ತುಮಕೂರು | ಹೇಮಾವತಿ ಲಿಂಕ್ ಕೆನಾಲ್ ವಿರುದ್ಧ ಶಾಸಕರು ಪಕ್ಷಾತೀತವಾಗಿ ಧ್ವನಿ ಎತ್ತಲು ರೈತ ಸಂಘ ಆಗ್ರಹ

Date:

Advertisements

ಹೇಮಾವತಿ ಲಿಂಕ್ ಕೆನಾಲ್‌ನಿಂದ ಜಿಲ್ಲೆಯ ಹೇಮಾವತಿ ನೀರಿಗೆ ಕುತ್ತು ಬರಲಿದ್ದು, ಜಿಲ್ಲೆಯ ಎಲ್ಲಾ ಶಾಸಕರು ಪಕ್ಷಾತೀತವಾಗಿ ವಿಧಾನಸಭೆಯಲ್ಲಿ ಲಿಂಕ್ ಕೆನಾಲ್ ವಿರುದ್ದ ಧ್ವನಿ ಎತ್ತುವಂತೆ ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಹಾಗು ತುಮಕೂರು ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಒತ್ತಾಯಿಸಿದರು.

ತುಮಕೂರು ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಅವರು, “ಜಾತಿ, ಪಕ್ಷದ ಲಾಭಿಗೆ ಮಣಿದು ಇಂತಹ ಘನ ಘೋರ ಅನ್ಯಾಯವನ್ನು ತಡೆಯಲು ಮುಂದಾಗದಿದ್ದರೆ ಮುಂದಿನ ಪೀಳಿಗೆಗೆ ನೀವು ವಿಷ ಕೊಟ್ಟಂತೆ ಆಗುತ್ತದೆ. ಹಾಗಾಗಿ, ಹೇಮಾವತಿ ಲಿಂಕ್ ಕೆನಾಲ್ ವಿರುದ್ದ ಜಿಲ್ಲೆಯ ಎಲ್ಲ ಶಾಸಕರು ಸದನದ ಒಳಗೆ ಮತ್ತು ಹೊರಗೆ ದನಿ ಎತ್ತಬೇಕೆಂಬ ಆಗ್ರಹ ರೈತ ಸಂಘದ್ದಾಗಿದೆ” ಎಂದರು.

ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷದ ಸರಕಾರ ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆ, ರೈತರಿಗೆ ಮಾರಕವಾಗಿರುವ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಗೋ ಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯುವುದಾಗಿ ಮಾತು ಕೊಟ್ಟಿತ್ತು. ಆದರೆ ಈಗ ಕೊಟ್ಟ ಮಾತಿಗೆ ತಪ್ಪಿದೆ. ಅಲ್ಲದೆ, ಸರಕಾರದ ನೀತಿಗಳಿಂದಾಗಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿವೆ. ಇವುಗಳನ್ನು ತಡೆಯುವ ನಿಟ್ಟಿನಲ್ಲಿ ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ರೈತರನ್ನು ಎದುರು ಹಾಕಿಕೊಂಡು ಸರಕಾರ ಉಳಿದ ಉದಾಹರಣೆಯಿಲ್ಲ. ಹಾಗಾಗಿ, ಕೂಡಲೇ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು ಎಂದು ಎ.ಗೋವಿಂದರಾಜು ಎಚ್ಚರಿಸಿದರು.

