ತುಮಕೂರು | ಸಂಭ್ರಮದ ರಂಜಾನ್ ಆಚರಣೆ; ಸಾಮೂಹಿಕ ಪ್ರಾರ್ಥನೆ

Date:

Advertisements

ಮುಸ್ಲಿಂ ಬಾಂಧವರ ಪವಿತ್ರ ಹಬ್ಬಗಳಲ್ಲಿ ಒಂದಾದ ಈದ್ ಉಲ್ ಫಿತರ್(ರಂಜಾನ್) ಹಬ್ಬವನ್ನು ತುಮಕೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿದ ಆಚರಿಸಿದರು.

ತುಮಕೂರು ಜಿಲ್ಲೆಯಾದ್ಯಂತ ರಂಜಾನ್ ಪ್ರಯುಕ್ತ ಮಸೀದಿಗಳು, ದರ್ಗಾಗಳನ್ನು ವಿದ್ಯುತ್ ದೀಪಾಲಂಕರಾದಿಂದ ವಿಶೇಷವಾಗಿ ಸಿಂಗರಿಸಲಾಗಿತ್ತು. ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲೂ ಕೂಡಾ ಮುಸ್ಲಿಂ ಬಾಂಧವರು ರಂಜಾನ್ ಹಬ್ಬವನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಅದ್ದೂರಿಯಾಗಿ ಆಚರಿಸಿದರು.

ತುಮಕೂರು ನಗರದ ಕುಣಿಗಲ್ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಜಮಾಯಿಸಿದ ಸಾವಿರಾರು ಮುಸ್ಲಿಂ ಬಾಂಧವರು ಈ ಬಾರಿ ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಬೆಳಿಗ್ಗೆ 10ಕ್ಕೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಹಬ್ಬದ ಶುಭಾಶಯವನ್ನು ವಿನಿಮಯ ಮಾಡಿಕೊಂಡರು.

Advertisements

ಹೊಸ ಉಡುಪುಗಳನ್ನು ಧರಿಸಿ, ಒಬ್ಬರಿಗೊಬ್ಬರು ಆಲಿಂಗನ ಮಾಡಿ ಹಬ್ಬದ ಶುಭಾಶಯ ಕೋರಿದ್ದು ವಿಶೇಷವಾಗಿತ್ತು.

ರಂಜಾನ್ ಹಬ್ಬದ ಸಂಭ್ರಮ ಹಿಂದೂ ಮತ್ತು ಮುಸ್ಲಿಂ ಬಾಂಧವರ ಭಾವೈಕ್ಯತೆಯ ಸಂಕೇತವಾಗಿ ಮಾರ್ಪಟ್ಟಿದ್ದು, ಮುಸ್ಲಿಂ ಬಾಂಧವರಿಗೆ ಹಿಂದೂ ಸಮುದಾಯದವರೂ ಕೂಡಾ ಹಬ್ಬದ ಶುಭಾಶಯ ಕೋರುವ ಮೂಲಕ ಭಾವೈಕ್ಯತೆಯನ್ನು ಸಾರಿದರು.

ರಂಜಾನ್‌ ತುಮಕೂರುಈದ್ಗಾ ಮೈದಾನಕ್ಕೆ ಗೃಹ ಸಚಿವ ಡಾ. ಜಿ ಪರಮೇಶ್ವರ್, ಮಾಜಿ ಸಂಸದ ಎಸ್ ಪಿ ಮುದ್ದಹನುಮೇಗೌಡ, ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ ಹಾಲಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ, ಮಾಜಿ ಶಾಸಕರುಗಳಾದ ಎಸ್ ಷಫಿಅಹಮದ್, ಡಾ. ರಫೀಕ್‌ಅಹಮದ್, ಇಕ್ಬಾಲ್ ಅಹಮದ್, ಅಸ್ಲಾಂಪಾಷ, ಅಪ್ತಾಫ್, ನಯಾಜ್ ಅಹಮದ್ ಗುರುಪ್ರಸಾದ್, ವೇಣುಗೋಪಾಲ್ ಭೇಟಿ ನೀಡಿ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯ ಕೋರಿದರು.

ಈದ್ಗಾ ಮೈದಾನಕ್ಕೆ ಭೇಟಿ ನೀಡಿದ್ದ ಗೃಹ ಸಚಿವ ಡಾ. ಜಿ ಪರಮೇಶ್ವರ್, ಮುದ್ದಹನುಮೇಗೌಡ ಹಾಗೂ ಮುರುಳೀಧರ ಹಾಲಪ್ಪ ಅವರನ್ನು ಮುಸ್ಲಿಂ ಬಾಂಧವರು ಅಭಿನಂದಿಸಿದರು.

ಇದೇ ಸಂದರ್ಭದಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಮಾತನಾಡಿ, “ಒಂದು ತಿಂಗಳು ರೋಜಾ ಆಚರಣೆ ಮಾಡಿ ಅತ್ಯಂತ ಪವಿತ್ರವಾಗಿ ಆಚರಿಸುವ ಹಬ್ಬ ರಂಜಾನ್. ಎಲ್ಲ ಮುಸ್ಲಿಂ ಬಾಂಧವರಿಗೆ ಪವಿತ್ರ ರಂಜಾನ್ ಹಬ್ಬದ ಶುಭಾಶಯ ಕೋರುತ್ತೇನೆ” ಎಂದರು.

“ಭವಿಷ್ಯದ ದಿನಗಳಲ್ಲಿ ನನ್ನ ಜೀವನದಲ್ಲಿ ಒಳ್ಳೆಯದನ್ನೇ ಮಾಡು, ಇಡೀ ವಿಶ್ವಕ್ಕೆ, ಮನುಕುಲಕ್ಕೆ ಶಾಂತಿ-ಸೌಹಾರ್ದತೆಯನ್ನು ಕಾಪಾಡಬೇಕು ಎಂದು ಅಲ್ಲಾನಿಗೆ ಪ್ರಾರ್ಥನೆ ಸಲ್ಲಿಸುವಂತಹ ಸುಸಂದರ್ಭ ಈ ರಂಜಾನ್ ಹಬ್ಬವಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಹಿರಿಯ ಹೋರಾಟಗಾರ ಕೋಟಿಗಾನಹಳ್ಳಿ ರಾಮಯ್ಯ ಮೇಲೆ ಮಾರಣಾಂತಿಕ ಹಲ್ಲೆ

ಹಬ್ಬದ ಪ್ರಯುಕ್ತ ಕುಣಿಗಲ್ ರಸ್ತೆಯಲ್ಲಿರುವ ಈದ್ಗಾ ಮೈದಾನದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮಾಡಿದ್ದರು.

ರಂಜಾನ್ ಹಬ್ಬದ ಅಂಗವಾಗಿ ಮುಸ್ಲಿಂ ಬಾಂಧವರು ಕುಣಿಗಲ್ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವುದರಿಂದ ಯಾವುದೇ ರೀತಿಯ ಅಡಚಣೆಗಳು ಉಂಟಾಗದಂತೆ ಮುಂಜಾಗ್ರತಾ ಕ್ರಮವಾಗಿ ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗದ ವ್ಯವಸ್ಥೆ ಮಾಡಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X