ತುಮಕೂರು | ಮೊದಲ ದಿನದ ದ್ವಿತೀಯ ಪಿಯುಸಿ ಪರೀಕ್ಷೆ ಯಶಸ್ವಿ; ಪರೀಕ್ಷಾ ಕೇಂದ್ರಗಳಿಗೆ ಡಿಸಿ ಭೇಟಿ

Date:

ಮೊದಲ ದಿನದ ದ್ವಿತೀಯ ಪಿಯುಸಿ ಪರೀಕ್ಷೆ ಇಂದು ಆರಂಭವಾಗಿದ್ದು, ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದ ನಗರದ ಸರ್ಕಾರಿ ಎಂಪ್ರೆಸ್ ಬಾಲಕಿಯರ ಪದವಿ ಪೂರ್ವ ಕಾಲೇಜು, ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಕಾಳಿದಾಸ ನಗರದ ಪದವಿ ಪೂರ್ವ ಕಾಲೇಜು ಹಾಗೂ ಸಿದ್ದಗಂಗಾ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

- Advertisement -

ಭಯ ಬೇಡ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಪರೀಕ್ಷೆಗೂ ಮುನ್ನ ಮಾತನಾಡಿದ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭವಾಗಿದ್ದು,  ಮಕ್ಕಳು ಯಾವುದೇ ರೀತಿ ಭಯ ಪಡದೆ ಧೈರ್ಯವಾಗಿ ಪರೀಕ್ಷೆಯನ್ನು ಬರೆಯಬೇಕು. ಉನ್ನತ ವ್ಯಾಸಂಗಕ್ಕೆ ದ್ವಿತೀಯ ಪಿಯುಸಿ ತರಗತಿ ಪ್ರಮುಖ ಘಟ್ಟವಾಗಿದ್ದು, ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡದೆ ತರಗತಿ ವಿಷಯಗಳನ್ನು ಅಭ್ಯಾಸ ಮಾಡಿ ಹೆಚ್ಚಿನ ಅಂಕಗಳನ್ನು ಗಳಿಸಬೇಕೆಂದು ಹಾರೈಸಿದರು.

ಸಿಇಒ ಭೇಟಿ

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಅವರು ನಗರದ ಸರ್ವೋದಯ ಪದವಿ ಪೂರ್ವ ಕಾಲೇಜು ಹಾಗೂ ಸಿದ್ದಗಂಗಾ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

1067 ವಿದ್ಯಾರ್ಥಿಗಳು ಗೈರು

ಜಿಲ್ಲೆಯ 35 ಪರೀಕ್ಷಾ ಕೇಂದ್ರಗಳಲ್ಲಿ ಇಂದು ನಡೆದ ದ್ವಿತೀಯ ಪಿಯುಸಿ ಕನ್ನಡ ವಿಷಯ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 23130  ವಿದ್ಯಾರ್ಥಿಗಳ ಪೈಕಿ  22063 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು,  1067ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.   ಯಾವುದೇ ಕೇಂದ್ರದಲ್ಲಿ ಡಿಬಾರ್ ಪ್ರಕರಣ ವರದಿಯಾಗಿರುವುದಿಲ್ಲ ಎಂದು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಉಪನಿರ್ದೇಶಕ ಗಂಗಾಧರ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...