Advertisements

ತುಮಕೂರು ಜಿಲ್ಲೆಯೂ ಸೇರಿದಂತೆ ರಾಜ್ಯದಲ್ಲಿ ಅರಣ್ಯ ಇಲಾಖೆ ಮತ್ತು ಬಗರ್ ಹುಕ್ಕಂ ಸಾಗುವಳಿದಾರರ ನಡುವಿನ ಸಂಘರ್ಷ ಹೆಚ್ಚಾಗಿದೆ. ಹತ್ತಾರು ವರ್ಷಗಳಿಂದಲೂ ಭೂಮಿ ಉಳುಮೆ ಮಾಡುತ್ತಾ ಬಂದಿದ್ದರೂ ಒಂದಿಲೊಂದು ಕಾರಣ ನೀಡಿ, ಸಾಗುವಳಿ ಚೀಟಿ ನೀಡುತ್ತಿಲ್ಲ. ಅಲ್ಲದೇ, ವಿವಿಧ ಕಾರಣಗಳಿಂದ ರಾಜ್ಯದಲ್ಲಿ ಕಳೆದ ಏಪ್ರಿಲ್‌ನಿಂದ ಇಲ್ಲಿಯವರಗೂ 1182 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಯುವ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆತ್ಮಹತ್ಯೆಗೆ ಶರಣಾಗುತ್ತಿರುವುದು ದೊಡ್ಡ ಆತಂಕವನ್ನು ಸೃಷ್ಟಿಸಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಕೃಷಿ ಉತ್ಪನ್ನಗಳಿಗೆ ಸಮರ್ಪಕ ಬೆಲೆ ಸಿಗದಿರುವುದು ರೈತರ ಆತ್ಮಹತ್ಯೆಯ ಹಿಂದಿನ ಪ್ರಮುಖ ಕಾರಣವಾಗಿದೆ. ಇದನ್ನು ತಡೆಯಲು ಸರಕಾರ ಕೃಷಿ ಬೆಲೆ ನಿಗಧಿ ಆಯೋಗದ ಶಿಫಾರಸ್ಸುಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಬರಗಾಲದ ನಡುವೆಯೂ ಬ್ಯಾಂಕುಗಳು ಸಾಲ ವಸೂಲಿಗೆ ರೈತರ ಜಮೀನುಗಳನ್ನು ಹರಾಜು ಹಾಕುತ್ತಿರುವುದು ಮುಂದುವರೆದಿದೆ. ತುರುವೇಕೆರೆಯ ರೈತರೊಬ್ಬರ ಸಾಲಕ್ಕಾಗಿ ಈ ಹರಾಜು ಮೂಲಕ ಜಮೀನನ್ನು ಹರಾಜು ಮಾಡಿದ್ದು, ಕೂಡಲೇ ಹರಾಜು ರದ್ದು ಮಾಡಿ, ಭೂಮಿಯನ್ನು ವಾಪಸ್ ನೀಡಬೇಕು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಬ್ಯಾಂಕುಗಳಿಗೆ ಸೂಕ್ತ ಸಲಹೆ ನೀಡಬೇಕು ಎಂದು ಗೋವಿಂದರಾಜು ಆಗ್ರಹಿಸಿದರು.

ರೈತ ಸಂಘ ತುಮಕೂರು

ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎಸ್.ಶಂಕರಪ್ಪ ಮಾತನಾಡಿ, “ಪಹಣಿ, ದುರಸ್ತಿ, ಪಕ್ಕಾ ಪೋಡು, ಹದ್ದುಬಸ್ತು, ನೋಂದಣಿ ಶುಲ್ಕ ಎಲ್ಲವೂ ದುಬಾರಿಯಾಗಿದೆ. ಕೂಡಲೇ ವಾಪಸ್ ಪಡೆಯಬೇಕು. ಕಳೆದ 9 ತಿಂಗಳಿನಿಂದ ಬಾಕಿ ಉಳಿಸಿಕೊಂಡಿರುವ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕು. ಹೈನುಗಾರಿಕೆಯನ್ನೇ ನಂಬಿ ಬದುಕುತ್ತಿರುವ ಜನರಿಗೆ ಹಾಲಿನ ಪ್ರೋತ್ಸಾಹ ಅತಿ ಅವಶ್ಯಕವಾಗಿ ಬೇಕಾಗಿದೆ. ಹಾಗೆಯೇ, ನ್ಯಾಪೇಡ್ ಮೂಲಕ ಖರೀದಿಸಿರುವ ರಾಗಿ, ಕೊಬ್ಬರಿಯ ಪ್ರೋತ್ಸಾಹ ದನ ಬಿಡುಗಡೆ ಮಾಡಬೇಕು. ಎತ್ತಿನಹೊಳೆ ಮತ್ತು ಭದ್ರ ಮೇಲ್ದಂಡೆ ಯೋಜನೆಗೆ ಭೂಮಿ ಕಳೆದುಕೊಂಡಿರುವ ರೈತರಿಗೆ ವೈಜ್ಞಾನಿಕ ಪರಿಹಾರ ನೀಡಬೇಕು ಎಂಬುದು ರೈತ ಸಂಘದ ಆಗ್ರಹವಾಗಿದೆ” ಎಂದರು.

ಈ ಸಂಬಂಧ ಮನವಿ ಪತ್ರವನ್ನು ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಅವರಿಗೆ ರೈತ ಸಂಘದ ಮುಖಂಡರು ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಮಹಿಳಾ ಘಟಕದ ಅಧ್ಯಕ್ಷೆ ನಾಗರತ್ನಮ್ಮ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ದೊಡ್ಡಮಾಳಯ್ಯ, ತಾಲೂಕು ಅಧ್ಯಕ್ಷರುಗಳಾದ ಚಿಕ್ಕಬೋರೇಗೌಡ, ವೆಂಕಟೇಗೌಡ, ಲಕ್ಷ್ಮಣ್ ಗೌಡ, ಡಿ.ಆರ್.ರಾಜಶೇಖರ್, ಕೆಂಚಪ್ಪ, ಸಿ.ಜಿ.ಲೋಕೇಶ್, ರಂಗಹನುಮಯ್ಯ, ಶಬ್ಬೀರ್‌ ಪಾಷ, ತಿಮ್ಮೇಗೌಡ, ರವೀಶ್ ಹಾಗೂ ಎಲ್ಲಾ ತಾಲೂಕು ಪ್ರತಿನಿಧಿಗಳು ಭಾಗವಹಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Download Eedina App Android / iOS

X