ತುಮಕೂರು | ಸರ್ವರ್ ಸಮಸ್ಯೆ : ಹಾಸ್ಟೆಲ್ ಪ್ರವೇಶದಿಂದ ವಂಚಿತರಾದ ವಿದ್ಯಾರ್ಥಿಗಳು

Date:

ಒಂದೂವರೆ ತಿಂಗಳಿನಿಂದ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಆದರೆ, ಸರ್ವರ್ ಸಮಸ್ಯೆಯಿಂದ ಹಲವಾರು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲಾಗದೆ ಅತಂತ್ರ ಸ್ಥಿತಿಯಲ್ಲಿದ್ದಾರೆ. ನೆರವಿಗಾಗಿ ಇಲಾಖೆಯ ಕಚೇರಿಗಳನ್ನು ಅಲೆಯುತ್ತಿದ್ದಾರೆ.

- Advertisement -

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಸಿ. ನಂದಿಹಳ್ಳಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ರಮ್ಯ, ತುಮಕೂರು ವಿಶ್ವವಿದ್ಯಾನಿಲಯದ ಕಲಾ ಕಾಲೇಜಿನಲ್ಲಿ ಮೊದಲ ವರ್ಷದ ಬಿಎ ಪದವಿಗೆ (HEP) ಗೆ ಪ್ರವೇಶ ಪಡೆದಿದ್ದಾರೆ. ತುಮಕೂರು ನಗರದ ಹಾಸ್ಟೆಲ್‌ನಲ್ಲಿ ಉಳಿದು ವಿದ್ಯಾಭ್ಯಾಸ ಮಾಡುವ ಯೋಜನೆಯಲ್ಲಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಈ ವಿದ್ಯಾರ್ಥಿನಿ ಇವರ ಕುಟುಂಬದಲ್ಲೇ ಪದವಿ ಓದಲು ಬಂದಿರುವ ಮೊದಲ ಹೆಣ್ಣು ಮಗಳು. ಈಕೆಗೆ ಸಮಾಜ ಕಲ್ಯಾಣ ಇಲಾಖೆ ನೆರವಾಗಬೇಕಿದೆ. ಸರ್ವರ್ ಸಮಸ್ಯೆಯಿಂದ ಅರ್ಜಿ ಸಲ್ಲಿಸಲಾಗದೆ ತನ್ನದಲ್ಲದ ತಪ್ಪಿಗೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು, ಜಂಟಿ ನಿರ್ದೇಶಕರನ್ನು ಭೇಟಿಯಾದರೂ ಕೂಡ ಅವರಿಂದ ದೊರೆತದ್ದು ಅಸಹಾಯಕತೆ ಉತ್ತರ ಬಿಟ್ಟರೆ ಯಾವುದೇ ಭರವಸೆ ಮೂಡಿಲ್ಲ.

“ಮೊಬೈಲ್ ಮತ್ತು ಲ್ಯಾಪ್ ಟಾಪ್ ನಲ್ಲಿ ಹಲವು ಬಾರಿ ಹಾಸ್ಟೆಲದದ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಪ್ರಯತ್ನ ಮಾಡಿದ್ದೇವೆ. ಸೈಬರ್ ಸೆಂಟರ್‍‌ಗಳಲ್ಲೂ ಪ್ರಯತ್ನಿಸಿದ್ದೇವೆ. ಆದರೂ ಕೊನೆಗೂ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ. ನಮ್ಮ ಕುಟುಂಬದಲ್ಲೇ ಮೊದಲ ಬಾರಿಗೆ ಪದವಿ ಓದಲು ಬಂದಿರುವ ನನಗೆ ಹಾಸ್ಟಲ್ ಸೀಟು ಸಿಕ್ಕರೆ ತುಂಬಾ ಅನುಕೂಲವಾಗುತ್ತದೆ” ಎನ್ನುತ್ತಾರೆ ವಿದ್ಯಾರ್ಥಿನಿ ರಮ್ಯ ಎನ್. ಕೆ.

ತುಮಕೂರು ವಿಶ್ವವಿದ್ಯಾಲಯದ ಕಲಾ ಕಾಲೇಜಿನಲ್ಲೇ ಓದುತ್ತಿರುವ ಚಿಂದಿಗೆರೆಯ ದಿಶಾ, ಬೆಳ್ಳಾವಿಯ ರೋಹಿತ್ ಅವರಿಗೂ ಕೂಡ ಇದೇ ಸಮಸ್ಯೆ ಆಗಿದೆ. ಜಿಲ್ಲಾ ಕೆಂದ್ರಲ್ಲಿ ಉನ್ನತ ಶಿಕ್ಷಣ ಪಡೆಯಬೇಕೆಂದು ಕನಸು ಕಂಡಿರುವ ಇವರಿಗೆ ದಿಕ್ಕೇ ತೋಚದಂತಾಗಿದೆ.

