ತುಮಕೂರು | ಬಾಕಿ ಇರುವ ಎಲ್ಲ ಸಾಲ ಮತ್ತು ಸಬ್ಸಿಡಿ ಅರ್ಜಿಗಳ ಇತ್ಯರ್ಥಕ್ಕೆ ಸೂಚನೆ

Date:

Advertisements

2023ರ ಅಕ್ಟೋಬರ್ ಮಾಹೆಯ ಅಂತ್ಯಕ್ಕೆ ಬಾಕಿ ಇರುವ ಎಲ್ಲ ಸಾಲ ಮತ್ತು ಸಬ್ಸಿಡಿ ಮಂಜೂರಾತಿ ಅರ್ಜಿಗಳನ್ನು ಕಡ್ಡಾಯವಾಗಿ ಇತ್ಯರ್ಥಪಡಿಸಬೇಕು. ಇಲ್ಲದಿದ್ದರೆ ಅಂತಹ ಬ್ಯಾಂಕ್ ಅಧಿಕಾರಿಗಳ ವಿರುದ್ದ ಎಸ್‌ಎಲ್‌ಬಿಸಿ (ರಾಜ್ಯ ಮಟ್ಟದ ಬ್ಯಾಂಕ್‌ಗಳ ಸಮಿತಿ) ಹಾಗೂ ಆರ್‌ಬಿಐಗೆ ವರದಿ ಸಲ್ಲಿಸಲಾಗುವುದು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಿ ಪ್ರಭು ಹೇಳಿದರು.

ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್‌ನ ಸಹಯೋಗದೊಂದಿಗೆ ಜಿಲ್ಲಾ ಪಂಚಾಯಿತಿಯ ವೀಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ‘ಜಿಲ್ಲಾ ಮಟ್ಟದ  ಪ್ರಗತಿ ಪರಿಶೀಲನಾ ಸಭೆ ಹಾಗೂ ಜಿಲ್ಲಾ ಸಮಾಲೋಚನೆ ಸಭೆ’ ನಡಸಿದರು. ಪ್ರಧಾನಮಂತ್ರಿ ಮುದ್ರಾ ಯೋಜನೆ(ಪಿಎಂಎಂವೈ), ಎನ್.ಎಲ್.ಎಂ, ಪಿಎಂಇಜಿಪಿ, ಉದ್ಯೋಗಿನಿ, ಪಿಎಂಎವೈ, ಎಪಿವೈ, ಪಿ.ಎಂ ಸ್ವನಿಧಿ ಮತ್ತು ವಸತಿ ಯೋಜನೆ ಮೊದಲಾದ ಯೋಜನೆಗಳಡಿ ವಿವಿಧ ಇಲಾಖೆಗಳಿಂದ ಬ್ಯಾಂಕುಗಳಿಗೆ ಸಲ್ಲಿಸಲಾಗಿರುವ ಅರ್ಜಿಗಳ ಇತ್ಯರ್ಥಕ್ಕೆ ಸಂಬಂಧಿಸಿದ ಮಾಹಿತಿ ಪಡೆದರು.

“ಸಮಾಜದ ಬಡ ಹಾಗೂ ಅಶಕ್ತ ವರ್ಗ, ನಿರುದ್ಯೋಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರ ಕಲ್ಯಾಣಕ್ಕಾಗಿ ಸರ್ಕಾರದಿಂದ ರೂಪಿಸಲ್ಪಟ್ಟಿರುವ ಯೋಜನೆಗಳಡಿಯಲ್ಲಿ ಸಲ್ಲಿಸಿರುವ ಅರ್ಜಿಗಳನ್ನು ಬ್ಯಾಂಕುಗಳು ಅನಗತ್ಯ ವಿಳಂಬ ಮಾಡಬಾರದು. ಸಂಬಂಧಿಸಿದ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ತ್ವರಿತವಾಗಿ ವಿಲೇವಾರಿ ಮಾಡಬೇಕು” ಎಂದು ನಿರ್ದೇಶನ ನೀಡಿದರು.

Advertisements

“ಜಿಲ್ಲೆಯ 330 ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಎಲ್ಲ ರ‍್ಯೆತರನ್ನು ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ ಒಳಪಡಿಸಿ ಹೆಚ್ಚಿನ ಸಂಖ್ಯೆಯಲ್ಲಿ ಸಾಲ ವಿತರಿಸಬೇಕು. ಈಗಾಗಲೇ ಅಂಬೇಡ್ಕರ್ ನಿಗಮ, ಕೈಮಗ್ಗ ಇಲಾಖೆಯ ಯೋಜನೆಗಳಡಿ ಬಾಕಿ ಇರುವ ಅರ್ಜಿಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೆಕು, ಬಡತನ ರೇಖೆಗಿಂತ ಕೆಳಗಿರುವವರು ಆರ್ಥಿಕವಾಗಿ ಸಬಲೀಕರಣ ಹೊಂದಬೇಕೆನ್ನುವುದೇ ಸರ್ಕಾರದ ಉದ್ದೇಶವಾಗಿದ್ದು ಮುದ್ರಾ ಯೋಜನೆ ಮತ್ತು ಸ್ಟಾರ್ಟಪ್ ಗಳಿಗೆ ಸಮರ್ಪಕವಾಗಿ ಸಾಲ ವಿತರಿಸುವ ಮೂಲಕ  ಎಲ್ಲಾ ಬ್ಯಾಂಕ್ ಗಳು ಜಿಲ್ಲೆಯ ಯುವ ಜನತೆಗೆ ಮತ್ತು ಸ್ವಯಂ ಉದ್ಯೋಗ ಕೈಗೊಳ್ಳುವವರಿಗೆ ನೆರವಾಗಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನೇಕ ಯೋಜನೆಗಳ  ಅರ್ಹರಿಗೆ ತಲುಪಿಸುವ ಕೆಲಸವನ್ನು ಸೇವಾ ಮನೋಭಾವದಿಂದ ನಿರ್ವಹಿಸಬೇಕು” ಎಂದು ಸೂಚಿಸಿದರು.

