ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಹಿಳೆಯರು ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸೋಮವಾರ ಮುಂಜಾನೆ ನಡೆದಿದೆ.
ಇನ್ನು ಈ ಭೀಕರ ರಸ್ತೆ ಅಫಘಾತದಲ್ಲಿ ಕನಿಷ್ಠ 20 ಮಂದಿಗೆ ಗಾಯವಾಗಿದೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ತಿಳಿದುಬಂದಿದೆ.
ಇದನ್ನು ಓದಿದ್ದೀರಾ? ಹಾಸನ | ಪೊಲೀಸ್ ಜೀಪ್ ಅಪಘಾತ; ಪ್ರೊಬೇಷನರಿ ಐಪಿಎಸ್ ಅಧಿಕಾರಿ ಸಾವು
ಗೋವಾದಿಂದ ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ಒಂದು ಡಿವೈಡರ್‌ಗೆ ಡಿಕ್ಕಿಯಾಗಿ ಉರುಳಿ ಬಿದ್ದ ಕಾರಣ ಈ ದುರ್ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.

ಸಿಂಬಾಳಿ ಸಿಂಗ್, ಊರ್ವಿ ಹಾಗೂ ಪ್ರಿಯಾಂಕ ಮೃತ ಮಹಿಳೆಯರು ಎಂದು ಗುರುತಿಸಲಾಗಿದೆ. ಗಾಯಾಳುಗಳಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕೆಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಜಿಲ್ಲಾಸ್ಪತ್ರೆ ಹಾಗೂ ಸಿದ್ಧಗಂಗಾ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಬಸ್‌ನಲ್ಲಿ ಒಟ್ಟು 29 ಮಂದಿ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಪಘಾತದ ಪರಿಣಾಮ ಕೆಲ ಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.

