ಗುಬ್ಬಿ | ವಿದ್ಯಾರ್ಥಿಗಳಿಗೆ ಬೌದ್ಧಿಕ ವಿಕಾಸಕ್ಕೆ ಶಿಕ್ಷಕರ ಕೊಡುಗೆ ಅಪಾರ : ಹಿರೇಮಗಳೂರು ಕಣ್ಣನ್

Date:

Advertisements

ಜಾತಿಯ ಭೂಮಿಕೆ ಬಿತ್ತದೆ ಮಕ್ಕಳಲ್ಲಿ ಬೌದ್ಧಿಕ ಶಿಕ್ಷಣ ನೀಡುವ ಶಿಕ್ಷಕ ವರ್ಗದ ಸೇವೆ ನಿಜವಾದ ಜಾತ್ಯತೀತ ನಿಲುವು ಹೊತ್ತ ಶುದ್ಧ ಸೇವೆ ಎನಿಸಿದೆ ಎಂದು ಲೇಖಕ ಹಿರೇಮಗಳೂರು ಕಣ್ಣನ್ ಅಭಿಪ್ರಾಯಪಟ್ಟರು.

ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಹೊರವಲಯದ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಸರ್ವಪಳ್ಳಿ ರಾಧಾಕೃಷ್ಣನ್ ಅವರ 137 ನೇ ಜನ್ಮ ಜಯಂತಿ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಹದಲ್ಲಿ ದೇಶವಿದೆ ಎಂಬ ವಾಕ್ಯ ಶಿಕ್ಷಣ ಕ್ಷೇತ್ರದಲ್ಲಿ ಮಾತ್ರ ಕಾಣಲು ಸಾಧ್ಯ. ವೇತನಕ್ಕೆ ದುಡಿಯುವ ಕಾಯಕಗಳ ಮಧ್ಯೆ ದೇಶಕ್ಕಾಗಿ ದುಡಿಯುವ ಶಿಕ್ಷಕ ವೃತ್ತಿಯ ಮಹತ್ವ ರಾಧಾಕೃಷ್ಣನ್ ಅವರು ಇಡೀ ವಿಶ್ವಕ್ಕೆ ಪರಿಚಯಿಸಿದರು ಎಂದರು.

ಪ್ರಪಂಚದ ಅಭಿವೃದ್ದಿ ಹೊಂದಿದ ರಾಷ್ಟ್ರಗಳ ಮಾದರಿ ಪಡೆದಾಗ ಶಿಕ್ಷಣಕ್ಕೆ ನೀಡಿದ ಮಹತ್ವ ತಿಳಿಯುತ್ತದೆ. ನಮ್ಮಲ್ಲಿ ಸಹ ಶೈಕ್ಷಣಿಕ ಕ್ಷೇತ್ರ ಉತ್ತಮಗೊಳ್ಳುತ್ತಿದೆ. ಆದರೆ ನಮ್ಮ ಸಂಸ್ಕೃತಿ, ಪರಂಪರೆ ಗಮನಿಸಿದರೆ ಅನಕ್ಷರತೆ ಹೆಚ್ಚಿದ್ದರೂ ಸುಶಿಕ್ಷಿತ ಬದುಕು ನಮ್ಮಲ್ಲಿ ಇತ್ತು. ಬದುಕಿಗೆ ಧ್ಯೇಯ ಮುಖ್ಯ. ಆದರ್ಶ ಅಳವಡಿಸಿಕೊಂಡು ಶಿಕ್ಷಣ ಮೂಲಕ ಬೆಳವಣಿಗೆ ಆಗಿರುವ ಮಹನೀಯರಲ್ಲಿ ರಾಧಾಕೃಷ್ಣನ್ ಹಾಗೂ ಅಬ್ದುಲ್ ಕಲಾಂ ಮಾದರಿಗಳು. ಅವರ ಆದರ್ಶ ಶಿಕ್ಷಕ ವೃಂದ ಅಳವಡಿಸಿಕೊಂಡರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದರು.

