ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಬಂಧಿಸಿ : ಡಾ.ಹೆಚ್.ವಿ. ರಂಗಸ್ವಾಮಿ

Date:

Advertisements

ತುಮಕೂರು: ಆಗಸ್ಟ್ 08 ರಂದು ಕಲ್ಕತ್ತಾದ ಆರ್.ಜಿ.ಕರ್ ಮೆಡಿಕಲ್ ಕಾಲೇಜಿನ ದ್ವಿತೀಯ ವರ್ಷದ ಸ್ನಾತೋತ್ತರ ವೈದ್ಯಕೀಯ ವಿದ್ಯಾರ್ಥಿನಿ ಡಾ.ಮೌಮಿತಾ ದೆಬನಾಥ್ ಮೇಲೆ ನಡೆದಿರುವ ಅತ್ಯಾಚಾರ ಮತ್ತು ಕೊಲೆ ಖಂಡನೀಯ.ಇಡೀ ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ವಿಷಯವಾಗಿದೆ ಎಂದು ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಡಾ.ಹೆಚ್.ವಿ. ರಂಗಸ್ವಾಮಿ ತಿಳಿಸಿದರು.

ತುಮಕೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಇಡೀ ಘಟನೆಯನ್ನು ಅವಲೋಕಿಸಿದಾಗ ಎಲ್ಲಾ ವರ್ಗದ ಮಹಿಳೆಯರಿಗೆ ಸುರಕ್ಷತೆಯ ಕೊರತೆ ಇದೆ ಎಂಬುದು ಸಾಭೀತಾಗುತ್ತದೆ. ಸರಕಾರ ಕೂಡಲೇ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಬಂಧಿಸಿ,ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಇಂತಹ ಘಟನಗಳು ಮರುಕಳುಹಿಸದಂತೆ ಎಚ್ಚರಿಕೆ ವಹಿಸಬೇಕೆಂಬುದು ನಮ್ಮ ಒತ್ತಾಯವಾಗಿದೆ ಎಂದರು.

ವೈದ್ಯಕೀಯ ಶಿಕ್ಷಣ ಪಡೆಯುವುದು ಹುಡುಗಾಟದ ವಿಷಯವಲ್ಲ. ಸಾಕಷ್ಟು ಶ್ರಮವಹಿಸಿ ಈ ವೃತ್ತಿಯನ್ನು ಆರಿಸಿಕೊಂಡು ಬಂದಿರುತ್ತಾರೆ.ಜೀವ ಉಳಿಸುವ ವೈದ್ಯರ ಸ್ಥಿತಿಯೇ ಈಗಾದರೆ,ಜನಸಾಮಾನ್ಯರ ಪಾಡೇನು ಎಂಬ ಪ್ರಶ್ನೆ ಮೂಡುತ್ತದೆ.ಅಲ್ಲದೆ ವೈದ್ಯರ ಮೇಲಿನ ಹಲ್ಲೆ,ದೌರ್ಜನ್ಯ,ದಬ್ಬಾಳಿಕೆ ಹಾಗೂ ತಮ್ಮದಲ್ಲದೆ ತಪ್ಪಿಗೆ ವೈದ್ಯರು ಹಲ್ಲೆಗಳಿಗೆ ಗುರಿಯಾಗುತ್ತಿರುವ ಹಿನ್ನೆಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ವೈದ್ಯಕೀಯ ಕ್ಷೇತ್ರಕ್ಕೆ ಬರುವ ಹೆಣ್ಣು ಮಕ್ಕಳ ಸಂಖ್ಯೆ ಸಹ ಕುಸಿದಿದೆ.ಇದು ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ.ಹಾಗಾಗಿ ಸರಕಾರ ಕೂಡಲೇ ಸೂಕ್ತ ತನಿಖೆ ನಡೆಸಿ,ತಪಿತಸ್ಥರನ್ನು ಪತ್ತೆ ಹೆಚ್ಚಿ ಉಗ್ರವಾದ ಶಿಕ್ಷೆಗೆ ಗುರಿ ಪಡಿಸಬೇಕು.ಇದಕ್ಕಾಗಿ ಸೂಕ್ತ ಕಾಯ್ದೆಯೊಂದನ್ನು ಜಾರಿಗೆ ತರಬೇಕೆಂಬುದು ನಮ್ಮಗಳ ಆಗ್ರಹವಾಗಿದೆ ಎಂದರು.

