ತುಮಕೂರು | ಶಿಕ್ಷಣದಿಂದ ಮಾತ್ರ ದೇಶ ಬಲಿಷ್ಠ : ಡಾ. ಜಿ.ಪರಮೇಶ್ವರ

Date:

ದೇಶ ಬಲಿಷ್ಠವಾಗಲು ಶಿಕ್ಷಣವೊಂದೇ ಶಕ್ತಿ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ.ಪರಮೇಶ್ವರ ಅಭಿಪ್ರಾಯಪಟ್ಟರು

- Advertisement -

ಬಿದರಕಟ್ಟೆಯಲ್ಲಿ ತುಮಕೂರು ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ದೇಶದಲ್ಲಿ ಪ್ರತಿವರ್ಷ 12ಲಕ್ಷ ಎಂಜಿನಿಯರ್ ಹಾಗೂ ವೈದ್ಯ ಪದವೀಧರರು ಬರುತ್ತಿದ್ದಾರೆ. ಇದರಿಂದ ಜಗತ್ತಿನಾದ್ಯಂತ ಪ್ರತಿಭೆಗಳ ಮಹಾಪೂರವೇ ಹರಿಯುತ್ತಿದೆ. ಅಂದಿನ ಪ್ರಧಾನಿ ಪಂಡಿತ್ ಜವಾಹರ್ ಲಾಲ ನೆಹರೂ ಅವರು ಶಿಕ್ಷಣಕ್ಕೆ ಒತ್ತು ನೀಡಿದ ಪರಿಣಾಮ ಎಂದ ಅವರು, ಪ್ರಾಚೀನ ಭಾರತದಿಂದಲೂ ತಕ್ಷಶಿಲಾ, ನಳಂದ ವಿಶ್ವವಿದ್ಯಾಲಯಗಳಿಂದಲೂ ದೇಶದಲ್ಲಿ ಶಿಕ್ಷಣ ಕ್ರಾಂತಿ ನಡೆದಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳಾ ಮೀಸಲಾತಿ ಮರೆಯಲ್ಲಿ ಕ್ಷೇತ್ರ ಮರುವಿಂಗಡಣೆ: ವಿರೋಧ ಪಕ್ಷಗಳ...

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ ಕ್ಷೇತ್ರ ಪುನರ್ವಿಂಗಡಣೆಯೊಂದಿಗೆ ತಳುಕು ಹಾಕಿರುವ ಮೋದಿ ಸರ್ಕಾರದ ನಡೆ, ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂಸದೀಯ ಇತಿಹಾಸದಲ್ಲಿಯೇ ಒಂದು ಅಪರೂಪದ ರಾಜಕೀಯ ಹಾಗೂ ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ....

ಖಾಸಗಿ ವೈದ್ಯರ ಎಡವಟ್ಟು; ಬಡ ಕುಟುಂಬದ ಆಧಾರ ಸ್ತಂಭ...

ಆತ ಕೂಲಿ‌ ಕೆಲಸ ಮಾಡಿಕೊಂಡು ಹಂಗೊ ಹೆಂಗೋ ಜೀವನ‌ ನಡೆಸಿಕೊಂಡು ಬಂದಿದ್ದ ಚಿರ ಯೌವ್ವನದ ಯುವಕ. ತನ್ನ ಮನೆ ಜವಾಬ್ದಾರಿಯನ್ನು ತನ್ನದೇ ಹೆಗಲ ಮೇಲೆರಿಸಿ ಕಷ್ಟಪಟ್ಟು ದುಡಿದು ತನ್ನ ಇಬ್ಬರು ಸಹೋದರಿಯರಿಗೆ ಮದುವೆಯನ್ನೂ...

ಭಾಷಣಗಳಲ್ಲಿ ಆಗಾಗ ಎಡವಟ್ಟು, ಸುಳ್ಳು-ಅತಿಶಯೋಕ್ತಿಯೇ ಮೇಲುಗೈ: ನವಭಾರತದ ‘ಪಪ್ಪು’...

ಒಂದು ಕಾಲದಲ್ಲಿ ರಾಹುಲ್ ಗಾಂಧಿ ಅವರನ್ನು ಅಪಹಾಸ್ಯ ಮಾಡಲು ಬಳಸುತ್ತಿದ್ದ 'ಪಪ್ಪು' ಎಂಬ ಪದವೇ ಇದೀಗ ಮೋದಿ ಅವರತ್ತ ತಿರುಗಿದೆ. 1987-88ರ ಡಿಜಿಟಲ್ ಕ್ಯಾಮೆರಾ-ಇಮೇಲ್ ಕಥೆಯಿಂದ ಹಿಡಿದು ಐತಿಹಾಸಿಕ ಪ್ರಮಾದಗಳವರೆಗೆ, ಮೋದಿ ಅವರ...