Advertisements

ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್, ದಂಡಿಸಿ ನೀಡುವ ಶಿಕ್ಷಣ ಉತ್ತಮ ಭವಿಷ್ಯ ಕಟ್ಟಿಕೊಡುತ್ತಿತ್ತು. ಆದರೆ ಈ ಮಕ್ಕಳನ್ನು ಪ್ರಶ್ನಿಸಿದರೂ ಪೋಷಕರಿಂದ ಬೈಗುಳ ಕಟ್ಟಿಟ್ಟ ಬುತ್ತಿ. ಈ ಹಿನ್ನೆಲೆಯಲ್ಲಿ ಶಿಕ್ಷಕರು ಸಹ ಪಾಠ ಮಾಡೋದು ವೇತನ ಪಡೆಯೋದು ಇಷ್ಟೇ ಮಾಡುವಂತಾಗಿದೆ. ಬದಲಾದ ಸಮಾಜಕ್ಕೆ ಬದಲಾದ ಪೋಷಕರು, ವಿದ್ಯಾರ್ಥಿಗಳು ಹಿಂದಿನ ಗುರು ಶಿಷ್ಯರ ಪರಂಪರೆಯನ್ನು ಮರೆಮಾಚಿದೆ. ಆಧುನಿಕತೆ ಶಿಕ್ಷಣದಲ್ಲಿ ಮಾಹಿತಿಗೆ ತಂತ್ರಜ್ಞಾನ ಬಳಕೆ ನಡೆದಿದೆ. ಇವೆಲ್ಲದರ ಜೊತೆ ಸರ್ಕಾರ ಬಜೆಟ್‌ನಲ್ಲಿ ಶಿಕ್ಷಣ ಇಲಾಖೆಗೆ 33 ಸಾವಿರ ಕೋಟಿ ರೂ ಅನುದಾನ ಮೀಸಲಿಟ್ಟಿದೆ. ಇದರ ಸದ್ಬಳಕೆ ಮಾಡಿ ಉತ್ತಮ ಫಲಿತಾಂಶ ತರುವಲ್ಲಿ ಶ್ರಮಿಸಲು ಸೂಚಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ನಟರಾಜು ಪ್ರಾಸ್ತಾವಿಕವಾಗಿ ಮಾತನಾಡಿ, ಶಿಕ್ಷಣ ಇಲಾಖೆ ನೀಡುವ ಅನುಕೂಲದಂತೆ ನಮ್ಮ ಜವಾಬ್ದಾರಿ ಕೆಲಸವನ್ನು ನಿರ್ವಹಿಸಿ ಮಕ್ಕಳ ಶಿಕ್ಷಣ ಹಕ್ಕು ಪ್ರತಿಪಾದಿಸುವ ಕೆಲಸ ಪ್ರಾಮಾಣಿಕವಾಗಿ ಮಾಡಿ ಶಿಕ್ಷಕರ ಜಯಂತಿಗೆ ಅರ್ಥ ತರೋಣ ಎಂದು ಕರೆ ನೀಡಿದರು.

ಇದನ್ನು ಓದಿದ್ದೀರಾ? ತುಮಕೂರು | ಗೃಹ ಸಚಿವರ ಜಿಲ್ಲೆಯಲ್ಲಿ ಜೀತಪದ್ದತಿ ಇನ್ನೂ ಜೀವಂತ: 36 ಕೂಲಿ ಕಾರ್ಮಿಕರ ರಕ್ಷಣೆ

ಇದೇ ಸಂದರ್ಭದಲ್ಲಿ ಈ ಸಾಲಿನಲ್ಲಿ ನಿವೃತ್ತರಾದ ಶಿಕ್ಷಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ವೇದಿಕೆಯಲ್ಲಿ ತಾಪಂ ಇಓ ಶಿವಪ್ರಕಾಶ್, ಪಪಂ ಸದಸ್ಯರಾದ ಮಂಗಳಮ್ಮ, ಮಮತಾ, ಶೋಭಾ, ಜಿ.ಆರ್.ಶಿವಕುಮಾರ್, ಜಿ.ಸಿ.ಕೃಷ್ಣಮೂರ್ತಿ, ಶಶಿಕುಮಾರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕರುಣಾಕರ್ ಶೆಟ್ಟಿ, ಕ್ಷೇತ್ರ ಸಮನ್ವಯಾಧಿಕಾರಿ ಮಧುಸೂದನ್, ತಾಲೂಕು ದೈಹಿಕ ಪರಿವೀಕ್ಷಕ ರಮೇಶ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಜಗದೀಶ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎನ್.ಟಿ.ಪ್ರಕಾಶ್, ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಸಿ.ಶಿವಣ್ಣ, ಕಸಾಪ ತಾಲೂಕು ಅಧ್ಯಕ್ಷ ಯತೀಶ್, ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಯೋಗಾನಂದ, ತಾಲೂಕು ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷ ಬಿ.ಕೆ.ಸಂಗಮೇಶ್ ಸೇರಿದಂತೆ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X