ತುಮಕೂರು | ಬಾಲಕಿಯರ ಶೌಚಾಲಯದ ಮೇಲೆ ಕಲ್ಲು ತೂರಾಟ; ಕಿಡಿಗೇಡಿಗಳ ಬಂಧನ

Date:

ವಿದ್ಯಾರ್ಥಿನಿಯ ಶಾಲಾ ಶೌಚಾಲಯದ ಮೇಲೆ ಕಲ್ಲು ತೂರಾಟ ಮಾಡಿದ್ದಲ್ಲದೆ ಪ್ರಶ್ನಿಸಿದ ವಿದ್ಯಾರ್ಥಿಯನ್ನು ಪುಂಡರ ಗುಂಪೊಂದು ಥಳಿಸಿರುವ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಸರ್ಕಾರಿ ಶಾಲೆಯಲ್ಲಿ ನಡೆದಿದೆ.

- Advertisement -

ಹುಳಿಯಾರು ನಿವಾಸಿಗಳಾದ ಮಹಬೂಬ್ ಷರಿಫ್, ಶಂಶುದ್ದೀನ್​, ಇರ್ಫಾನ್​, ಮುಬಾರಕ್​, ಮುದಾಸೀರ್, ಯಾಸೀನ್​ ಹಾಗೂ ತಾಝೀಮ್​ ಕಲ್ಲು ತೂರಿ ಹಲ್ಲೆ ಮಾಡಿದ ಆರೋಪಿಗಳು. ಇನ್ನು ಘಟನೆ ಸಂಬಂಧ ಪುಂಡರ ವಿರುದ್ಧ ದೂರು ದಾಖಲಾಗಿದ್ದು, ಐವರನ್ನು ಬಂಧಿಸಲಾಗಿದೆ. ಉಳಿದಿಬ್ಬರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕೆಪಿಎಸ್​ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಯಶ್ವಂತ್ ನಿನ್ನೆ (ಮಾ.14)ರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಮೂತ್ರ ವಿಸರ್ಜನೆಗೆ ತೆರಳಿದ್ದರು. ಈ ವೇಳೆ ಬಾಲಕಿಯರ ಶೌಚಾಲಯದ ಮೇಲೆ ಕಿಡಿಗೇಡಿಗಳು ಕಲ್ಲು ಎಸೆಯುತ್ತಿದ್ದನ್ನು ಯಶ್ವಂತ್​ ಪ್ರಶ್ನಿಸಿದ್ದಾರೆ. ಕುಪಿತಗೊಂಡ ಗುಂಪು ಶಾಲೆಯ ಆವರಣದೊಳಗೆ ನುಗ್ಗಿ ಯಶ್ವಂತ್​ನನ್ನು ಅಟ್ಟಾಡಿಸಿಕೊಂಡು ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ವಿಚಾರ ತಿಳಿದ ಕೂಡಲೆ ಶಾಲೆಯ ಮುಖ್ಯಾಪಾಧ್ಯಾರು ಸ್ಥಳಕ್ಕೆ ದೌಡಾಯಿಸಿ, ಹಲ್ಲೆ ಮಾಡುವುದನ್ನು ತಡೆದು, ಯಶ್ವಂತ್​ನನ್ನು ರಕ್ಷಿಸಿದ್ದಾರೆ. ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಬರುವುದನ್ನು ಕಂಡ ಪುಂಡರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಯಶ್ವಂತ್​ರನ್ನು ಚಿಕ್ಕನಾಯಕನಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ತುಮಕೂರು | ಒಳಮೀಸಲಾತಿ ಪಾದಯಾತ್ರೆ ಮಾ.21ಕ್ಕೆ ಬೆಂಗಳೂರು ತಲುಪಲಿದೆ : ಭಾಸ್ಕರ್ ಪ್ರಸಾದ್

ಹುಳಿಯಾರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...