ತುಮಕೂರು | ಕಂದಾಯ ಗ್ರಾಮ ರಚನೆ : ವಾರದೊಳಗಾಗಿ ಪ್ರಸ್ತಾವನೆ ಸಲ್ಲಿಸಲು ಡಿಸಿ ಸೂಚನೆ

Date:

Advertisements

ತುಮಕೂರು ಜಿಲ್ಲೆಯಲ್ಲಿ ಹೊಸದಾಗಿ ಕಂದಾಯ ಗ್ರಾಮ, ಉಪ ಗ್ರಾಮ, ಬಡಾವಣೆ ರಚನೆಗೆ ಸಂಬಂಧಿಸಿದಂತೆ ಒಂದು ವಾರದೊಳಗಾಗಿ ಪ್ರಸ್ತಾವನೆಗಳನ್ನು ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕಂದಾಯ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದರು.

ಕಂದಾಯ ಇಲಾಖೆ, ಜಿಲ್ಲಾ ಪಂಚಾಯತ್ ಹಾಗೂ ಭೂಮಾಪನ ಮತ್ತು ಭೂ ದಾಖಲೆಗಳ ಇಲಾಖೆಯ ಸಹಯೋಗದಲ್ಲಿ ಕಂದಾಯ ಗ್ರಾಮ, ಉಪಗ್ರಾಮ ಹಾಗೂ ಬಡಾವಣೆ ರಚನೆ ಸಂಬಂಧಿತ ವಿಷಯಗಳ ಬಗ್ಗೆ ಮಂಗಳವಾರ ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಏರ್ಪಡಿಸಿದ್ದ ವಿಶೇಷ ತರಬೇತಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು 50ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಮನೆಗಳು ಅಥವಾ 250ಕ್ಕೂ ಹೆಚ್ಚು ಜನಸಂಖ್ಯೆ ಇರುವ ದಾಖಲೆ ರಹಿತ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಗುರುತಿಸಬೇಕು. ಈ ಗ್ರಾಮವು ಮೂಲ ಗ್ರಾಮದಿಂದ 1 ಕಿ.ಮೀ. ಅಂತರದಲ್ಲಿರಬೇಕು. ಅದೇ ರೀತಿ 10ಕ್ಕೂ ಅಧಿಕ 50ಕ್ಕಿಂತ ಕಡಿಮೆ ಮನೆಗಳನ್ನು ಹೊಂದಿರುವ ಹಾಗೂ ಕಂದಾಯ ಗ್ರಾಮವಾಗಲು ಅನರ್ಹವಿರುವ ಜನವಸತಿ ಪ್ರದೇಶಗಳನ್ನು ಉಪಗ್ರಾಮವನ್ನಾಗಿಸುವ ಪ್ರಸ್ತಾವನೆ ಸಲ್ಲಿಸಲು ಅವಕಾಶವಿದೆ ಎಂದು ತಿಳಿಸಿದರು.

1001774116

ಕಂದಾಯ ಗ್ರಾಮ ರಚನೆ ಸಂಬಂಧ ಸಂಪನ್ಮೂಲ ವ್ಯಕ್ತಿಗಳು ತರಬೇತಿಯಲ್ಲಿ ನೀಡಿದ ನಿಯಮಗಳನ್ನು ಅನುಸರಿಸಬೇಕು. ಕಂದಾಯ ವಿಷಯಗಳ ಬಗ್ಗೆ ಇರುವ ಸಂದೇಹಗಳನ್ನು ಪರಿಹರಿಸಿಕೊಳ್ಳಲು ತರಬೇತಿ ಕುರಿತ ಹೆಚ್ಚಿನ ಮಾಹಿತಿಯನ್ನು ಯು-ಟ್ಯೂಬ್ ಚಾನೆಲ್‌ಗೆ ಅಪ್‌ಲೋಡ್ ಮಾಡಲಾಗುವುದು. ಅಧಿಕಾರಿ,ಸಿಬ್ಬಂದಿಗಳು ಇದರ ಸದುಪಯೋಗ ಪಡೆಯಬಹುದು ಎಂದು ತಿಳಿಸಿದರು.

Advertisements

ತರಬೇತಿಯ ಸಂಪನ್ಮೂಲ ವ್ಯಕ್ತಿ ಹಾಗೂ ಕಂದಾಯ ಇಲಾಖೆ ಆಯುಕ್ತಾಲಯದ ತಹಶೀಲ್ದಾರ್ ಗಣಪತಿಶಾಸ್ತ್ರಿ ಮಾತನಾಡಿ ಕಂದಾಯ ಗ್ರಾಮ ರಚನೆಯ ಕಾಯ್ದೆ, ನಿಯಮ, ಕಂದಾಯ ಗ್ರಾಮ, ಉಪ ಗ್ರಾಮಗಳಿಗಿರಬೇಕಾದ ಅರ್ಹತೆ, ಪ್ರಸ್ತಾವನೆ ತಯಾರಿಕೆ, ಕಂದಾಯ ಗ್ರಾಮಗಳನ್ನಾಗಿಸಲು ಪ್ರಾಥಮಿಕ ಹಾಗೂ ಅಂತಿಮ ಅಧಿಸೂಚನೆ, ಹಕ್ಕುಪತ್ರ ನೀಡಿಕೆ, ಹಕ್ಕುಪತ್ರ ತಂತ್ರಾಂಶ ನಿರ್ವಹಣೆ, ಹಕ್ಕುಪತ್ರ ತಿದ್ದುಪಡಿ, ಸೇರಿದಂತೆ ಮತ್ತಿತರ ವಿಷಯಗಳ ಬಗ್ಗೆ ಮಾಹಿತಿ ನೀಡಿದರು. 

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿಗಳಾದ ಗೋಟೂರು ಶಿವಪ್ಪ, ನಾಹಿದಾ ಜಮ್ ಜಮ್, ಸಪ್ತಶ್ರೀ, ತಹಶೀಲ್ದಾರರಾದ ಮಂಜುನಾಥ, ಶಿರಿನ್ ತಾಜ್, ಪಿ.ಎಸ್. ರಾಜೇಶ್ವರಿ, ಮೋಹನ್‌ಕುಮಾರ್, ಎನ್.ಎ. ಕುಂಜಿ ಅಹಮದ್, ಭೂ ದಾಖಲೆಗಳ ಇಲಾಖೆ ಉಪ ನಿರ್ದೇಶಕ ನಿರಂಜನ್ ಸೇರಿದಂತೆ ಗ್ರಾಮಾಡಳಿತಾಧಿಕಾರಿಗಳು, ಪಿಡಿಒಗಳು, ಕಂದಾಯ ನಿರೀಕ್ಷಕರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X