾಗಿದ್ದ ಪೂಜಾರಪ್ಪ ಅವರನ್ನು ತಾಲೂಕು ಅಧ್ಯಕ್ಷ ಸ್ಥಾನದಿಂದ ಅಮಾನತ್ತು ಮಾಡಲು ಇಂದು ನಡೆದ ಜಿಲ್ಲಾ ಕಾರ್ಯಕಾರಿ ಮಂಡಳಿ ಸಭೆ ತೀರ್ಮಾನ ಕೈಗೊಂಡಿದೆ ಎಂದು ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಸ್ಪಷ್ಟಪಡಿಸಿದರು.

ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಸಿ. ಶಂಕರಪ್ಪ, ಮಹಿಳಾ ಅಧ್ಯಕ್ಷರಾದ ನಾಗರತ್ನಮ್ಮ, ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳಾದ ರವೀಶ್, ದೊಡ್ಡಮಾಳಯ್ಯ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಚಿರತೆ ಚಿಕ್ಕಣ್ಣ, ಅರೇಹಳ್ಳಿ ಮಂಜುನಾಥ್, ಹುಚ್ಚೇಗೌಡ, ಸಿ.ಟಿ.ಕುಮಾರ್, ತಾಲೂಕು ಅಧ್ಯಕ್ಷರುಗಳಾದ ಬಿ.ಕೆ.ಲಕ್ಷ್ಮಣ್‌ ಗೌಡ, ನಾದೂರು ಕೆಂಚಪ್ಪ, ಡಿ.ಆರ್.ರಾಜಶೇಖರ್, ನಾಗರಾಜು, ಚಿಕ್ಕಬೋರೆಗೌಡ, ಟಿ.ಎಂ. ತಿಮ್ಮೇಗೌಡ, ಶ್ರೀನಿವಾಸಗೌಡ, ರಹಮತ್‌ವುಲ್ಲಾ, ರಂಗಹನುಮಯ್ಯ, ಶಬ್ಬೀರ್ ಪಾಷ, ಕೆ.ಎನ್.ವೆಂಕಟೇಗೌಡ, ಸಿ.ಜಿ.ಲೋಕೇಶ್ ಮತ್ತಿತರರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X