ತುಮಕೂರು | ಸುಳ್ಳು ಪ್ರಕರಣ ದಾಖಲಿಸುವವರ ವಿರುದ್ದ ಕಠಿಣ ಕಾನೂನು ಕ್ರಮ : ನ್ಯಾ. ಬಿ.ವೀರಪ್ಪ

Date:

Advertisements

ಸರ್ಕಾರಿ ಅಧಿಕಾರಿಗಳ ವಿರುದ್ಧ ಸೂಕ್ತ ಕಾರಣಗಳಿಲ್ಲದೆ ಸುಳ್ಳು ಪ್ರಕರಣ ದಾಖಲಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು 1ಕ್ಕಿಂತ ಹೆಚ್ಚು ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ತಿಳಿಸಿದರು.

ತುಮಕೂರು ನಗರದ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ಶುಕ್ರವಾರ ಕರ್ನಾಟಕ ಲೋಕಾಯುಕ್ತ ಕಚೇರಿಯಿಂದ ಹಮ್ಮಿಕೊಳ್ಳಲಾಗಿದ್ದ ಸಾರ್ವಜನಿಕರಿಂದ ಕುಂದು ಕೊರತೆ ಅಹವಾಲುಗಳ ಸ್ವೀಕಾರ, ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಲೋಕಾಯುಕ್ತದಲ್ಲಿ ಪ್ರಸ್ತುತ 20,000 ದೂರು ಅರ್ಜಿಗಳು ಬಾಕಿ ಉಳಿದಿವೆ. ಈ ಪೈಕಿ ಶೇ.50ರಷ್ಟು ದೂರು ಅರ್ಜಿಗಳು ಸುಳ್ಳುಗಳಿಂದ ಕೂಡಿವೆ. ಇದರಿಂದ ಲೋಕಾಯುಕ್ತದ ಸಮಯ ವ್ಯರ್ಥವಾಗುತ್ತಿದೆಯಲ್ಲದೆ ನೈಜ ದೂರು ಪ್ರಕರಣಗಳ ವಿಲೇವಾರಿಗೂ ವಿಳಂಬವಾಗುತ್ತಿದೆ ಎಂದು ಬೇಸರ ವ್ಯಕ್ತ ಪಡಿಸಿದರು.

ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನವನಾದ ನಾನು ನಮ್ಮ ಜಿಲ್ಲೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು ಸಂತಸ ತಂದಿದೆ ಎಂದು ತಿಳಿಸಿದರು.

Advertisements
1000557177

ಶೇ.80ರಷ್ಟು ವಿದ್ಯಾವಂತರಲ್ಲಿ ಕಾನೂನು ಅರಿವಿನ ಕೊರತೆ : ವಿಶ್ವದಲ್ಲೇ ಅತ್ಯಂತ ಬಲಿಷ್ಠ ಪ್ರಜಾ ಪ್ರಭುತ್ವ ಹೊಂದಿರುವ ದೇಶದಲ್ಲಿ ಶೇ.80ರಷ್ಟು ವಿದ್ಯಾವಂತರಲ್ಲಿ ಕಾನೂನು ಅರಿವಿನ ಕೊರತೆಯಿದೆ. ವಿದ್ಯಾವಂತ ಮೋಸಗಾರರಿಂದ ಸರ್ಕಾರಿ ವ್ಯವಸ್ಥೆ ಹಾಳಾಗುತ್ತಿದೆ ಎಂದು ಕಳವಳ ವ್ಯಕ್ತ ಪಡಿಸಿದರು.ಲೋಕಾಯುಕ್ತ ಸಂಸ್ಥೆಯು ಸರ್ಕಾರಿ ಇಲಾಖೆ ಹಾಗೂ ಸರ್ಕಾರೇತರ ಸಂಸ್ಥೆಗಳಲ್ಲಿ ಕಂಡು ಬರುವ ಭ್ರಷ್ಟಾಚಾರವನ್ನು ನಿಯಂತ್ರಿಸಲು ಮತ್ತು ಅಧಿಕಾರಿಗಳಲ್ಲಿರುವ ವಿಳಂಬ ಧೋರಣೆಯನ್ನು ತಡೆಗಟ್ಟುವ ಉದ್ದೇಶದಿಂದ 1984ರಲ್ಲಿ ಸ್ಥಾಪನೆಗೊಂಡ ಸ್ವತಂತ್ರ ಸಂಸ್ಥೆಯಾಗಿದೆ. ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ, ಅವರ ಸಮಸ್ಯೆಗಳನ್ನು ಬಗೆಹರಿಸಬೇಕು. ಸಾರ್ವಜನಿಕರು ಹಾಗೂ ಅಧಿಕಾರಿಗಳ ಮನಸ್ಥಿತಿ ಬದಲಾದಾಗ ಮಾತ್ರ ಸಂಪೂರ್ಣವಾಗಿ ಭ್ರಷ್ಟಾಚಾರವನ್ನು ಹೊಡೆದೋಡಿಸಲು ಸಾಧ್ಯ ಎಂದು ತಿಳಿಸಿದರು.

1000557175

ಭ್ರಷ್ಟಾಚಾರವು ಸಮಾಜದ ದೊಡ್ಡ ಪಿಡುಗಾಗಿ ಪರಿಣಮಿಸಿದೆ. ಕ್ಯಾನ್ಸರ್ ರೋಗವನ್ನಾದರೂ ಗುಣಪಡಿಸಬಹುದು. ಆದರೆ ಭ್ರಷ್ಟಾಚಾರವನ್ನು ತೊಲಗಿಸಲು ಸಾಧ್ಯವಾಗುತ್ತಿಲ್ಲ. ಸರ್ಕಾರಿ ಅಧಿಕಾರಿಗಳು ಪ್ರಾಮಾಣಿಕ ಸೇವೆಯನ್ನು ಒದಗಿಸಬೇಕೇ ಹೊರತು ಹಣಕ್ಕಾಗಿ ಕೈಚಾಚಬಾರದು. ನಮ್ಮ ಅಸ್ತಿತ್ವವನ್ನು ನಾವು ಯಾರಿಗೂ ಮಾರಿಕೊಳ್ಳಬಾರದು. ನಾರದ ಮುನಿಗಳ ಉಪದೇಶದಿಂದ ರತ್ನಾಕರನು ಮಹರ್ಷಿ ವಾಲ್ಮೀಕಿಯಾಗಿ ಪರಿವರ್ತನೆಯಾದಂತೆ ಭ್ರಷ್ಟ ಅಧಿಕಾರಿ, ಸಿಬ್ಬಂದಿಗಳು ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳಬೇಕು ಎಂದು ಮಾರ್ಮಿಕವಾಗಿ ನುಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X