ಯಾದಗಿರಿ | ತುಮಕೂರಿನಲ್ಲಿ ಸೆ. 1,2,3 ರಂದು ರಾಜ್ಯ ಮಟ್ಟದ ವಿದ್ಯಾರ್ಥಿ ಸಮ್ಮೇಳನ

Date:

  • ತುಮಕೂರಿನಲ್ಲಿ ಸೆಪ್ಟೆಂಬರ್ ‌1,2 ಹಾಗೂ 3ರಂದು 8ನೇ ರಾಜ್ಯ ಮಟ್ಟದ ವಿದ್ಯಾರ್ಥಿ ಸಮ್ಮೇಳನ
  • ಸರ್ಕಾರಗಳು ಶೈಕ್ಷಣಿಕ ನೀತಿ-ನಿಲುವುಗಳ ಮೂಲಕ ಶಿಕ್ಷಣವನ್ನು ಮತ್ತಷ್ಟು ಖಾಸಗೀಕರಣಗೊಳಿಸುತ್ತಿದೆ

ನವೋದಯ ಚಿಂತಕರ ಹಾಗೂ ಕ್ರಾಂತಿಕಾರಿಗಳ ಆಶಯವನ್ನು ನಾವು ಪೂರ್ಣಗೊಳಿಸಬೇಕು. ವಿದ್ಯಾರ್ಥಿ ಸಮ್ಮೇಳನದ ಮೂಲಕ ಶೈಕ್ಷಣಿಕ ಸಮಸ್ಯೆಗಳ ವಿರುದ್ಧ ಪ್ರಬಲ ಸಂಘಟಿತ ಹೋರಾಟಗಳನ್ನು ಬೆಳೆಸುವ ಸಂಕಲ್ಪದಿಂದ ಸೆಪ್ಟೆಂಬರ್ ‌1,2 ಮತ್ತು 3 ರಂದು ಮೂರು ದಿನಗಳ ಕಾಲ ತುಮಕೂರಿನಲ್ಲಿ 8ನೇ ರಾಜ್ಯಮಟ್ಟದ ವಿದ್ಯಾರ್ಥಿ ಸಮ್ಮೇಳನ ಆಯೋಜಿಸಲಾಗಿದೆ ಎಂದು ಎಐಡಿಎಸ್‌ ಒ ಯಾದಗಿರಿ ಜಿಲ್ಲಾ ಸಂಚಾಲಕಿ ಶಿಲ್ಪಾ. ಬಿ.ಕೆ. ಹೇಳಿದರು.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ ಅವರು, “ಬಹಳ ನೋವಿನಿಂದ ಗಮನಿಸುತ್ತಿದ್ದೇವೆ. ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ, ಶೈಕ್ಷಣಿಕ ವಲಯವನ್ನು ಅಭಿವೃದ್ಧಿಗೊಳಿಸಿ, ಕಡೆಯ ಮಗುವಿಗೂ ಶಿಕ್ಷಣ ದಕ್ಕುವಂತೆ ಮಾಡುವುದು ಅವರ ಆದ್ಯತೆಯಾಗಿ ಉಳಿದಿಲ್ಲ. ಬದಲಿಗೆ, ಸರ್ಕಾರವು ತನ್ನ ಶೈಕ್ಷಣಿಕ ನೀತಿ-ನಿಲುವುಗಳ ಮೂಲಕ ಶಿಕ್ಷಣವನ್ನು ಮತ್ತಷ್ಟು ಖಾಸಗೀಕರಣಗೊಳಿಸುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದರು.

