ಸಹ ಶಿಕ್ಷಕಿಗೆ ಲೈಂಗಿಕ ಕಿರುಕುಳ ಕೊಡುತ್ತಿದ್ದ ಶಿಕ್ಷಕನೊಬ್ಬನನ್ನು ಅಮಾನತು ಮಾಡಿ ಕ್ರಮ ಕೈಗೊಳ್ಳಲಾಗಿದೆ, ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಹೊಳಲುಗುಂದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಗೋಪಾಲ್ ಎಂಬಾತ ಅಮಾನತು ಶಿಕ್ಷೆಗೆ ಒಳಗಾಗಿದ್ದು, ಈತ ಶಿಕ್ಷಕಿಗೆ ಪದೇ ಪದೆ ಲೈಂಗಿಕ ಕಿರುಕುಳ ನೀಡುತ್ತಿದ್ದನೆಂದು ದೂರು ನೀಡಲಾಗಿತ್ತು.
“ಶಾಲೆಯಲ್ಲಿ ಪಾಠ ಮಾಡಲು ಆಗದಂಹ ಪರಿಸ್ಥಿತಿ ನಿರ್ಮಾಣವಾಗಿದೆ. ನಾನು ಎಷ್ಟೇ ವಿರೋಧ ಮಾಡಿದರೂ ಈ ಶಿಕ್ಷಕ ಲೈಂಗಿಕ ದೌರ್ಜನ್ಯ ಎಸಗಲು ಮುಂದಾಗುತ್ತಿದ್ದ. ಈ ಸಂಬಂಧ ಎಚ್ಚರಿಕೆ ಕೊಟ್ಟರೂ ನಡವಳಿಕೆಯಲ್ಲಿ ಯಾವುದೇ ಬದಲಾವಣೆ ಆಗಲಿಲ್ಲ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮ ಕೈಗೊಂಡು ನ್ಯಾಯ ಒದಗಿಸಿ ಕೊಡಬೇಕು” ಎಂದು ಶಿಕ್ಷಕಿ ಡಿಡಿಪಿಐಗೆ ದೂರು ನೀಡಿದ್ದರು.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಿಮಾನದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಬಂಧನ
ಶಿಕ್ಷಕಿಯ ದೂರು ಆಧರಿಸಿ ತನಿಖೆ ಕೈಗೊಂಡ ಡಿಡಿಪಿಐ ನಂಜಯ್ಯ ಅವರು ಶಿಕ್ಷಕ ಗೋಪಾಲ್‌ನನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.