Advertisements

ವೈದ್ಯಕೀಯ ಕ್ಷೇತ್ರದ ಮಹಿಳೆಯರು ಸೇರಿದಂತೆ ಎಲ್ಲಾ ಕ್ಷೇತ್ರಗಳ ಮಹಿಳೆಯರ ಸಂರಕ್ಷಣೆಯ ದೃಷ್ಟಿಯಿಂದ ಸರಕಾರ ತಜ್ಞರು ಸಲಹೆ ಪಡೆದು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು.ಈ ರೀತಿ ಘಟನೆಗಳು ಮಹಿಳೆಯರು ಮೇಲೆ ನಡೆಯುತ್ತಿರುವ ಅತ್ಯಂತ ದುರದೃಷ್ಟಕರ ಸಂಗತಿಯಾಗಿದೆ. ನಮ್ಮ ಸಮಾಜ ಎತ್ತ ಸಾಗುತ್ತಿದೆ ಎಂಬುದರ ಪ್ರತಿಬಿಂಬವಾಗಿದೆ. ಹಾಗಾಗಿ ಸರಕಾರ ಮತ್ತು ಸಂಸ್ಥೆಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂಬುದು ನಮ್ಮಗಳ ಒತ್ತಾಯವಾಗಿದೆ ಎಂದರು.

ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆಯ ಬಾ.ಹ.ರಮಾಕುಮಾರಿ ಮಾತನಾಡಿ, ಸಮಾಜದಲ್ಲಿ ಹೆಣ್ಣು ಮಕ್ಕಳ ಸುರಕ್ಷತೆಯ ಬಗ್ಗೆ ಮನ ಪರಿವರ್ತನೆಯಾಗಬೇಕಿದೆ.ಆಗಸ್ಟ್ 08ರ ಘಟನೆ ಲಿಂಗತಾರತಮ್ಮದ ಪ್ರತೀಕವಾಗಿದೆ.ಹೆಣ್ಣನ್ನು ನೋಡುವ ದೃಷ್ಟಿಕೋನ ಬದಲಾಗದ ಹೊರತು ಇಂತಹ ಘಟನೆಗಳ ನಿಲ್ಲಲ್ಲು ಸಾಧ್ಯವಿಲ್ಲ. ಹಾಗಾಗಿ ಶಾಲೆಗಳಲ್ಲಿ, ಮನೆಯಲ್ಲಿಯೇ ಹೆಣ್ಣು, ಗಂಡನ್ನು ನೋಡುವ ದೃಷ್ಟಿಕೋನದಲ್ಲಿ ಅಮೂಲಾಗ್ರ ಬದಲಾವಣೆ ಆಗಬೇಕಿದೆ.ಈ ಘಟನೆಯ ವಿರುದ್ದ ಎಲ್ಲರೂ ಹೋರಾಟಕ್ಕೆ ಇಳಿದು ಆಳುವ ಸರಕಾರಗಳಿಗೆ ಪ್ರತಿರೋಧದ ದ್ವನಿ ತಟ್ಟುವಂತೆ ಮಾಡಬೇಕೆಂದರು.

ಸುದ್ದಿಗೋಷ್ಠಿಯ ನಂತರ ನಗರದ ಟೌನ್‌ಹಾಲ್ ವೃತದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಡಾ.ಮೌಮಿತಾ ದೆಬನಾಥ್ ಮೇಲಿನ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ, ಆಕೆಯ ಸಾವಿಗೆ ಸಂಪಾತ ಸೂಚಿಸಿ ಮೇಣದ ಬತ್ತಿ ಹಚ್ಚಲಾಯಿತು.

ಐಎಂಎ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ.ಮಹೇಶ್,ಡಾ.ಡಿ.ಹನುಮಕ್ಕ, ಐಎಂಎ ಮಹಿಳಾ ಘಟಕದ ಡಾ.ಅನಿತಾ ಬಿಗೌಡ, ಡಾ.ಶೃತಿ.ಕೆ ಸೇರಿದಂತೆ ಸಾರ್ವಜನಿಕರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X