ತುಮಕೂರು | ಸತ್ಯ, ಸಮಾನತೆಯ ಮತ್ತೊಂದು ಪ್ರತಿರೂಪವೇ ಶ್ರೀರಾಮ: ಡಾ. ಜಿ ಪರಮೇಶ್ವರ್

Date:

ಸತ್ಯ, ಸಮಾನತೆಯ ಮತ್ತೊಂದು ಪ್ರತಿರೂಪವೇ ಶ್ರೀರಾಮ ಎಂದು ಗೃಹಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು. ತುಮಕೂರು ನಗರದ ಬಟವಾಡಿ ವೃತ್ತದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಆಯೋಜಿಸಿದ್ದ ಶ್ರೀರಾಮನವಮಿ ಆಚರಣೆಯಲ್ಲಿ ಪಾಲ್ಗೊಂಡು ಶ್ರೀರಾಮನ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಪೂಜೆ ನೆರವೇರಿಸಿ. ಭಕ್ತರಿಗೆ ಪಾನಕ, ಮಜ್ಜಿಗೆ, ಹೆಸರು ಬೇಳೆ ವಿತರಿಸಿದ ನಂತರ ಅವರು ಮಾತನಾಡಿದರು.

ಶ್ರೀರಾಮ ಸತ್ಯಕ್ಕೆ ನಿಂತವನು. ಶ್ರೀರಾಮ ಪ್ರತಿಯೊಬ್ಬ ಮಾನವನ ಸಮಾನತೆಗಾಗಿ ನಿಂತವನು. ಇಂತಹ ಮರ್ಯಾದ ಪುರುಷನಿಗೆ ವಿಶೇಷ ಪೂಜೆ, ಭಕ್ತಿ ಸಮರ್ಪಿಸಬೇಕಾದ್ದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದರು.

ರಾಮರಾಜ್ಯ ಎಂದರೆ ಎಲ್ಲರೂ ಕೂಡ ಸಂತೋಷದಿಂದ ಯಾವುದೇ ಕಷ್ಟ ಇಲ್ಲದೆ ಶಾಂತಿ-ನೆಮ್ಮದಿಯಿಂದ ಜೀವನ ಮಾಡಬೇಕು ಎಂದರ್ಥ. ಭಕ್ತಿಯಿಂದ ನಾವೆಲ್ಲರೂ ಶ್ರೀರಾಮನನ್ನು ಪೂಜಿಸೋಣ ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ನೂರಾರು ವರ್ಷಗಳಿಂದ ಶ್ರೀರಾಮನವಮಿಯನ್ನು ಆಚರಿಸಿಕೊಂಡು ಬರುತ್ತಿದ್ದೇವೆ. ಈ ಸಂಪ್ರದಾಯವನ್ನು ಈಗಲೂ ಮುಂದುವರಿಸಿಕೊಂಡು ಹೋಗುತ್ತಿದ್ದೇವೆ. ಶ್ರೀರಾಮನವಮಿ ಆಚರಿಸಿ ಜನತೆಗೆ ಮಜ್ಜಿಗೆ, ಪಾನಕ, ಹೆಸರುಬೇಳೆ ಹಂಚುವ ಕೆಲಸವನ್ನು ಹಿಂದಿನಿಂದಲೂ ಮಾಡಿಕೊಂಡೇ ಬಂದಿದ್ದೇವೆ ಎಂದರು.

ಶ್ರೀರಾಮನಿಗೆ ವಿಶೇಷ ಪೂಜೆ

ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಇಂದು ಬೆಳಿಗ್ಗೆಯಿಂದಲೇ ಶ್ರೀರಾಮನವಮಿ ಆಚರಣೆಯಲ್ಲಿ ಪಾಲ್ಗೊಂಡಿದ್ದು, ನಗರದ ಬಟವಾಡಿ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಏರ್ಪಡಿಸಿದ್ದ ಶ್ರೀರಾಮನವಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ಶ್ರೀರಾಮನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.

ನಂತರ ತುಮಕೂರು ವಿವಿ ಮುಂಭಾಗ, ಟೌನ್‌ಹಾಲ್ ವೃತ್ತದಲ್ಲಿ ಪಾಲಿಕೆ ಮಾಜಿ ಸದಸ್ಯ ಜೆ. ಕುಮಾರ್ ನೇತೃತ್ವದಲ್ಲಿ ಆಯೋಜಿಸಿದ್ದ ಶ್ರೀರಾಮನವಮಿ ಆಚರಣೆಯಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿದರು. ಈ ಎಲ್ಲ ಕಡೆಯಲ್ಲ ಪರಮೇಶ್ವರ್ ಅವರು ಶ್ರೀರಾಮನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದ ಬಳಿಕ ಭಕ್ತರಿಗೆ ಪ್ರಸಾದ ವಿನಿಯೋಗಿಸಿದರು.