“ಒಂದೆಡೆ, ಸರ್ಕಾರಿ ಶಿಕ್ಷಣ ಸಂಸ್ಥೆಗಳ ಸಂಪೂರ್ಣ ನಿರ್ವಹಣೆ -ಅಂದರೆ, ಹಣ ಒದಗಿಸುವ, ಮೂಲಭೂತ ಸೌಕರ್ಯಗಳನ್ನು ನೀಡುವ, ಅಗತ್ಯ ಸಂಖ್ಯೆಯ ಶಿಕ್ಷಕರನ್ನು ನೇಮಿಸುವ ತನ್ನ ಮುಖ್ಯ ಕರ್ತವ್ಯಗಳಿಂದ ಸರ್ಕಾರವು ತಪ್ಪಿಸಿಕೊಳ್ಳುತ್ತ, ಮತ್ತೊಂದೆಡೆ ಎನ್ಈಪಿ -2020, ಸ್ವಯಂ ಹಣಕಾಸು ಸಂಸ್ಥೆಗಳು(ಕಾಲೇಜು ನಡೆಸಲು ವಿದ್ಯಾರ್ಥಿಗಳಿಂದಲೇ ಪೂರ್ತಿ ಹಣ ಪಡೆಯುವುದು), ಸರ್ಕಾರಿ ಶಾಲೆಗಳ ವಿಲೀನ (ಕಡಿಮೆ ಹಾಜರಾತಿ ಇರುವ ಶಾಲೆಗಳನ್ನು ಮುಚ್ಚುವುದು), ನಾಲ್ಕು ವರ್ಷಗಳ ಪದವಿ ಕೋರ್ಸ್ ಮುಂತಾದ ಹತ್ತು ಹಲವು ನೀತಿಗಳ ಮೂಲಕ ಸರ್ಕಾರವು ಶಿಕ್ಷಣವನ್ನು ಖಾಸಗಿ ಮಡಿಲಿಗೆ ಹಾಕಿ, ಲಕ್ಷಾಂತರ ಬಡ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ದೂರ ತಳ್ಳುತ್ತಿದೆ” ದೂರಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಶಿಕ್ಷಣ ಮತ್ತು ವಿದ್ಯಾರ್ಥಿ ವಿರೋಧಿ ನೀತಿಗಳ ವಿರುದ್ಧ ಎಐಡಿಎಸ್ಓ ಸಂಘಟನೆಯು ಕರ್ನಾಟಕ ರಾಜ್ಯದಲ್ಲಿ ಕಳೆದ 5 ದಶಕಗಳಿಂದಲೂ ಚಳುವಳಿಗಳನ್ನು ಬೆಳೆಸುತ್ತಾ ಬಂದಿದೆ. ಶುಲ್ಕ ಏರಿಕೆ ವಿರೋಧಿ ಚಳುವಳಿ, ಹಾಸ್ಟೆಲ್ ಚಳುವಳಿಗಳು, ಸರ್ಕಾರಿ ಶಾಲೆ ಉಳಿಸಲು ಹೋರಾಟ, ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ವಿರೋಧಿಸಿ ಹೋರಾಟ, ಉಚಿತ ಬಸ್ ಪಾಸ್ ಗಾಗಿ ಹೋರಾಟ ಸೇರಿದಂತೆ ಹಲವು ಚಳುವಳಿಗಳನ್ನು ಎಐಡಿಎಸ್ಓ ಮುನ್ನಡೆಸಿದೆ. ಕಳೆದ ವರ್ಷ ‘ಸಾರ್ವಜನಿಕ ಶಿಕ್ಷಣ ಉಳಿಸಿ’ ಬೃಹತ್ ಆಂದೋಲನ ನಡೆಸಿ ರಾಜ್ಯದಾದ್ಯಂತ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಿ 35 ಲಕ್ಷಕ್ಕೂ ಅಧಿಕ ಸಹಿಗಳನ್ನು ಸಂಗ್ರಹ ಮಾಡಿದ್ದೆವು. ರಾಜ್ಯದಲ್ಲಿ ಈ ಆಂದೋಲನವು ದೊಡ್ಡ ಪ್ರಭಾವ ಬೀರಿದ್ದು, ನೂರಾರು ಶಿಕ್ಷಕರು, ಪ್ರಾಂಶುಪಾಲರು, ಪೋಷಕರು ನಮ್ಮ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು” ಎಂದರು.

