ತುಮಕೂರು | ಅನುಸೂಚಿತ ಜಾತಿ, ಪಂಗಡಗಳ ಸಮುದಾಯದವರ ಸಮಸ್ಯೆಗಳ ಅಹವಾಲು ಸಲ್ಲಿಸಲು ಅ.18ರವರೆಗೂ ಅವಕಾಶ

Date:

Advertisements

ಕರ್ನಾಟಕ ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಹಾಗೂ ಸದಸ್ಯರು ಅಕ್ಟೋಬರ್ 19ರಂದು ತುಮಕೂರು ನಗರಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿರುವ ಹಿನ್ನೆಲೆಯಲ್ಲಿ ಸಮಿತಿ ಗಮನಕ್ಕೆ ತರಬಹುದಾದ ಎಸ್‌ಸಿಪಿ, ಟಿಎಸ್‌ಪಿ ಯೋಜನೆಗಳಿಗೆ ಸಂಬಂಧಿಸಿದ ಅಹವಾಲುಗಳನ್ನು ಅಕ್ಟೋಬರ್ 18ರೊಳಗಾಗಿ ಜಿಲ್ಲಾಧಿಕಾರಿಗಳ ಅಥವಾ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರ ಕಚೇರಿಗೆ ಸಲ್ಲಿಸಲು ಅವಕಾಶವಿದೆ ಎಂಬ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ಸಮಿತಿ ಭೇಟಿ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಪ್ರಗತಿ ಪರಿಶೀಲನಾ ಸಭೆಯು ಅಕ್ಟೋಬರ್ 19ರಂದು ಮಧ್ಯಾಹ್ನ 2.30 ಗಂಟೆಗೆ ನಗರದ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ನಡೆಯಲಿದ್ದು, ಸಮಿತಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಅನುಸೂಚಿತ ಜಾತಿ/ಪಂಗಡಗಳ ಸಮುದಾಯದವರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಂಘ ಸಂಸ್ಥೆ ಹಾಗೂ ಸಮುದಾಯದ ಜನಸಾಮಾನ್ಯರಿಂದ ಸಾರ್ವಜನಿಕ ಹಿತಾಸಕ್ತಿಯುಳ್ಳ ಅಹವಾಲುಗಳನ್ನು ಸಲ್ಲಿಸಲಿಚ್ಛಿಸುವವರು ಅಕ್ಟೋಬರ್ 18ರೊಳಗಾಗಿ ಜಿಲ್ಲಾಧಿಕಾರಿಗಳ ಅಥವಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಗೆ ನೇರವಾಗಿ ಸಲ್ಲಿಸಲು ಅವಕಾಶವಿದೆ ಎಂದು ಅವರು ತಿಳಿಸಿದರು.

1000545294

ಸ್ವೀಕೃತ ಅಹವಾಲುಗಳನ್ನು ಪ್ರಗತಿ ಪರಿಶೀಲನಾ ಸಭೆಯ ದಿನದಂದು ಸಮಿತಿಯ ಅಧ್ಯಕ್ಷರ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರಲ್ಲದೆ, ಕಳೆದ 2021-22, 2022-23, 2024-24, ಹಾಗೂ 2024ನೇ ಸೆಪ್ಟೆಂಬರ್ ಮಾಹೆವರೆಗಿನ ಸಮರ್ಪಕ ಮಾಹಿತಿಯೊಂದಿಗೆ ಖುದ್ದಾಗಿ ಸಭೆಗೆ ಹಾಜರಿರಬೇಕೆಂದು ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.

Advertisements

ಜಿಲ್ಲೆಯಲ್ಲಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಸಮುದಾಯದವರ ಅಭಿವೃದ್ಧಿಗಾಗಿ ವಿವಿಧ ಇಲಾಖೆಗಳಲ್ಲಿ ಹಮ್ಮಿಕೊಳ್ಳಲಾಗಿರುವ ವಿವಿಧ ಯೋಜನೆ/ಕಾರ್ಯಕ್ರಮಗಳ ಪ್ರಗತಿ ಕುರಿತಂತೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ಉಪ ವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮನಮೋಹನ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಾಲಗುರುಮೂರ್ತಿ, ಮಹಿಳಾ ಅಭಿವೃದ್ಧಿ ಅಧಿಕಾರಿ ಪವಿತ್ರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಮೇಶ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಂಜಿನಪ್ಪ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಸೋನಿಯಾ ವರ್ಣೇಕರ್, ಮುಜರಾಯಿ ಇಲಾಖೆ ತಹಶೀಲ್ದಾರ್ ಸವಿತಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತ್ಯಾಗರಾಜ್, ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X