ಸಚಿವ ಪರಮೇಶ್ವರ್ ಅವರು ಬಿ.ಎಚ್. ರಸ್ತೆ ಬಟವಾಡಿಯಿಂದ ಬಿ.ಜಿ. ಪಾಳ್ಯ ಸರ್ಕಲ್, ಸಿರಾ ಗೇಟ್ ಸೇರಿದಂತೆ ನಗರದ ವಿವಿಧೆಡೆ ಆಯೋಜಿಸಿದ ಶ್ರೀರಾಮನವಮಿ ಆಚರಣೆಯಲ್ಲಿ ಪಾಲ್ಗೊಂಡು ಗಮನ ಸೆಳೆದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಡಾ. ರಫೀಕ್‌ಅಹಮದ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ, ಗೋವಿಂದರಾಜು, ಯುವ ಕಾಂಗ್ರೆಸ್ ಅಧ್ಯಕ್ಷ ಶಶಿಹುಲಿಕುಂಟೆ ಮಠ್, ಮೂರ್ತಿ , ಜೆ. ಕುಮಾರ್, ಮಾಜಿ ಮೇಯರ್ ಪ್ರಭಾವತಿ ಸುಧೀಶ್ವರ್, ಮಹೇಶ್, ಮೆಹಬೂಬ್ ಪಾಷ, ಜಿಯಾವುಲ್ಲಾಖಾನ್, ಸೈಯದ್ ಇಸ್ಮಾಯಿಲ್, ಉಬೇದುಲ್ಲಾ, ನಟರಾಜು ಮತ್ತಿತರರು ಪಾಲ್ಗೊಂಡಿದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಜನಪರ ಚಳವಳಿಗಳ ಚೇತನವನ್ನು ನಾವು ಉಳಿಸಿಕೊಂಡಿಲ್ಲ : ಕೆ.ಫಣಿರಾಜ್

ದಶಕಗಳ ಹಿಂದೆ ನಡೆದಿರುವ ಜನಪರ ಚಳವಳಿಗಳ ಚೇತನವನ್ನು ನಾವು ಉಳಿಸಿಕೊಂಡಿಲ್ಲ. ಆದರೆ...

ರಾಯಚೂರು | ಕುರಿಗೆ ನೀರು ಕುಡಿಸಲು ನದಿಗೆ ತೆರಳಿದ್ದ ಬಾಲಕನ್ನು ಹೊತ್ತೊಯ್ದ ಮೊಸಳೆ

ಕೃಷ್ಣ ನದಿಯಲ್ಲಿ ಕುರಿಗಳಿಗೆ ನೀರು ಕುಡಿಸಲು ಹೋಗಿದ್ದ ವೇಳೆ ಬಾಲಕನ ಮೇಲೆ...

ಕೊಪ್ಪಳ | ಬಂಡವಾಳಶಾಹಿಗಳಿಂದ ಭೂಮಿ ಉಳಿಸಬೇಕಿದೆ: ರಾಕೇಶ್ ಟಿಕಾಯತ್

ಉದ್ಯಮಿಗಳಿಗೆ ರೈತರ ಜಮೀನು ಕಡಿಮೆ ದರದಲ್ಲಿ ಖರೀದಿಸಿ ಬಡಜನರ ಹೊಟ್ಟೆಗೆ ಬಟ್ಟೆ...

ಬೆಂಗಳೂರು | ಐಸಿಯುನಲ್ಲಿದ್ದ ರೋಗಿಗೆ ರಕ್ತ ಬರುವ ಹಾಗೆ ಥಳಿಸಿದ ಕೆ.ಸಿ.ಜನರಲ್ ಆಸ್ಪತ್ರೆ ಸಿಬ್ಬಂದಿ

ರಾಜ್ಯ ರಾಜಧಾನಿ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯ ಐಸಿಯುನಲ್ಲಿದ್ದ ರೋಗಿಯೊಬ್ಬರಿಗೆ ಆಸ್ಪತ್ರೆ ಸಿಬ್ಬಂದಿ...