ತುಮಕೂರು | ನೀರಿನ ಸಮಸ್ಯೆ ಬಾರದಂತೆ ಕ್ರಮಕೈಗೊಳ್ಳಿ : ಜಿಲ್ಲಾಧಿಕಾರಿ ಸೂಚನೆ

Date:

Advertisements

 ಬೇಸಿಗೆ ಸಮೀಪಿಸುತ್ತಿರುವುದರಿಂದ ಜನ-ಜಾನುವಾರುಗಳಿಗೆ ಕುಡಿಯಲು ನೀರಿನ ಸಮಸ್ಯೆ ಬಾರದಂತೆ ಅಧಿಕಾರಿಗಳು ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. 

 ಜಿಲ್ಲೆಯ ಪಾವಗಡ ತಾಲ್ಲೂಕು ನಾಗೇನಹಳ್ಳಿಗೆ ಬುಧವಾರ ಸಂಜೆ ಭೇಟಿ ನೀಡಿ ಶುದ್ಧ ಕುಡಿಯುವ ನೀರಿನ ಘಟಕದ ನಿರ್ವಹಣೆಯನ್ನು ಪರಿಶೀಲಿಸಿ ಮಾತನಾಡಿದ ಅವರು, ಜನರಿಗೆ ನೀರು ಒದಗಿಸುವಲ್ಲಿ ನಿರ್ಲಕ್ಷತೆ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು. ಜನರಿಂದ ದೂರು ಬಾರದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶಿಸಿದರು.  

ಗ್ರಾಮಸ್ಥರಿಂದ ಬೇಡಿಕೆ :

Advertisements

 ನಾಗೇನಹಳ್ಳಿ ಗ್ರಾಮದಲ್ಲಿರುವ ಶುದ್ಧ ನೀರಿನ ಘಟಕಕ್ಕೆ ಕಾಯಿನ್ ಪದ್ಧತಿಯನ್ನು ಅಳವಡಿಸಬೇಕೆಂದು ಗ್ರಾಮಸ್ಥರ ಮನವಿಯನ್ನು ಆಲಿಸಿದ ಜಿಲ್ಲಾಧಿಕಾರಿಗಳು ಸ್ಥಳದಲ್ಲಿದ್ದ ಗ್ರಾಮೀಣ ನೀರು ಸರಬರಾಜು ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಬಸವಲಿಂಗಪ್ಪ ಅವರಿಗೆ ಕೂಡಲೇ ಕಾಯಿನ್ ಪದ್ಧತಿ ಅಳವಡಿಸಲು ಸೂಚನೆ ನೀಡಿದರು. 

1001078737

 ಗ್ರಾಮಗಳಿಗೆ ಪ್ರತೀ ದಿನ ಕುಡಿಯುವ ನೀರು ಪೂರೈಕೆ ಮಾಡಬೇಕು ಎಂದು ಸೂಚಿಸಿದರಲ್ಲದೆ ರಸ್ತೆ ಬದಿಯಲ್ಲಿ ತಿಪ್ಪೆ, ಕಸದ ರಾಶಿಯನ್ನು ಕಂಡ ಅವರು ಗ್ರಾಮದಲ್ಲಿ ಕಸ ವಿಲೇವಾರಿ ಸಮರ್ಪಕವಾಗಿರಬೇಕು. ನೈರ್ಮಲ್ಯತೆ ಕಾಪಾಡದಿದ್ದರೆ ಖಾಯಿಲೆಗಳಿಗೆ ಆಹ್ವಾನ ನೀಡಿದಂತೆ. ಅನೈರ್ಮಲ್ಯತೆಯಿಂದ ಜನ-ಜಾನುವಾರುಗಳಿಗೆ ರೋಗ-ರುಜಿನಗಳು ತಗಲುವ ಸಾಧ್ಯತೆ ಇರುತ್ತದೆ. ಜನವಸತಿ ಪ್ರದೇಶಗಳನ್ನು ಸ್ವಚ್ಛವಾಗಿಡಬೇಕು ಎಂದು ಸೂಚಿಸಿದರು. 

ನಂತರ ಪಾವಗಡ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಪಾವಗಡ ಪಟ್ಟಣದ ವ್ಯಾಪ್ತಿಯಲ್ಲಿ ಪ್ರತಿದಿನ ಕುಡಿಯುವ ನೀರಿನ ಸರಬರಾಜು ಮಾಡಬೇಕು. ಈಗಾಗಲೇ ತುಂಗಭದ್ರಾ ನೀರು ಪಾವಗಡದ ವ್ಯಾಪ್ತಿಗೆ ಹರಿಯುತ್ತಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುವುದಿಲ್ಲವೆಂಬ ಭರವಸೆ ಇದೆ ಎಂದು ತಿಳಿಸಿದರು. 

1001078739

ಪಾವಗಡ ಪುರಸಭೆಯ 23 ವಾರ್ಡುಗಳಿಗೂ ಸಾರ್ವಜನಿಕರಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸುವ ಜವಾಬ್ದಾರಿಯನ್ನು ನಿರ್ವಹಿಸಬೇಕು. ಕುಡಿಯುವ ನೀರು ಪೂರೈಸುವುದರಲ್ಲಿ ಲೋಪ ದೋಷ ಕಂಡು ಬಂದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಪುರಸಭೆಯ ಮುಖ್ಯಾಧಿಕಾರಿ ಜಾಫರ್ ಷರೀಫ್ ಅವರಿಗೆ ಸೂಚಿಸಿದರು.

ಇದೇ ಸಂದರ್ಭದಲ್ಲಿ ಮಧುಗಿರಿ ಉಪವಿಭಾಗಧಿಕಾರಿ ಗೋಟೂರು ಶಿವಪ್ಪ, ತಹಸೀಲ್ದಾರ್ ವರದರಾಜು, ಆರೋಗ್ಯಾಧಿಕಾರಿ ಶಂಷುದ್ದೀನ್, ಕಂದಾಯ ಇಲಾಖೆಯ ನಿರೀಕ್ಷಕರಾದ ರಾಜ್‌ಗೋಪಾಲ್ ಹಾಗೂ ನಾರಾಯಣಪ್ಪ, ತುಮಕೂರು-ರಾಯದುರ್ಗ ರೈಲ್ವೆ ಯೋಜನೆಯ ಇಂಜಿನಿಯರ್‌ಗಳು ಹಾಗೂ ಮತ್ತಿತರ ಅಧಿಕಾರಿಗಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X