ತುಮಕೂರು | ಸ್ಥಳ ಭೇಟಿ ಮೂಲಕ ಪ.ಜಾತಿ, ಪ.ಪಂಗಡ ಸಮುದಾಯಗಳ ಸಮಸ್ಯೆ ಪರಿಹರಿಸಿ : ಶುಭ ಕಲ್ಯಾಣ್

Date:

Advertisements

 ಪ.ಜಾತಿ, ಪ.ಪಂಗಡ ಸಮುದಾಯಗಳ ಸಮಸ್ಯೆಗಳನ್ನು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪರಿಹಾರ ದೊರಕಿಸಿಕೊಡಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

  ತುಮಕೂರು  ನಗರದ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಪ.ಜಾತಿ ಮತ್ತು ಪ.ಪಂಗಡಗಳ ಕುಂದು ಕೊರತೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ.ಜಾತಿ ಮತ್ತು ಪ.ಪಂಗಡಗಳ ಸ್ಮಶಾನ ಭೂಮಿ ಅಭಿವೃದ್ಧಿ, ನಿವೇಶನ ಹಂಚಿಕೆ, ಸಾಗುವಳಿ ಚೀಟಿ, ಮೂಲಭೂತ ಸೌಕರ್ಯ ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಕುಂದು ಕೊರತೆ ಸಭೆಗಳಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ಪರಿಶೀಲಿಸಿ ತಾಲ್ಲೂಕು ಹಂತದಲ್ಲೇ ವಿಲೇವಾರಿ ಮಾಡಬೇಕು ಎಂದು ತಿಳಿಸಿದರು.

   ತುಮಕೂರು   ಜಿಲ್ಲೆಯ ಹಲವಾರು ಗ್ರಾಮಗಳಲ್ಲಿನ ಪ.ಜಾತಿ ಮತ್ತು ಪ.ಪಂಗಡಗಳ ಸ್ಮಶಾನ ಭೂಮಿ ಸಮಸ್ಯೆಗೆ ಪರಿಹಾರ ದೊರಕಿಸಿಕೊಡದಿರುವ ಬಗ್ಗೆ ಸಮುದಾಯದ ಮುಖಂಡರ ಪ್ರಶ್ನೆಗೆ ಉತ್ತರಿಸಿದ ಅವರು ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯಿತಿಗಳಲ್ಲೂ ಸ್ಮಶಾನಕ್ಕಾಗಿ ಪ್ರತ್ಯೇಕ ಭೂಮಿಯನ್ನು ಮೀಸಲಿಟ್ಟಿದ್ದು, ಜಿ.ಪಿ.ಎಸ್ ಮೂಲಕ ಸರ್ವೇ ನಡೆಸಿ ಸ್ಮಶಾನ ಭೂಮಿಗೆ ಆವರಣ ಗೋಡೆ ನಿರ್ಮಾಣದ ಜೊತೆಗೆ ಸ್ಮಶಾನ ಭೂಮಿಯನ್ನು ಅಭಿವೃದ್ಧಿ ಪಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Advertisements
1000777961

     ತುರುವೇಕೆರೆ ತಾಲ್ಲೂಕಿನ ಚಿಕ್ಕ ತುರುವೇಕೆರೆ ದಲಿತ ಕಾಲೋನಿಯ ಜನರು ರಸ್ತೆ, ಚರಂಡಿ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳಿಲ್ಲದೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿರುವ ಬಗ್ಗೆ ಪ್ರಶ್ನಿಸಿದ ದಲಿತ ಮುಖಂಡರಿಗೆ ಉತ್ತರಿಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಅವರು, ತಾಲ್ಲೂಕು ಕಾರ್ಯ ನಿರ್ವಾಹಕ ಅಧಿಕಾರಿ ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ನಾಳೆಯೇ ಗ್ರಾಮಕ್ಕೆ ಭೇಟಿ ನೀಡಲಿದ್ದು ಅಗತ್ಯ ಕ್ರಿಯಾ ಯೋಜನೆ ತಯಾರಿಸಿ ಶೀಘ್ರವಾಗಿ ಕಾಮಗಾರಿ ಪ್ರಾರಂಭಿಸಲಿದ್ದಾರೆ ಎಂದು ತಿಳಿಸಿದರು.