  ಇಂದಿನ ಯುವ ಸಮುದಾಯ ಆಧುನಿಕ ಜಗತ್ತಿಗೆ ಒಗ್ಗಿಕೊಳ್ಳಬೇಕಿದೆ ಎಂದ ಅವರು, ಎಐ ಮತ್ತು ರೋಬೋಟಿಕ್ ತಂತ್ರಜ್ಞಾನದಂತಹ ಹೊಸ ಅನ್ವೇಷಣೆಗಳತ್ತ ಗಮನ ಹರಿಸಬೇಕು. ಬದಲಾವಣೆಗೆ ಒಗ್ಗಿಕೊಳ್ಳಬೇಕು ಎಂದರು.

  ತುಮಕೂರು ಜಿಲ್ಲೆ ಈಗಾಗಲೇ ಶಿಕ್ಷಣ ಕಾಶಿ ಎಂಬುದನ್ನು ಸಾಬೀತು ಮಾಡಿದೆ. ಮೂರು ವೈದ್ಯಕೀಯ ಕಾಲೇಜುಗಳು, ಎಂಜಿನಿಯರಿಂಗ್ ಕಾಲೇಜುಗಳು, ಪ್ರತಿ ತಾಲೂಕಿನಲ್ಲೂ ಪದವಿ ಕಾಲೇಜುಗಳು ಇದ್ದು, ಗ್ರಾಮೀಣ ಪ್ರದೇಶದ ಬಡವರಿಗೆ, ಪರಿಶಿಷ್ಟ ಹಾಗೂ ಹಿಂದುಳಿದ ಬಡ ವಿದ್ಯಾರ್ಥಿಗಳು ಸೇರಿದಂತೆ ಅಪಾರ ಪ್ರಮಾಣದಲ್ಲಿ ಅನುಕೂಲವಾಗುತ್ತಿದೆ ಎಂದರು.

  ಪ್ರಸ್ತುತ ತುಮಕೂರು ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್‌ಗೆ ಹೆದ್ದಾರಿ ಸಂಪರ್ಕ ರಸ್ತೆ, ಬೋಧಕ ಸಿಬ್ಬಂದಿ ಸೇರಿದಂತೆ ಹಣಕಾಸಿನ ನೆರವು ಅಗತ್ಯವಿದ್ದು, ಸರ್ಕಾರ ಮುಂದಿನ ದಿನಗಳಲ್ಲಿ ಅಗತ್ಯ ನೆರವು ನೀಡಲಿದೆ ಎಂದರು.

ವಿಶ್ವವಿದ್ಯಾಲಯಗಳಿಗೆ ಪೂರಕ ಸೌಲಭ್ಯ: 

  ಅಧ್ಯಕ್ಷತೆ ವಹಿಸಿದ್ದ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಮಾತನಾಡಿ, ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದಂತೆ ಬೇಡಿಕೆಗಳು ಬರುತ್ತಿವೆ. ಆದರೆ ಭೌತಿಕ ಕಟ್ಟಡಗಳನ್ನು ಕಟ್ಟಿಸಿದಾಕ್ಷಣ ಜ್ಞಾನಕೇಂದ್ರ ಆಗುವುದಿಲ್ಲ. ಅದಕ್ಕೆ ಪೂರಕ ಮೂಭೂತ ಸೌಲಭ್ಯ, ಬೋಧಕ ಸಿಬ್ಬಂದಿ ಸೇರಿದಂತೆ ಪೂರಕ ವಾತಾವರಣ ನಿರ್ಮಿಸಬೇಕು ಎಂದರು.

  ಪ್ರಸ್ತುತ ತುಮಕೂರು ವಿಶ್ವವಿದ್ಯಾಲಯದ 500 ಕೋಟಿ ರೂ.ಗಳ ವಿಸ್ತೃತ ಯೋಜನೆಯಿದ್ದು, ಮುಂದಿನ ದಿನಗಳಲ್ಲಿ ಎಲ್ಲವನ್ನೂ ಪೂರೈಸಲಾಗುವುದು ಎಂದರು.

