ತುಮಕೂರು | ಸೋಲಾರ್ ಪಾರ್ಕ್ ಎರಡನೇ ಹಂತದ ವಿಸ್ತರಣೆ ಕಾರ್ಯ ಚುರುಕು

Date:

ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ತಿರುಮಣಿ ಗ್ರಾಮದ ಬಳಿ ಆರಂಭವಾಗಿರುವ ಸೋಲಾರ್ ಪಾರ್ಕ್ ಎರಡನೇ ಹಂತದ ವಿಸ್ತರಣೆ ಕಾರ್ಯ ಎರಡು ವರ್ಷಗಳಲ್ಲಿ ಪೂರ್ಣಗೊಳ್ಳಲಿದ್ದು, ವಿಶ್ವದ ಅತಿ ದೊಡ್ಡ ಸೋಲಾರ್ ಪಾರ್ಕ್ ಎಂಬ ಹಿರಿಮೆಗೆ ಪಾತ್ರವಾಗಲಿದೆ ಎಂದು ಕರ್ನಾಟಕ ಸೌರಶಕ್ತಿ ಅಭಿವೃದ್ಧಿ ನಿಗಮದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್ ಅಮರನಾಥ್ ತಿಳಿಸಿದರು.

- Advertisement -

ಸುದ್ದಿಗಾರರೊಂದಿ ಮಾತನಡಿದ ಅವರು, “ಎರಡನೇ ಹಂತದ ವಿಸ್ತರಣೆ 2025ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆ ಇದ್ದು, ಇಲ್ಲಿ 300 ಮೆಗಾ ವ್ಯಾಟ್‌ ಸೌರ ವಿದ್ಯುತ್‌ ಉತ್ಪಾದನೆಯಾಗಲಿದೆ. 2019ರಲ್ಲಿ ಕಾರ್ಯಾರಂಭ ಮಾಡಿದ ಮೊದಲ ಹಂತದ ಯೋಜನೆಯಲ್ಲಿ ಈಗಾಗಲೇ 2,050 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಆಗುತ್ತಿದೆ. ಎರಡೂ ಸೇರಿದರೆ ಒಟ್ಟು 2,350 ಮೆ.ವ್ಯಾ ವಿದ್ಯುತ್‌ ಉತ್ಪಾದನೆಯಾಗಲಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ಈ ಯೋಜನೆಗೆ ಒಟ್ಟು 13 ಸಾವಿರ ಎಕರೆ ಜಮೀನನ್ನು ರೈತರಿಂದ ಬಾಡಿಗೆ ಪಡೆಯಲಾಗಿತ್ತು. ಅದರಲ್ಲಿ ಖಾಲಿ ಉಳಿದಿದ್ದ 1,200 ಎಕರೆಯಲ್ಲಿ ಎರಡನೇ ಹಂತದ ಯೋಜನೆ ತಲೆ ಎತ್ತಲಿದೆ. ಖಾಸಗಿ ಕಂಪನಿಗಳಿಂದ ಟೆಂಡರ್‌ ಕರೆಯುವ ಪ್ರಕ್ರಿಯೆ ಶೀಘ್ರ ಆರಂಭವಾಗಲಿದೆ” ಎಂದು ಹೇಳಿದರು.

“ಮೂರನೇ ಹಂತದಲ್ಲಿ ರಾಪ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2,500 ಮೆ.ವ್ಯಾ ಮತ್ತು ನಾಲ್ಕನೇ ಹಂತದಲ್ಲಿ ತಿರುಮಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 500 ಮೆ ವ್ಯಾ ವಿದ್ಯುತ್ ಉತ್ಪಾದನೆಗೆ ಪಾರ್ಕ್‌ ವಿಸ್ತರಣೆ ಯೋಜನೆ ರೂಪಿಸಲಾಗಿದೆ. ಈಗಾಗಲೇ ರೂಪುರೇಷೆ ಸಿದ್ಧವಾಗಿದ್ದು, ಅಧಿಸೂಚನೆ ಹೊರಡಿಸಲಾಗಿದೆ. ಹಂತ, ಹಂತವಾಗಿ ಈ ಯೋಜನೆಗಳನ್ನು ಜಾರಿಗೊಳಿಸಲಾಗುವುದು” ಎಂದರು.

“ಒಟ್ಟಾರೆಯಾಗಿ ನಾಲ್ಕು ಹಂತದ ವಿಸ್ತರಣೆ ಮತ್ತು ಅಭಿವೃದ್ಧಿ ಯೋಜನೆ ಪೂರ್ಣಗೊಂಡರೆ ಪಾವಗಡ ಸೋಲಾರ್ ಪಾರ್ಕ್‌ನಲ್ಲಿ ಒಟ್ಟು 5,350 ಮೆ‌ ವ್ಯಾ ಸೌರ ವಿದ್ಯುತ್ ಉತ್ಪಾದನೆಯಾಗಲಿದೆ. ಅಲ್ಲಿಗೆ ಪಾವಗಡ ಸೋಲಾರ ಪಾರ್ಕ್ ಜಗತ್ತಿನ ಅತಿದೊಡ್ಡ ಸೋಲಾರ್ ಪಾರ್ಕ್ ಎಂಬ ಹಿರಿಮೆಗೆ ಪಾತ್ರವಾಗಲಿದೆ” ಎಂದು ಹೇಳಿದರು.

