ಇಸ್ರೇಲ್ ಯುದ್ಧ ನಿಲ್ಲಿಸಿ, ಜನರ ಜೀವ ರಕ್ಷಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದ ಸಿಪಿಎಂ, ಸಿಪಿಐ, ಪ್ರಗತಿಪರ ಮುಖಂಡರ ವಿರುದ್ಧ ತುಮಕೂರಿನ ಪೊಲೀಸರು ಸ್ವಯಂ ಪ್ರೇರಿತರಾಗಿ ತಿಲಕ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇಸ್ರೇಲ್ -ಹಮಾಸ್ ನಡುವೆ ನಡೆಯುತ್ತಿರುವ ಯುದ್ದ ಅಂತ್ಯಗೊಳಿಸಬೇಕೆಂದು ಒತ್ತಾಯಿಸಿ ಅಕ್ಟೋಬರ್ 20ರಂದು ತುಮಕೂರು ನಗದರ ಬಿಜಿಎಸ್ ವೃತ್ತದಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟ, ಸಿಪಿಎಂ ಹಾಗೂ ಶಾಂತಿ ಪ್ರಿಯರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ಸಮಯದಲ್ಲಿ ಉದ್ದೇಶಪೂರ್ವಕವಾಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗುವಂತೆ ಮಾತನಾಡಿದ್ದಾರೆಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದಾರೆ.
ಸಿಪಿಎಂ ರಾಜ್ಯ ಕಾರ್ಯದರ್ಶಿ ಸೈಯದ್ ಮುಜೀಬ್, ಪ್ರಗತಿಪರ ಸಂಘಟನೆಗಳ ಒಕ್ಕೂಟ, ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎನ್ ಕೆ ಸುಬ್ರಮಣ್ಯ, ಪ್ರಗತಿಪರ ಚಿಂತಕ ಸಿ ಯತಿರಾಜು, ದಲಿತ ಸಂಘರ್ಷ ಸಮಿತಿಯ ಪಿ ಎನ್ ರಾಮಯ್ಯ, ಮುಖಂಡ ತಾಜುದ್ದೀನ್ ಷರೀಫ್, ಮತ್ತಿತರರ ವಿರುದ್ಧ ಕಲಂ 295(ಎ) ಅಡಿ ದೂರು ದಾಖಲಾಗಿದೆ.
ಈ ಸುದ್ದಿ ಓದಿದ್ಧೀರಾ? ಉಡುಪಿ | ಆರೋಪ ಸುಳ್ಳೆಂದು ಬಿಜೆಪಿ ಶಾಸಕ ಸಾಬೀತು ಮಾಡಲಿ; ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಪುರಸಭೆ ಸದಸ್ಯ
ಪ್ರತಿಭಟನೆ ಸಂದರ್ಭದಲ್ಲಿ ಉದ್ದೇಶ ಪೂರ್ವಕವಾಗಿ ಕೋಮು ಭಾವನೆಗಳಿಗೆ ಧಕ್ಕೆ ಉಂಟಾಗುವ ರೀತಿಯಲ್ಲಿ ಭಾಷಣ ಮಾಡಿದ್ದಾರೆಂಬ ಆರೋಪದಡಿ ತಿಲಕ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.