ಈ ಕುರಿತು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ ಅವರು ಆನ್‌ಲೈನ್ ಅರ್ಜಿ ಹಾಕುವುದನ್ನು ಬಿಟ್ಟರೆ ನಮ್ಮಲ್ಲಿ ಬೇರೆ ಅವಕಾಶವಿಲ್ಲ ಎಂದಿದ್ದಾರೆ.

ಇದನ್ನು ಓದಿದ್ದೀರಾ? ಬೀದರ್‌ | ಸ್ಮಶಾನದ ಬಳಿ ಆಸ್ಪತ್ರೆ : ಮಗುವಿಗೆ ಕೇಡಾಗುತ್ತೆ ಎಂಬ ಕಾರಣಕ್ಕೆ ಹೆರಿಗೆಗೆ ಬಾರದ ಗರ್ಭಿಣಿಯರು!

ಒಟ್ಟಾರೆ, ಅಕ್ಷರದ ಬೆಳಕನ್ನು ಕಾಣದೇ ಶತ ಶತಮಾನಗಳಿಂದ ಶೋಷಣೆಗೆ ಒಳಗಾಗಿರುವ ಸಮುದಾಯದ ಕುಟುಂಬದ ಮಕ್ಕಳು ಧೈರ್ಯ ಮಾಡಿ, ಶಿಕ್ಷಣ ಪಡೆಯಲು ಮುಂದೆ ಬಂದಿದ್ದಾರೆ. ವಿಶ್ವವಿದ್ಯಾನಿಲಯದ ಮಟ್ಟದಲ್ಲಿ ಸಾವಿರ ಕನಸನೊತ್ತು ಓದಲು ಬರುತ್ತಿದ್ದಾರೆ. ಇವರ ಪೋಷಣೆಗೆಂದೆ ಇರುವ ಸಮಾಜ ಕಲ್ಯಾಣ ಇಲಾಖೆ ತಾಂತ್ರಿಕ ಸಮಸ್ಯೆ ಮುಂದಿಟ್ಟು ಇವರ ಕನಸಿಗೆ ನೀರೆರಚದೆ, ಹಾಸ್ಟೆಲ್‌ನಲ್ಲಿ ಸೀಟು ಕೊಟ್ಟು ಇವರ ವಿದ್ಯಾಭ್ಯಾಸಕ್ಕೆ ನೆರವಾಗಬೇಕಿದೆ.

WhatsApp Image 2024 08 09 at 10.52.48 1578a566
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಮಟಕಾ ಜೂಜಾಟದ ಮೇಲೆ ಚೌಕ ಪೊಲೀಸರ ದಾಳಿ; ₹1,120 ನಗದು ವಶ

ಸಾರ್ವಜನಿಕ ಸ್ಥಳದಲ್ಲಿ ಮಟಕಾ ಜೂಜಾಟ ನಡೆಸುತ್ತಿದ್ದ ಆರೋಪದಡಿ ವ್ಯಕ್ತಿಯೊಬ್ಬನನ್ನು ಚೌಕ ಠಾಣೆ...

ಯಾದಗಿರಿ | ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ಹುದ್ದೆ ಪಡೆದ ಆರೋಪ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಶೇಷ ನೇಮಕಾತಿಯಲ್ಲಿ ನಕಲಿ ಎಸ್‌ಎಸ್‌ಎಲ್‌ಸಿ...

ತುಮಕೂರು | ಬೆಳೆ ಕಟಾವು ಪ್ರಯೋಗ ಶೇ.100ರಷ್ಟು ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

ತುಮಕೂರು ಜಿಲ್ಲೆಯಲ್ಲಿ 2026-27ನೇ ಸಾಲಿನ ಮುಂಗಾರು ಹಂಗಾಮಿನಡಿ ಹಂಚಿಕೆಯಾಗಿರುವ ಎಲ್ಲಾ 5,120...

ಯಾದಗಿರಿ | ವಂದೇ ಭಾರತ್ ಸ್ಲೀಪರ್ ರೈಲು ಯಾದಗಿರಿಯಲ್ಲಿ ನಿಲುಗಡೆಗೆ ಒತ್ತಾಯಿಸಿ ಮನವಿ

ಬೆಂಗಳೂರು-ಮುಂಬೈ ನಡುವೆ ಸಂಚರಿಸುವ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್‌ಗೆ ಯಾದಗಿರಿ ರೈಲು...