ತುಮಕೂರು | ಹೆಚ್ಚುವರಿಯಾಗಿ 12 ಸಾವಿರ ಶಿಕ್ಷಕರ ನೇಮಕ : ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ

Date:

Advertisements

ಶಾಲಾ ಶಿಕ್ಷಕರ ಕೊರತೆ ನೀಗಿಸುವ ಸಲುವಾಗಿ ಈಗಾಗಲೇ 12,000 ಶಾಲಾ ಶಿಕ್ಷಕರ ನೇಮಕಾತಿ ಮಾಡಲಾಗಿದ್ದು, ಹೆಚ್ಚುವರಿಯಾಗಿ ಇನ್ನು 12,000 ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ತುಮಕೂರು ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಚಿವ ಡಾ.ಜಿ. ಪರಮೇಶ್ವರ್ ಅಧ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲಿಸಿ ಮಾತನಾಡಿದ ಅವರು, ಪ್ರಸಕ್ತ ಶೈಕ್ಷಣಿಕ ವರ್ಷಾರಂಭಕ್ಕೆ ಮುನ್ನವೇ 50,000 ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ. ಅಲ್ಲದೆ ಅನುದಾನಿತ ಶಾಲೆಗಳಲ್ಲಿ 5 ವರ್ಷಗಳಿಂದಲೂ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿಗೆ ಅನುಮತಿ ನೀಡಲಾಗಿದೆ” ಎಂದರು.

ಪ್ರಸಕ್ತ ಸಾಲಿನಲ್ಲಿ 2,000 ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ತೆರೆಯಲಾಗಿದ್ದು, 1008 ಅಂಗನವಾಡಿಗಳಲ್ಲಿ ಎಲ್‌ಕೆಜಿ-ಯುಕೆಜಿ ಆರಂಭಿಸಲಾಗಿದೆ ಕೇವಲ 28 ದಿನಗಳಲ್ಲಿ 32,000 ಮಕ್ಕಳು ದಾಖಲಾಗುವ ಮೂಲಕ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ತಿಳಿಸಿದರು.

Advertisements

ಶಾಲಾ ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಿಸುವ ನಿಟ್ಟಿನಲ್ಲಿ ಉದ್ಯಮಿ ಅಝೀಂ ಪ್ರೇಮ್ ಜಿ ಫೌಂಡೇಷನ್ ಅವರೊಂದಿಗೆ 1500 ಕೋಟಿ ರೂ. ವೆಚ್ವದ ಯೋಜನೆಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಇದರಿಂದಾಗಿ ರಾಜ್ಯಾದ್ಯಂತ ಎಲ್ಲ ಸರ್ಕಾರಿ ಶಾಲಾ ಮಕ್ಕಳಿಗೆ ಪ್ರತಿದಿನ ಮೊಟ್ಟೆ ನೀಡಲಾಗುವುದು ಎಂದರು.

ಮೂರು ವರ್ಷದಲ್ಲಿ ಮೂರು ಸಾವಿರ ಶಾಲೆ

ರಾಜ್ಯಾದ್ಯಂತ ಮುಂದಿನ ಮೂರು ವರ್ಷಗಳಲ್ಲಿ ಮೂರು ಸಾವಿರ ಕೆಪಿಎಸ್ ಶಾಲೆಗಳನ್ನು ಆರಂಭಿಸಲಾಗುವುದು. ರಾಜ್ಯದ ಎಲ್ಲ ವರ್ಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕಿದೆ. ಈ ನಿಟ್ಟಿನಲ್ಲಿ ಮುಂದಿನ ಮೂರು ವರ್ಷಗಳಲ್ಲಿ 3,000 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸುವ ಉದ್ದೇಶ ಹೊಂದಿರುವುದಾಗಿ ತಿಳಿಸಿದರು.

ಪ್ರಸಕ್ತ ವರ್ಷದಲ್ಲೇ 500 ಕೆಪಿಎಸ್ ಶಾಲೆಗಳನ್ನು ಆರಂಭಿಲಾಗುತ್ತಿದೆ ಎಂದ ಅವರು, ಕೆಪಿಎಸ್ ಶಾಲೆಗಳನ್ನು ಆರಂಭಿಸುವುದರಿಂದ ಮುಂದಿನ ಮೂರು ವರ್ಷಗಳಲ್ಲಿ ಸುಮಾರು 45 ಲಕ್ಷ ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುವಂತಾಗಲಿದೆ ಎಂದರು.

ಕೆಪಿಎಸ್ ಶಾಲೆಗಳನ್ನು ಸಂಪೂರ್ಣವಾಗಿ ಖಾಸಗಿ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆಯ ಅನುದಾನದಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ಉತ್ತಮ ಗುಣ ಮಟ್ಟದ ಮೂಲಸೌಲಭ್ಯಗಳೊಂದಿಗೆ ಸ್ಥಾಪಿಸಲಾಗುತ್ತಿದೆ ಎಂದರು.

ಕೆಪಿಎಸ್ ಶಾಲೆಗಳನ್ನು ಆರಂಭಿಸುವ ಸಂಬಂಧ ಈಗಾಗಲೇ ಆಯಾ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಪಟ್ಟಿ ಮಾಡುವಂತೆ ಸೂಚಿಸಲಾಗಿದೆ. ಅಧಿಕಾರಿಗಳು ಪಟ್ಟಿ ಮಾಡುವಾಗ ಆಯಾ ಶಾಸಕರ ಅಭಿಪ್ರಾಯಗಳನ್ನು ಪಡೆಯಬೇಕು ಎಂದು ತಿಳಿಸಿದರು.

ಪೋಷಕರು ತಮ್ಮ ಮಕ್ಕಳನ್ನು ಸರಿಯಾಗಿ ಶಾಲೆಗೆ ಕಳಿಸಬೇಕು. ಇದರಿಂದ ಸರ್ಕಾರದ ಈ ಯೋಜನೆಗಳು ಸಾರ್ಥಕತೆ ಪಡೆಯುತ್ತವೆ ಎಂದರಲ್ಲದೆ, ಸರ್ಕಾರಿ ಶಾಲೆಗಳಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತಮ ಫಲಿತಾಂಶಕ್ಕಾಗಿ ಶಾಲಾ ಶಿಕ್ಷಕರು ವಾರಕ್ಕೊಮ್ಮೆ ವಿಶೇಷ ತರಗತಿ ತೆಗೆದುಕೊಳ್ಳಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಸಂಸದ ಗೋವಿಂದ ಕಾರಜೋಳ, ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ.ಜಯಚಂದ್ರ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಶಾಸಕರಾದ ಜಿ.ಬಿ. ಜ್ಯೋತಿ ಗಣೇಶ್, ಡಾ ಹೆಚ್.ಡಿ. ರಂಗನಾಥ್, ಕೆ. ಷಡಾಕ್ಷರಿ, ಎಂ.ಟಿ.ಕೃಷ್ಣಪ್ಪ, ಬಿ.ಸುರೇಶ್‌ಗೌಡ, ಹೆಚ್.ವಿ. ವೆಂಕಟೇಶ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X