  ರಾಜ್ಯದ ಬಡ ವಿದ್ಯಾರ್ಥಿಗಳಿಗೆ ವಿದೇಶಿ ವ್ಯಾಸಂಗ ಕನಸಿನ ಮಾತಾಗಿತ್ತು. ಆದರೆ ರಾಜ್ಯ ಸರ್ಕಾರ ಬ್ರಿಟನ್ ವಿಶ್ವವಿದ್ಯಾಲಯಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ವಿದೇಶಿ ಶಿಕ್ಷಣ ಕೊಡಿಸಲು ಮುಂದಾಗಿದೆ. ಕಳೆದ ನವೆಂಬರ್‌ನಲ್ಲಿ ರಾಜ್ಯದ 6 ವಿಶ್ವವಿದ್ಯಾಲಯದ ತಲಾ ಐದು ವಿದ್ಯಾರ್ಥಿಗಳನ್ನು ಆಯ್ದು ಲಂಡನ್ ಪ್ರವಾಸಕ್ಕೆ ಕಳಿಸಲಾಗಿತ್ತು. ಮರಳಿ ಬಂದ ವಿದ್ಯಾರ್ಥಿಗಳಲ್ಲಿ ಹೊಸ ಬದಲಾವಣೆ ಬಂದಿದೆ ಎಂದ ಅವರು, ರಾಜ್ಯದ 8 ಸರ್ಕಾರಿ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳಿಗೆ ವಿದೇಶಿ ಶಿಕ್ಷಣ ಕೊಡಿಸುವ ಸಂಬಂಧ ಗ್ಲೋಬಲ್ ವೇಲ್ಸ್ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು

  ಅಲ್ಲದೆ ಈಗಾಗಲೆ ಅಜೀಂ ಪ್ರೇಮ್‌ಜಿ ಫೌಂಡೇಶನ್‌ನಿಂದ ರಾಜ್ಯದ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ ಯೋಜನೆ ಜಾರಿಗೊಳಿಸಲಾಗಿದೆ. ಈಗಾಗಲೆ 37,000 ವಿದ್ಯಾರ್ಥಿನಿಯರು ನೋಂದಾಯಿಸಿಕೊಂಡಿದ್ದಾರೆ. ಜನವರಿಯಿಂದ ಮತ್ತೆ ನೋಂದಾಯಿಸಿಕೊಳ್ಳಲಾಗುವುದು. ಬಡ ವಿದ್ಯಾರ್ಥಿನಿಯರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಸಮಾರಂಭದಲ್ಲಿ ಸರ್ಕಾರದ ನವದೆಹಲಿಯ ವಿಶೇಷ ಪ್ರತಿನಿಧಿ ಹಾಗೂ ಶಾಸಕ ಟಿ.ಬಿ. ಜಯಚಂದ್ರ, ಶಾಸಕರಾದ ಬಿ. ಸುರೇಶ್ ಗೌಡ, ಜಿ.ಬಿ. ಜ್ಯೋತಿಗಣೇಶ್, ಕುಲಪತಿ ಪ್ರೊಫೆಸರ್ ಎಂ. ವೆಂಕಟೇಶ್ವರಲು, ಕುಲಸಚಿವೆ ನಹೀದಾ ಜಮ್ ಜಮ್, ವಿಶ್ವ ವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರು ಹಾಗೂ ಗಣ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನ.24ರಂದು ಪಂಚ ಗ್ಯಾರಂಟಿ ಫಲಾನುಭವಿಗಳ ಸಂಭ್ರಮೋತ್ಸವ

ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದ ಸಂಭ್ರಮ...

ಉಡುಪಿ | ಪತ್ರಿಕಾ ರಂಗದಲ್ಲಿ ನೈಜ ಸತ್ಯ ಹೇಳುವವರ ಅಗತ್ಯವಿದೆ: ಡಾ. ರಾಘವ ನಂಬಿಯಾರ್

ವ್ಯಾವಹಾರಿಕ ಸತ್ಯ ಹೇಳುವವರ ನಡುವೆ ನೈಜ ಸತ್ಯವನ್ನು ಪ್ರತಿಪಾದಿಸುವ ಪತ್ರಕರ್ತರ ಅಗತ್ಯವಿದೆ....

ಉಡುಪಿ | ಜನಪರ ಯೋಜನೆಗಳ ಬಗ್ಗೆ ಬಿಜೆಪಿಗೆ ಹೊಟ್ಟೆಕಿಚ್ಚು: ರಮೇಶ್ ಕಾಂಚನ್

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಚುನಾವಣಾಪೂರ್ವದಲ್ಲಿ ಜನರಿಗೆ ನೀಡಿದ ಭರವಸೆಯಂತೆ ಪಂಚ...

ಅಕ್ಷರ ದಾಸೋಹ ನೌಕರರ ಉದ್ಯೋಗಕ್ಕೆ ಕುತ್ತು: ಕ್ಲಸ್ಟರ್ ಕಿಚನ್ ವಿರುದ್ಧ ರಾಜ್ಯಾದ್ಯಂತ ಹೋರಾಟ

ಸರಕಾರಿ ಶಾಲೆಗಳ ಬಿಸಿಯೂಟ ಯೋಜನೆಯನ್ನು ಖಾಸಗೀಕರಣಗೊಳಿಸಿ, ವರ್ಷಗಳಿಂದ ದುಡಿಯುತ್ತಿರುವ ಅಕ್ಷರ ದಾಸೋಹ...