ತುಮಕೂರು | ತೆರಿಗೆ ಪಾವತಿಸಿದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ : ಅರುಣ್ ಕುಮಾರ್

Date:

ದೇಶದ ಪ್ರಜೆಗಳು ಪ್ರಮಾಣಿಕವಾಗಿ ತೆರಿಗೆಯನ್ನು ಸರ್ಕಾರಕ್ಕೆ ಸಲ್ಲಿಸಿದಾಗ ಮಾತ್ರ ದೇಶದ ಆರ್ಥಿಕ ವ್ಯವಸ್ಥೆ ಸದೃಢವಾಗಿ ಅಭಿವೃದ್ಧಿಯತ್ತ ಮುಂದೆ ಸಾಗುತ್ತದೆ ಎಂದು ತುಮಕೂರು ವಿಭಾಗದ ಆದಾಯ ತೆರಿಗೆ ಇಲಾಖೆಯ ಅಧಿಕಾರಿ ಅರುಣ್ ಕುಮಾರ್ ತಿಳಿಸಿದರು. 

- Advertisement -

ತುಮಕೂರು ನಗರದ ಅಗಳಕೋಟೆಯಲ್ಲಿರುವ ಶ್ರೀ ಸಿದ್ಧಾರ್ಥ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಮಂಗಳವಾರ  ಸಾಹೇ ವಿಶ್ವವಿದ್ಯಾನಿಲಯ ಹಾಗೂ ಆದಾಯ ತೆರಿಗೆ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ‘ ಟಿಡಿಎಸ್ ಜಾಗೃತಿ’ ಕುರಿತು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತೆರಿಗೆ ಪಾವತಿಯ ವಿವಿಧ ಹಂತಗಳನ್ನು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...
1001216214

ದೇಶದ ಪ್ರತಿಯೊಬ್ಬ ಪ್ರಜೆಯೂ ಕೂಡ ಒಂದಲ್ಲ ಒಂದು ರೀತಿಯಲ್ಲಿ ದೇಶಕ್ಕೆ ತೆರಿಗೆಯನ್ನು ಕಟ್ಟೇ ಕಟ್ಟುತ್ತಾನೆ. ಅದು ಪ್ರತ್ಯಕ್ಷ ತೆರಿಗೆಯಾಗಲಿ ಇಲ್ಲ ಪರೋಕ್ಷ ತೆರಿಗೆಯೇ ಆಗಲಿ ಸಲ್ಲಿಸುತ್ತಾನೆ. ದೇಶ ಸರ್ವತೋಮುಖ ಅಭಿವೃದ್ಧಿಯನ್ನು ಸಾಧಿಸಬೇಕಾದರೆ ಪ್ರಜೆಗಳಾದ ನಾವು ಸಲ್ಲಿಸುವ ತೆರಿಗೆ ಬಹಳ ಪ್ರಮುಖ ಪಾತ್ರವಹಿಸುತ್ತದೆ ಎಂದು ಅರುಣ್ ಕುಮಾರ್ ಹೇಳಿದರು.  

1001216213

ಸಾಹೇ ವಿಶ್ವ ವಿದ್ಯಾಲಯದ ಉಪಕುಲಪತಿ ಡಾ. ಕೆ.ಬಿ ಲಿಂಗೇಗೌಡ  ಮಾತನಾಡಿ ನಾವು ದೇಶಕ್ಕೆ ಸಲ್ಲಿಸುವ ತೆರಿಗೆಯನ್ನು ದೇಶ ಸೇವೆ ಅಂದುಕೊಳ್ಳಬೇಕು. ಹಾಗಾಗಿ ಪ್ರಜೆಗಳು ಪ್ರಮಾಣಿಕವಾಗಿ ತೆರಿಗೆಯನ್ನು ಸಲ್ಲಿಸಬೇಕು. ಆದಾಯ ತೆರಿಗೆಯ ಜಾಗೃತಿ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಮುಂದಿನ ಅಧ್ಯಯನಕ್ಕೆ ಬಹಳ ಸಹಕಾರಿಯಾಗುತ್ತದೆ ಎಂದು ತಿಳಿದರು. 

ಕಾರ್ಯಕ್ರಮದಲ್ಲಿ ವಾಣಿಜ್ಯ ತೆರಿಗೆ ವಿಭಾಗದ ಇನ್ಸ್ ಪೆಕ್ಟರ್ ಸುನಿಲ್ ಗುಪ್ತಾ, ಸಾಹೇ ವಿ.ವಿ. ಪರೀಕ್ಷಾಂಗ ನಿಯಂತ್ರಕರಾದ ಡಾ. ಗುರುಶಂಕರ್, ಶ್ರೀಸಿದ್ಧಾರ್ಥ ದಂತ ವೈದ್ಯಕೀಯ ಆಸ್ಪತ್ರೆಯ ಪ್ರಾಂಶುಪಾಲರಾದ ಡಾ.ಪ್ರವೀಣ್ ಡಿ.ಕುಡುವ, ಅಧೀಕ್ಷಕರಾದ ಡಾ.ವೆಂಕಟೇಶ್, ಎಸ್‌ಎಸ್‌ಎಂಸಿ ಹಣಕಾಸು ಅಧಿಕಾರಿಗಳಾದ ಭಾಸ್ಕರ್, ಎಸ್‌ಎಸ್‌ಐಬಿಎಂ ವಿಭಾಗದ ಪ್ರಾಂಶುಪಾಲರಾದ ಮಮತಾ ಜಿ. ಶ್ರೀ ಸಿದ್ದಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ನಿರ್ದೇಶಕರಾದ ಡಾ.ಬಿ.ಟಿ.ಮುದ್ದೇಶ ಹಾಗೂ ವಿವಿಧ ವಿಭಾಗದ ಮುಖ್ಯಸ್ಥರು, ವಿದ್ಯಾರ್ಥಿಗಳು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...