ತುಮಕೂರು | ನಿರೂಪಕರ ಜ್ಞಾನಮಟ್ಟದಿಂದ ಸುದ್ದಿವಾಹಿನಿಯ ಘನತೆ ನಿರ್ಧಾರವಾಗಿರುತ್ತದೆ : ಡಾ. ಎಂ.ಎಸ್ ರವಿಪ್ರಕಾಶ್

Date:

ಆಂಕರ್‌ಗಳು ಒಂದು ಟಿವಿ ವಾಹಿನಿಯ ಪ್ರತಿನಿಧಿಯಂತೆ ಇದ್ದು ಸಮಾಜದಲ್ಲಿನ ಒಳಿತು ಕೆಡಕುಗಳ ಸುದ್ದಿಗಳನ್ನು ಜನರಿಗೆ ಮನಮುಟ್ಟುವಂತೆ ವಿವರಿಸುವಂತಹ ಕಾರ್ಯವನ್ನು ನಿರ್ವಹಿಸುತ್ತಾರೆ. ಇವರ ಜ್ಞಾನಮಟ್ಟದಿಂದ ಆ ವಾಹಿನಿಯ ಘನತೆ ನಿರ್ಧಾರವಾಗಿರುತ್ತದೆ ಎಂದು ಎಸ್ ಎಸ್ ಐಟಿ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಎಸ್ ರವಿಪ್ರಕಾಶ್ ತಿಳಿಸಿದರು. 

- Advertisement -

ತುಮಕೂರು ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿರುವ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದಿಂದ ಆಯೋಜಿಸಲಾಗಿದ್ದ 3 ದಿನಗಳ ಆ್ಯಂಕರಿಂಗ್ – ಸುದ್ದಿ ನಿರೂಪಣಾ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು,  ಪತ್ರಕರ್ತರು ಜನರ ಮತ್ತು ಸರ್ಕಾರದ ನಡುವಿನ ಒಂದು ಸೇತುವೆಯಂತೆ ಕೆಲಸಮಾಡುತ್ತಾರೆ. ಪತ್ರಕರ್ತ ತಾನು ಮಾಡುವ ಕೆಲಸಕ್ಕೆ ಪ್ರಾಮಾಣಿಕವಾಗಿ ಇದ್ದಾಗ ಮಾತ್ರ ಸಮಾಜ ಅಭಿವೃದ್ಧಿಯತ್ತ ಸಾಗುತ್ತದೆ. ಪತ್ರಕರ್ತ ಯಾವಾಗಲೂ ಸಮಾಜವನ್ನು ಗಮನಿಸುತ್ತಾ ಅಲ್ಲಿನ ಸಮಸ್ಯೆಗಳನ್ನು ಪರಿಹರಿಸುವಂತಹ ಕೆಲಸವನ್ನು ಮಾಡಬೇಕು. ಇಂದು ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ ಸಾಕಷ್ಟು ಪತ್ರಕರ್ತರನ್ನು ಪತ್ರಿಕಾರಂಗಕ್ಕೆ ನೀಡಿದೆ. ಅದರಂತೆ ಇಂದು ರಾಜ್ಯದ ಮೂಲೆ ಮೂಲೆಗಳಿಂದ ಪತ್ರಿಕೋಧ್ಯಮದಲ್ಲಿ ಆಸಕ್ತಿ ಇರುವ ವಿದ್ಯಾರ್ಥಿಗಳನ್ನು ಕರೆತಂದು ಅವರಿಗೆ ಅನುಕೂಲವಾಗಲಿ ಎಂದು ಆಂಕರ್ ಸುದ್ದಿ ನಿರೂಪಣಾ ಕಾರ್ಯಗಾರವನ್ನು ಆಯೋಜಿಸಿಸಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಖಾಸಗೀ ವಾಹಿನಿಯ ಹಿರಿಯ ಸುದ್ದಿ ನಿರೂಪಕರಾದ ಶಾಂಕುಂತಲ ಮಾತನಾಡಿ ಪತ್ರಕರ್ತ ಎಂದರೆ ಸಮಾಜದ ಪ್ರತಿಯೊಂದು ವಿಷಯದ ಬಗ್ಗೆ ವಿಮರ್ಶೆ ಮಾಡುವಂತವರಾಗಿರಬೇಕು, ಪ್ರತಿಕೋಧ್ಯಮ ಎಂದರೆ ಕೇವಲ ಸತ್ಯವನ್ನು ಹುಡುಕುವುದು ಮಾತ್ರವಲ್ಲ ಸಮಾಜದ ಸ್ವಾಸ್ತö್ಯವನ್ನು ಕಾಪಾಡುವಂತಹ ಜವಾಬ್ದಾರಿಯೂ ಕೂಡ ಒಬ್ಬ ನಿಜವಾದ ಪತ್ರಕರ್ತನ ಮೇಲಿರುತ್ತದೆ. ಉತ್ತಮ ಆಂಕರ್ ಅಥವಾ ನಿರೂಪಕರಾಗಬೇಕೆನ್ನುವವರು ಪ್ರಚಲಿತ ವಿದ್ಯಾಮಾನಗಳನ್ನು ಅರಿಯುತ್ತಿರಬೇಕು, ಒಳಿತು ಕೆಡಕುಗಳನ್ನು ತಿಳಿಯುವ ಬುದ್ದಿವಂತಿಕೆ ಇರಬೇಕು, ಭಾಷೆಯಲ್ಲಿ ಹಿಡಿತವಿರಬೇಕು, ನಿರಂತರವಾಗಿ ಅಧ್ಯಯನ ಶೀಲರಾಗಿರಬೇಕು ಇಂತಹ ಅಭ್ಯಾಸಗಳನ್ನು ಹೊಂದಿದ್ದರೆ ಉತ್ತಮ ನಿರೂಪಕನಾಗಬಹುದು, ನಿಮ್ಮಲ್ಲೂ ಒಬ್ಬರು ಉತ್ತಮ ಪತ್ರರ್ಕರಾಗುವ ಅಥವಾ ನಿರೂಪಕರಾಗುವಂತಹ ಗುಣಲಕ್ಷಣಗಳಿದೆ ಆದರೆ ಅದು ಸತತ ಪರಿಶ್ರಮದಿಂದ ಮಾತ್ರ ಸಾಧ್ಯವಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಸ್ಪೂರ್ತಿಧಾಯಕ ಮಾತುಗಳನ್ನಾಡಿದರು. 

