ವಿದ್ಯಾರ್ಥಿನಿಯ ಶಾಲಾ ಶೌಚಾಲಯದ ಮೇಲೆ ಕಲ್ಲು ತೂರಾಟ ಮಾಡಿದ್ದಲ್ಲದೆ ಪ್ರಶ್ನಿಸಿದ ವಿದ್ಯಾರ್ಥಿಯನ್ನು ಪುಂಡರ ಗುಂಪೊಂದು ಥಳಿಸಿರುವ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಸರ್ಕಾರಿ ಶಾಲೆಯಲ್ಲಿ ನಡೆದಿದೆ.
ಹುಳಿಯಾರು ನಿವಾಸಿಗಳಾದ ಮಹಬೂಬ್ ಷರಿಫ್, ಶಂಶುದ್ದೀನ್, ಇರ್ಫಾನ್, ಮುಬಾರಕ್, ಮುದಾಸೀರ್, ಯಾಸೀನ್ ಹಾಗೂ ತಾಝೀಮ್ ಕಲ್ಲು ತೂರಿ ಹಲ್ಲೆ ಮಾಡಿದ ಆರೋಪಿಗಳು. ಇನ್ನು ಘಟನೆ ಸಂಬಂಧ ಪುಂಡರ ವಿರುದ್ಧ ದೂರು ದಾಖಲಾಗಿದ್ದು, ಐವರನ್ನು ಬಂಧಿಸಲಾಗಿದೆ. ಉಳಿದಿಬ್ಬರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಕೆಪಿಎಸ್ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಯಶ್ವಂತ್ ನಿನ್ನೆ (ಮಾ.14)ರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಮೂತ್ರ ವಿಸರ್ಜನೆಗೆ ತೆರಳಿದ್ದರು. ಈ ವೇಳೆ ಬಾಲಕಿಯರ ಶೌಚಾಲಯದ ಮೇಲೆ ಕಿಡಿಗೇಡಿಗಳು ಕಲ್ಲು ಎಸೆಯುತ್ತಿದ್ದನ್ನು ಯಶ್ವಂತ್ ಪ್ರಶ್ನಿಸಿದ್ದಾರೆ. ಕುಪಿತಗೊಂಡ ಗುಂಪು ಶಾಲೆಯ ಆವರಣದೊಳಗೆ ನುಗ್ಗಿ ಯಶ್ವಂತ್ನನ್ನು ಅಟ್ಟಾಡಿಸಿಕೊಂಡು ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ವಿಚಾರ ತಿಳಿದ ಕೂಡಲೆ ಶಾಲೆಯ ಮುಖ್ಯಾಪಾಧ್ಯಾರು ಸ್ಥಳಕ್ಕೆ ದೌಡಾಯಿಸಿ, ಹಲ್ಲೆ ಮಾಡುವುದನ್ನು ತಡೆದು, ಯಶ್ವಂತ್ನನ್ನು ರಕ್ಷಿಸಿದ್ದಾರೆ. ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಬರುವುದನ್ನು ಕಂಡ ಪುಂಡರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಯಶ್ವಂತ್ರನ್ನು ಚಿಕ್ಕನಾಯಕನಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ತುಮಕೂರು | ಒಳಮೀಸಲಾತಿ ಪಾದಯಾತ್ರೆ ಮಾ.21ಕ್ಕೆ ಬೆಂಗಳೂರು ತಲುಪಲಿದೆ : ಭಾಸ್ಕರ್ ಪ್ರಸಾದ್
ಹುಳಿಯಾರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಸುಳೆಮಕ್ಕಲಿಗೆ ಸರಿಯಾಗಿ ಬೆಂಡೆತಿ