ತುಮಕೂರು | ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಸಾಧಕರಿಗೆ ಎಸ್ಐಒ ಗೌರವ

Date:

Advertisements

 “ಪರಿಶ್ರಮಿಸಿದವರಿಗೆ ಫಲವಿಲ್ಲವೆಂದೇ ಇಲ್ಲ” ಎಂಬ ನಂಬಿಕೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದಂತಾಯಿತು. ನಗರದ ದಾನಾ ಪ್ಯಾಲೇಸ್‌ನಲ್ಲಿ ಶನಿವಾರ ನಡೆದ ಸ್ಟುಡೆಂಟ್ ಇಸ್ಲಾಮಿಕ್ ಆರ್ಗನೈಜೇಶನ್‌ (ಎಸ್ಐಒ) ವಾರ್ಷಿಕ ಪ್ರಶಸ್ತಿ ಸಮಾರಂಭದಲ್ಲಿ, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಮೆರೆದ 150 ಮಂದಿ ವಿದ್ಯಾರ್ಥಿಗಳು ಪ್ರಶಸ್ತಿಗಳನ್ನು ಸ್ವೀಕರಿಸಿ, ದೊಡ್ಡ ಕನಸುಗಳತ್ತ ಹೆಜ್ಜೆ ಇಡುವ ಸಂಕಲ್ಪ ವ್ಯಕ್ತಪಡಿಸಿದರು.

ರಾಷ್ಟ್ರಗೀತೆಯಿಂದ ಆರಂಭವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪರಿಶ್ರಮ, ಪೋಷಕರ ತ್ಯಾಗ ಮತ್ತು ಶಿಕ್ಷಕರ ಮಾರ್ಗದರ್ಶನವನ್ನು ಸ್ಮರಿಸಿ ಹಲವರು ಕಣ್ಣೀರಿಟ್ಟರು.

19ನೇ ವಾರ್ಷಿಕ ಶಿಕ್ಷಣ ಪ್ರಶಸ್ತಿ ಸಮಾರಂಭದಲ್ಲಿ, ನಗರ ಹಾಗೂ ಜಿಲ್ಲೆಯ ವಿವಿಧ ಶಾಲೆಗಳು ಮತ್ತು ಕಾಲೇಜುಗಳಿಂದ ಆಯ್ಕೆಯಾದ 150 ಮಂದಿ ಸಾಧಕ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು. ಅವರ ಸಾಧನೆಗೆ ಪೋಷಕರು, ಶಿಕ್ಷಕರು ಹಾಗೂ ಅತಿಥಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

Advertisements

ಸಾಧನೆಯ ಹಾದಿಯಲ್ಲಿ ಶಿಸ್ತು, ಜ್ಞಾನ ಮತ್ತು ಮೌಲ್ಯಗಳ ಮಹತ್ವವನ್ನು ಅತಿಥಿಗಳು ತಮ್ಮ ಭಾಷಣದಲ್ಲಿ ಹಂಚಿಕೊಂಡರು. ವೇದಿಕೆಯನ್ನು ಹಂಚಿಕೊಂಡ ಎಸ್ಐಒ ರಾಜ್ಯಾಧ್ಯಕ್ಷ ಅದೀ ಅಲ್ ಹಸನ್, ರಾಜ್ಯ ಕಾರ್ಯದರ್ಶಿ ಅಬೂಬಕ್ಕರ್ ಸಿದ್ದೀಕ್, ಜಿಐಓ ಪ್ರತಿನಿಧಿ ಜೈನಾಬ್ ಗಝಲಿ, ಜೆಐಎಚ್ ತುಮಕೂರು ಅಧ್ಯಕ್ಷ ಮೌಲಾನ ಅಸ್ರಾರ್ ಅಹಮದ್, ಗ್ಲೋಬಲ್ ಶಾಹಿನ್ ಕಾಲೇಜಿನ ಅಫ್ಜಲ್ ಶರೀಫ್ ಮತ್ತು ಎಸ್ಐಒ ತುಮಕೂರು ಘಟಕದ ಅಧ್ಯಕ್ಷ ಖಲೀಲ್ ಖಾನ್ ಅವರು, “ಜ್ಞಾನವಂತ ಸಮಾಜ ನಿರ್ಮಾಣ” ಎಂಬ ಗುರಿಯನ್ನು ಹೊಂದಿ ಬದುಕಲು ವಿದ್ಯಾರ್ಥಿಗಳನ್ನು ಪ್ರೇರೇಪಿಸಿ, ಮುಂದಿನ ಶಿಕ್ಷಣದಲ್ಲಿ ಉನ್ನತ ಗುರಿಗಳನ್ನು ಹೊಂದಿ ಸಮಾಜಕ್ಕೆ ಮಾದರಿಯಾಗುವಂತೆ ಹಾರೈಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X