ತುಮಕೂರು | ದಿನಸಿ ಅಂಗಡಿಗಳಲ್ಲಿ ಮದ್ಯ ಮಾರಾಟ; ದೂರು ನೀಡಿದ ಪರಿಶಿಷ್ಟರಿಗೆ ದಿನಸಿ ಸ್ಥಗಿತ

Date:

ದಿನಸಿ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂದು ದೂರು ನೀಡಿದ ಕಾರಣ ಅಂಗಡಿಗಳಲ್ಲಿ ತಮಗೆ ದಿನಸಿ ಸೇರಿದಂತೆ ದಿನಬಳಕೆ ಅಗತ್ಯ ವಸ್ತು ನೀಡುತ್ತಿಲ್ಲವೆಂದು ಆರೋಪಿಸಿ ಪರಿಶಿಷ್ಟ ಸಮುದಾಯದ ಮಹಿಳೆಯರು ಪೊಲೀಸರಿಗೆ ದೂರು ನೀಡಿದ್ದಾರೆ.

- Advertisement -

ತುಮಕೂರು ಜಿಲ್ಲೆ ಶಿರಾ ತಾಲೂಕಿನ ನಾರಗೊಂಡನಹಳ್ಳಿ ಗ್ರಾಮದ ಎಂಟು ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆಯೆಂದು ಎರಡು ದಿನದ ಹಿಂದೆ ಗ್ರಾಮದ ಮಹಿಳೆಯರು ಪೊಲೀಸರಿಗೆ ದೂರು ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಆ ಅಂಗಡಿಗಳ ಮಾಲೀಕರು ಇದೀಗ “ನಮ್ಮ ವಿರುದ್ಧ ದೂರು ನೀಡಿದ್ದೀರಾ. ನಿಮಗೆ ಯಾವುದೇ ಸಾಮಗ್ರಿ ನೀಡುವುದಿಲ್ಲ, ಬೇರೆ ಕಡೆ ತೆಗೆದುಕೊಳ್ಳಿ” ಎಂದು ವಾಪಸ್‌ ಕಳುಹಿಸುತ್ತಿದ್ದಾರೆಂದು ಮಹಿಳೆಯರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ನಾವು ಯಾರಿಗೂ ಸಾಮಗ್ರಿ ನೀಡುವುದಿಲ್ಲವೆಂದು ಹೇಳಿಲ್ಲ. ಈಗಾಗಲೇ ಅವರಿಗೆ ಸಾಲವನ್ನೂ ನೀಡಿದ್ದೇವೆ. ಬೆಲೆ ಏರಿಕೆಯಿಂದ ಕೆಲವು ಪದಾರ್ಥ ತರುತ್ತಿಲ್ಲ” ಎಂದು ಅಂಗಡಿ ಮಾಲೀಕರು ಸ್ಪಷ್ಟಪಡಿಸಿದ್ದಾರೆ.

ಈ ಬೆಳವಣಿಗೆಯ ಬೆನ್ನಲ್ಲೇ ಪಟ್ಟನಾಯಕನಹಳ್ಳಿ ಠಾಣೆ ಪೊಲೀಸರು ಶನಿವಾರ ಅಂಗಡಿ ಮಾಲೀಕರು ಮತ್ತು ಪರಿಶಿಷ್ಟ ಸಮುದಾಯದ ಮಹಿಳೆಯರನ್ನೂ ಕರೆಸಿ ಮಾತನಾಡಿಸಿದ್ದಾರೆ.

“ಯಾರಿಗೂ ದಿನಸಿ ನೀಡದೆ ವಾಪಸ್‌ ಕಳುಹಿಸಿಲ್ಲ. ಒಂದು ವೇಳೆ ಅಕ್ರಮವಾಗಿ ಮದ್ಯ ಮಾರಾಟ ಮಾಡಿದರೆ ಪ್ರಕರಣ ದಾಖಲಿಸಿ” ಎಂದು ಅಂಗಡಿ ಮಾಲೀಕರು ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಮದ್ಯ ಮಾರಾಟ ಮಾಡುತ್ತಿದ್ದ ನರಸಿಂಹಮೂರ್ತಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಗ್ರಾಮದಲ್ಲಿ ಯಾವುದೇ ಗೊಂದಲ ಇಲ್ಲ. ಎಲ್ಲರೂ ಒಮ್ಮತದಿಂದ ಇದ್ದಾರೆ” ಎಂದು ಪಿಎಸ್ಐ ಭವಿತಾ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...