ಖಾಸಗೀ ವಾಹಿನಿಯ ಇನ್ ಪುಟ್ ಕೋಆರ್ಡಿನೇಟರ್ ಆದಂತಹ ಕಾವ್ಯ ಮಾತನಾಡಿ ಒಬ್ಬ ಉತ್ತಮ ಪತ್ರಕರ್ತನಾದವನು ಮಾನವೀಯ ಮೌಲ್ಯಗಳನ್ನು ಬೆಳಸಿಕೊಂಡಾಗ ಮಾತ್ರ ಸಮಾಜದಲ್ಲಿನ ಸಮಸ್ಯೆಗಳನ್ನು ಗುರುತಿಸಲು ಸಾಧ್ಯ ಹಾಗೂ ಅದನ್ನು ಬದಲಾಯಿಸಲೂ ಸಾಧ್ಯ, ಪತ್ರಕರ್ತ ನಿಂತ ನೀರಾಗದೆ ನಿರಂತರ ಅಭ್ಯಾಸದಲ್ಲಿದ್ದಾಗ ಮಾತ್ರ ಅವನು ಪತ್ರಕರ್ತನಾಗಿ ಉಳಿಯುತ್ತಾನೆ ಹಾಗಾಗಿ ಎಲ್ಲಾ ವಿದ್ಯಾರ್ಥಿಗಳು ನಿರಂತರ ಅಭ್ಯಾಸ ಮಾಡಿ, ಪ್ರಚಲಿತ ವಿದ್ಯಮಾನಗಳ ಕುರಿತು ಅರಿವಿರಲಿ ಎಂದು ಹೇಳಿದರು.

 ಕಾರ್ಯಕ್ರಮದಲ್ಲಿ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ನಿರ್ದೇಶಕರಾದ ಡಾ.ಬಿ.ಟಿ ಮುದ್ದೇಶ್, ಖ್ಯಾತ ಕಾದಂಬರಿ ಕಾರರಾದ ಶ್ರೀಮತಿ ಕಮಲಾ ನರಸಿಂಹ, ಹಿರಿಯ ಸುದ್ದಿ ನಿರೂಪಕರಾದ ಎಂ.ಜಿ ಹರಿಪ್ರಸಾದ್ ಹಾಗೂ ಮಾಧ್ಯಮ ಅಧ್ಯಯನ ಕೇಂದ್ರದ ಅಧ್ಯಾಪಕರುಗಳೂ ಮತ್ತು ಸಿಬ್ಬಂದಿವರ್ಗದವರೂ ಹಾಗೂ ರಾಜ್ಯದ ಮೂಲೆ ಮೂಲೆಗಳಿಂದ ಕಾರ್ಯಗಾರಕ್ಕೆಂದು ಬಂದ ನೂರಾರು ವಿದ್ಯಾರ್ಥಿಗಳು ಭಾಗವಿಸಿದ್ದರು, 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...