“ಎಲ್ಲಿಯವರೆಗೂ ಶಿಕ್ಷಣವು ಸರ್ಕಾರಗಳ ಆದ್ಯತೆ ಆಗುವದಿಲ್ಲವೋ, ಅಲ್ಲಿಯವರೆಗೂ ನಮ್ಮ ಮೂಲಭೂತ ಹಕ್ಕುಗಳನ್ನು ಹೋರಾಟದ ಮೂಲಕವೇ ನಾವು ಗೆದ್ದುಕೊಳ್ಳಬೇಕು. 2023ರ ಸೆಪ್ಟೆಂಬರ್ ‌1,2 ಮತ್ತು 3, ತುಮಕೂರಿನಲ್ಲಿ ಸಂಘಟಿಸಿರುವ ರಾಜ್ಯಮಟ್ಟದ ವಿದ್ಯಾರ್ಥಿ ಸಮ್ಮೇಳನವನ್ನು ಯಶಸ್ವಿಗೊಳಿಸುವ ಜವಾಬ್ದಾರಿ ಪ್ರತಿಯೊಬ್ಬ ವಿದ್ಯಾರ್ಥಿಯ ಮೇಲಿದೆ. ರಾಜ್ಯದಲ್ಲಿ ವಿದ್ಯಾರ್ಥಿ ಚಳುವಳಿಯನ್ನು ಮುನ್ನಡೆಸಲು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಬೇಕೆಂದು” ಅವರು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ ? ರಾಯಚೂರು | ಶಿಕ್ಷಕ ಹುದ್ದೆಗೆ ಆಯ್ಕೆಯಾದ ಯುವಕ; ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆ

ಬೇಡಿಕೆಗಳು:
1.ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ಒದಗಿಸುವುದು.
2.ಸಾರ್ವಜನಿಕ ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸಬೇಕು.
3.ಪಠ್ಯಕ್ರಮದ ಮೂಲಕ ಶಿಕ್ಷಣ ಸಂಸ್ಥೆಗಳಲ್ಲಿ ಧರ್ಮನಿರಪೇಕ್ಷ ವಾತಾವರಣವನ್ನು ರಕ್ಷಿಸಬೇಕು.
4.ವಿದ್ಯಾರ್ಥಿವೇತನ ಮತ್ತು ಹಾಸ್ಟೆಲ್‌ ಸೌಲಭ್ಯಗಳನ್ನು ಖಾತ್ರಿಪಡಿಸಬೇಕು.
5.ಎನ್ಈಪಿ-2 2020ರ ಅಪ್ರಜಾತಾಂತ್ರಿಕ ಹೇರಿಕೆಯನ್ನು ಕೈಬಿಡಬೇಕು.
6.ಸ್ವಯಂ ಹಣಕಾಸು ಸಂಸ್ಥೆಗಳನ್ನು ನಿಲ್ಲಿಸಿ, ತಾರತಮ್ಯವಿಲ್ಲದೆ ಎಲ್ಲಾ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ನೀಡುವುದು.
7. ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿ ಮಾಡಬೇಕು.
8. ಅತಿಥಿ ಶಿಕ್ಷಕರ ಹಕ್ಕುಗಳನ್ನು ರಕ್ಷಿಸಬೇಕು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಎಚ್‌ಡಿಕೆ ಹೇಳಿಕೆಗೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರ ಖಂಡನೆ

ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು...

ಕಲಬುರಗಿ | ಪ್ರಜಾಪ್ರಭುತ್ವದ ಉಳಿವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌ಗೆ ಬೆಂಬಲ: ದಸಂಸ

2024ರ ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳಿವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌...

ದಾವಣಗೆರೆ | ಭಾರತ ದೇಶ ಇರುವವರೆಗೂ ಸಂವಿಧಾನ ಇರುತ್ತದೆ: ಪ್ರಾಂಶುಪಾಲ ಕಲ್ಲೇಶ್‌

ಭಾರತ ದೇಶ ಇರುವವರೆಗೂ ಸಂವಿಧಾನ ಇರುತ್ತದೆ. ಅದರ ಬದಲಾವಣೆ ಯಾರಿಂದಲೂ ಸಾಧ್ಯವಿಲ್ಲ...

ರಾಯಚೂರು | ಎಚ್‌ಡಿಕೆಯಿಂದ ಮಹಿಳೆಯರಿಗೆ ಅವಮಾನ, ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಕುರಿತು ಜೆಡಿಎಸ್ ರಾಜ್ಯಾಧ್ಯಕ್ಷ...