ಸಂಸದ ಜಿ.ಎಸ್ ಬಸವರಾಜ್ ಮಾತನಾಡಿ, “ಕೇಂದ್ರ ಸರ್ಕಾರದ ಪ್ರಾಯೋಜಿತ ಸಾಲ ಮತ್ತು ಸಬ್ಸಿಡಿ ಯೋಜನೆಗಳ 2023-24ನೇ ಸಾಲಿನ ಗುರಿಗಳ ಸಾಲಗಳನ್ನು ಸಾರ್ವಜನಿಕರಿಗೆ ವಿತರಣೆ ಮಾಡುವಲ್ಲಿ ವಿಳಂಬ ಧೋರಣೆ ಅನುಸರಿಸಬಾರದು. ಫಲಾನುಭವಿಗಳಿಗೆ ಸಮರ್ಪಕವಾಗಿ ಸಾಲ ಸಿಗಬೇಕೆಂಬುದು ಸರ್ಕಾರದ ಉದ್ದೇಶವಾಗಿದೆ. ಈ ತಿಂಗಳ ಅಂತ್ಯಕ್ಕೆ ಎಲ್ಲವೂ ಸರಿ ಹೋಗಬೇಕು. ಕೆಲವು ಬ್ಯಾಂಕ್ ಅಧಿಕಾರಿಗಳು ಸಾರ್ವಜನಿಕರಿಗೆ ಸಾಲ ಸೌಲಭ್ಯ ನೀಡಲು ಅನವಶ್ಯಕ  ಹೆಚ್ಚಿನ ದಾಖಲಾತಿಗಳನ್ನು ಕೇಳುತ್ತಿರುವುದು ಗಮನಕ್ಕೆ ಬಂದಿದೆ. ಎಲ್ಲಾ ದಾಖಲೆಗಳು ಸರಿಯಾಗಿದ್ದರೂ ತಾಂತ್ರಿಕ ಕಾರಣ ನೀಡಿ ವಿಳಂಬ ಮಾಡಲಾಗುವ ವರ್ತನೆಯನ್ನು ಸಹಿಸಲು ಸಾಧ್ಯವಿಲ್ಲ. ಸಾಮಾಜಿಕ ಸುರಕ್ಷತಾ ಯೋಜನೆಗಳ ಫಲವನ್ನು  ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸಬೇಕು” ಎಂದು ಬ್ಯಾಂಕ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

 

ಭಾರತೀಯ ಸ್ಟೇಟ್ ಬ್ಯಾಂಕ್  ಪ್ರಬಂಧಕ ಪ್ರಕಾಶ್ ಮಾತನಾಡಿ, “ಬ್ಯಾಂಕ್‌ಗಳ ಠೇವಣಿಯಲ್ಲಿ 2023 ಜೂನ್ 30ರ ಅಂತ್ಯಕ್ಕೆ 18,280.50 ಕೋಟಿ ಜಮಾ ಆಗಿದೆ. ಮುಂಗಡ ಸಾಲವಾಗಿ 17,702.20 ಕೋಟಿ  ನೀಡಿ ಉತ್ತಮ ಪ್ರಗತಿ  ಸಾಧಿಸಲಾಗಿದ್ದು, ಸಾಲದಲ್ಲಿ ದುರ್ಬಲ ವರ್ಗಗಳಿಗೆ  ಎಸ್‌ಸಿ,ಎಸ್‌ಟಿ ವರ್ಗದವರಿಗೆ ಹಾಗೂ ಅಲ್ಪಸಂಖ್ಯಾತ  ಸಮುದಾಯದವರಿಗೆ ಸಬಲೀಕರಣಕ್ಕೆ ಆದ್ಯತೆ ನೀಡಲಾಗಿದ್ದು, ಬ್ಯಾಂಕಿಂಗ್ ಸಾಲ ಸೌಲಭ್ಯ ವಿಸ್ತರಿಸುವ ಕಾರ್ಯ ಚುರುಕುಗೊಳಿಸಲು ಉದ್ದೇಶಿಸಲಾಗಿದೆ” ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ, ಯೋಜನಾ ನಿರ್ದೇಶಕರಾದ ನಾರಯಣಸ್ವಾಮಿ, ನಬಾರ್ಡ್ನ ಜಿಲ್ಲಾ ಅಭಿವೃದ್ಧಿ ಅಧಿಕಾರಿ ಕೀರ್ತಿಪ್ರಭಾ ಹಾಗೂ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಜಿಲ್ಲಾಧಿಕಾರಿ,  ಕೃಷಿ ಇಲಾಖೆಯ ಜಂಟಿ ನಿದೇಶಕ, ತೋಟಗಾರಿಕೆ ಇಲಾಖೆ ಉಪನಿರ್ದೇಶP, ರೇಷ್ಮೇ ಇಲಾಖೆಯ ಉಪನಿರ್ದೇಶಕರಾದ ರಾಮಕೃಷ್ಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶ್ರೀಧರ್, ಎನ್‌ಜಿಒಗಳು (ಸರಕಾರೇತರ ಸಂಸ್ಥೆಗಳು)   ಎಲ್ಲಾ ಬ್ಯಾಂಕ್ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X