“ಉತ್ತರ ಕರ್ನಾಟಕದ ಬೀದರ್ ಕಲಬುರಗಿ ಹಾವೇರಿ ಗದಗ ಸೇರಿದಂತೆ ಇತರ ಭಾಗಗಳಲ್ಲಿ ಸೋಲಾರ್ ಪಾರ್ಕ್ ಆರಂಭಿಸಲು ಸಿದ್ಧತೆ ನಡೆಯುತ್ತಿದೆ. ಕಟ್ಟಡಗಳ ಮೇಲೆ ಸೋಲಾರ್ ಫಲಕ ಅಳವಡಿಸುವ ಪ್ರಕ್ರಿಯೆಯೂ ಪ್ರಾರಂಭವಾಗಿದೆ. ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ, ಚಿನ್ನಸ್ವಾಮಿ ಕ್ರೀಡಾಂಗಣ ಸೇರಿದಂತೆ ಬೆಂಗಳೂರಿನ ಹಲವೆಡೆ ಸೌರಫಲಕ (ಸೋಲಾರ್ ಪ್ಯಾನೆಲ್‌) ಅಳವಡಿಸಿ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಕೇಂದ್ರ ಬರ ಅಧ್ಯಯನ ತಂಡದಿಂದ ಬೆಳೆ ಪರಿಶೀಲನೆ

“ತುಮಕೂರು, ಬೆಂಗಳೂರು, ಮೈಸೂರು, ಹಿರಿಯೂರು, ಗುತ್ತಿ, ಬಳ್ಳಾರಿ ಸೇರಿದಂತೆ ಹಲವು ಕಡೆ ಪಾವಗಡ ಗ್ರಿಡ್‌ನಿಂದ ಸೌರ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಇಲ್ಲಿಂದಲೇ ವಿದ್ಯುತ್‌ ಪೂರೈಸಲಾಗುತ್ತಿದೆ. ಸದ್ಯ ಪಾವಗಡದಲ್ಲಿ ಉತ್ಪಾದನೆಯಾಗುತ್ತಿರುವ 2050 ಮೆ ವ್ಯಾ ಪೈಕಿ 1850 ಮೆ ವ್ಯಾ ಸೌರ ವಿದ್ಯುತ್‌ ಅನ್ನು ರಾಜ್ಯದ ಬೇರೆ ವಿದ್ಯುತ್ ವಿತರಣಾ ಕಂಪನಿಗಳು ಖರೀದಿಸುತ್ತಿವೆ. ಉಳಿದ 200 ಮೆ.ವ್ಯಾ ವಿದ್ಯುತ್ ಅನ್ನು ಉತ್ತರಪ್ರದೇಶ ಖರೀದಿಸುತ್ತಿದೆ” ಎಂದು ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಮುಖ್ಯ ವ್ಯವಸ್ಥಾಪಕ ಎಸ್ ರೆಡ್ಡಿ ಮಾಹಿತಿ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಸಾಮಾಜಿಕ ಜಾಲತಾಣ; ಶಾಸಕ ಟಿ.ಡಿ ರಾಜೇಗೌಡರಿಗೆ ಅವಹೇಳನ, ಬೆದರಿಕೆ; ಪ್ರಕರಣ ದಾಖಲು 

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಕ್ಷೇತ್ರದ ಶಾಸಕ ಸನ್ಮಾನ್ಯ ಶ್ರೀ ಟಿ. ಡಿ...

ತುಮಕೂರು | ಅಂಗನವಾಡಿ ನೌಕರರಿಗೆ ಕನಿಷ್ಠ ವೇತನ, ಪಿಂಚಣಿ ನೀಡಿ: ಸರ್ಕಾರಗಳಿಗೆ ಸಿಐಟಿಯು ಆಗ್ರಹ

ಎಲ್ಲಾ ಯೋಜನೆಗಳ ಜಾರಿಗೆ ಅಂಗನವಾಡಿ ನೌಕರರನ್ನೇ ಬಳಸಿಕೊಳ್ಳುತ್ತಿರುವ ಕೇಂದ್ರ ಮತ್ತು ರಾಜ್ಯ...

ಕಲಬುರಗಿ | ನಕಲಿ ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ; ಕಾರಾಗೃಹ ಡಿಐಜಿ ಬಂಧನ

ಬೆಂಗಳೂರು ಸುಪ್ರೀಂ ಕೋರ್ಟ್‌ ಆದೇಶದ ಮಾದರಿಯನ್ನು ಅನುಕರಿಸಿ ನಕಲಿ ಆದೇಶವೊಂದನ್ನು ಸಿದ್ಧಪಡಿಸಿ...

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...