    ತುರುವೇಕೆರೆ ತಾಲ್ಲೂಕು ಬಾಣಸಂದ್ರ ಗ್ರಾಮದಲ್ಲಿ ಕಳಪೆ ಕಾಮಗಾರಿ ನಡೆಸಲಾಗಿದೆ ಎಂಬ ಮುಖಂಡರ ಆರೋಪಕ್ಕೆ ಉತ್ತರಿಸಿದ ಅವರು ಜಿಲ್ಲೆಯಲ್ಲಿ ಗುಣಮಟ್ಟದ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತಿದ್ದು, ಜಿಲ್ಲೆಯ ಯಾವುದೇ ಭಾಗದಲ್ಲಿ ಕಳಪೆ ಕಾಮಗಾರಿ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರು ದೂರು ನೀಡಿದರೆ ಅಂತಹ ಕಾಮಗಾರಿಗಳನ್ನು ಪರಿಶೀಲಿಸಿ ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

1000777962

    ತುರುವೇಕೆರೆ ತಾಲ್ಲೂಕಿನ ದಂಡಿನ ಶಿವರದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ ನಿರ್ಮಾಣ ಮಾಡಲು ಭೂಮಿ ಮಂಜೂರಾಗಿದ್ದರೂ ಕಟ್ಟಡ ಕಾಮಗಾರಿ ಕೈಗೊಳ್ಳದಿರುವ ಬಗ್ಗೆ ಪ್ರಶ್ನಿಸಿದ ಮುಖಂಡರಿಗೆ ಉತ್ತರಿಸಿದ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ಅವರು, ವಸತಿ ಶಾಲೆ ಕಟ್ಟಡ ನಿರ್ಮಾಣಕ್ಕಾಗಿ ಸರ್ಕಾರಕ್ಕೆ 28 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಬೇಡಿಕೆ ಸಲ್ಲಿಸಿದ್ದು, ಸರ್ಕಾರದಿಂದ ಅನುದಾನ ಬಂದ ತಕ್ಷಣ ಕಟ್ಟಡ ನಿರ್ಮಾಣ ಮಾಡಲಾಗುತ್ತದೆ ಎಂದು ತಿಳಿಸಿದರು.

    ಪ.ಜಾತಿ ಮತ್ತು ಪ.ಪಂಗಡದ ಸಮುದಾಯಗಳು ಅನೇಕ ವರ್ಷಗಳಿಂದ ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಸಹ ಸಮಸ್ಯೆ ಬಗೆಹರಿಯದೆ ಉಳಿದುಕೊಂಡಿದೆ. ಸಮಸ್ಯೆಗಳಿಗೆ ಶೀಘ್ರವಾಗಿ ಪರಿಹಾರ ದೊರಕಿಸಿಕೊಡಬೇಕೆಂದು ಜಿಲ್ಲೆಯ ದಲಿತ ಮುಖಂಡರು ಜಿಲ್ಲಾಧಿಕಾರಿಗಳಿಗೆ ಬೇಡಿಕೆಯಿಟ್ಟರು.

     ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಮಹಾನಗರ ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ, ಅಪರ ಜಿಲ್ಲಾಧಿಕಾರಿ ಡಾ: ಎನ್.ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸಣ್ಣಮಸಿಯಪ್ಪ, ಉಪ ವಿಭಾಗಾಧಿಕಾರಿಗಳಾದ ಗೋಟೂರು ಶಿವಪ್ಪ, ಸಪ್ತಶ್ರೀ, ಗೌರವ್ ಕುಮಾರ್ ಶೆಟ್ಟಿ, ವಿವಿಧ ತಾಲ್ಲೂಕುಗಳ ತಹಶೀಲ್ದಾರ್‌ಗಳು, ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಜಿಲ್ಲೆಯ ದಲಿತ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

Download Eedina App Android / iOS

X