ತುಮಕೂರು | ಸರ್ಕಾರಿ ಶಾಲೆ ಆಕರ್ಷಣೀಯಗೊಳಿಸುವ ಹೊಣೆಗಾರಿಕೆ ಹಿರಿಯ ವಿದ್ಯಾರ್ಥಿಗಳ ಮೇಲಿದೆ : ದೊಡ್ಡೇರಿಯ ಸಿದ್ದರಾಮಣ್ಣ

Date:

ನಮ್ಮೂರ ಸರ್ಕಾರಿ ಶಾಲೆಗಳನ್ನು ಉಳಿಸಿಕೊಂಡು, ಸ್ಥಳೀಯ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಈ ಶಾಲೆಯ ಪ್ರತಿಯೊಬ್ಬ ಹಿರಿಯ ವಿದ್ಯಾರ್ಥಿಗಳು ಸಂಘಟಿತರಾಗಬೇಕು ಎಂದು ಶಾಲೆಯ ಹಿರಿಯವಿದ್ಯಾರ್ಧಿ ಹಾಗೂ ನಿವೃತ್ತ ಮುಖ್ಯ ಶಿಕ್ಷಕ ದೊಡ್ಡೇರಿ ಸಿದ್ದರಾಮಣ್ಣ ಕರೆಕೊಟ್ಟರು. 

- Advertisement -

ತುಮಕೂರು ತಾಲ್ಲೂಕು ಬೆಳ್ಳಾವಿ ಕರ್ನಾಟಕ ಪಭ್ಲಿಕ್ ಶಾಲೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಹಿರಿಯ ವಿದ್ಯಾರ್ಥಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ನಾವೆಲ್ಲಾ ಓದುವಾಗ ನಡೆದುಕೊಂಡು ಬಂದು ಶಾಲೆಯಲ್ಲಿ ಓದುತ್ತಿದ್ದೆವು. ತಂದೆ ತಾಯಿಗೆ ಮನೆಕೆಲಸದಲ್ಲಿ ಕೈ ಜೋಡಿಸುತ್ತಿದ್ದೆವು. ಈಗಿನ ಮಕ್ಕಳಲ್ಲಿ ಆ ಭಾಂಧವ್ಯ ಕುಸಿಯುತ್ತಿದೆ. ಇಂತಹ ಮಕ್ಕಳಿಗೆ ನೀತಿ ಶಿಕ್ಷಣ ಪಠ್ಯವಾಗಬೇಕು. ಈ ಶಾಲೆಯಲ್ಲಿ ಕಲಿತ ಸಾವಿರಾರು ವಿದ್ಯಾರ್ಥಿಗಳು ಉನ್ನತಹುದ್ದೆಯಲಿದ್ದು, ಇಂತಹವರು ಈಗಿನ ಶಾಲೆಯಲ್ಲಿ ಓದುವ ಮಕ್ಕಳ ಕಲಿಕೆಗೆ ನೆರವಾಗಬೇಕಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕುವೆಂಪು ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಸಿದ್ದಲಿಂಗಪ್ಪ ಮಾತನಾಡಿ ಸರ್ಕಾರ ದಾನಿಗಳ ಹಾಗೂ ಹಿರಿಯವಿದ್ಯಾರ್ಥಿಗಳ ನೆರವಿನಲ್ಲಿ ಶಾಲೆಯ ಕಲಿಕಾ ಪರಿಸರ ಸುಧಾರಿಸಲು ಸರ್ಕಾರ ಯೋಜನೆ ರೂಪಿಸಿದೆ. ಈ ಅಯೋಚನೆಗೆ ನಮ್ಮ ಶಾಲೆ ಬಗ್ಗೆ ಪ್ರತಿಯೊಬ್ಬರು ಗೌರವ ಇಟ್ಟುಕೊಳ್ಳಬೇಕು. ಕುವೆಂಪು ಶಾಲೆ ಶತಮಾನ ಪೂರೈಸಿದೆ. ಇಲ್ಲಿ ಕಲಿತವರು ರಾಜ್ಯದಲ್ಲಿ ಮಾದರಿ ವಿದ್ಯಾರ್ಥಿಗಳಾಗಿ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಈಗಿನ ಮಕ್ಕಳು ದೂರಕ್ಕೆ ಹೋಗಿ ಅಲೆದು ತಮ್ಮ ವಿದ್ಯಾಭ್ಯಾಸಕ್ಕೆ ತೊಂದರೆ ಮಾಡಿಕೊಳ್ಳದೆ, ಈ ಶಾಲೆಯಲ್ಲಿಯೇ ಓದು ಮುಂದುವರಿಸಿ ಎಂದರು. 

 ಶಿಕ್ಷಕ ಪ್ರಸಾದ್ ಮಾತನಾಡಿ ನಮ್ಮಿಂದಲೇ ದುಬಾರಿ ಶುಲ್ಕ ಪಡೆಯುವ ಖಾಸಗಿ ಶಾಲೆಗಳು ತಮ್ಮ ಆಕರ್ಷಣೀಯ ಕಟ್ಟಡ ಕಟ್ಟಿಸಿಕೊಂಡು, ವಿದ್ಯಾರ್ಥಿಗಳನ್ನು ಸೆಳೆಯುತ್ತಾರೆ. ಹಿರಿಯ ವಿದ್ಯಾರ್ಥಿಗಳು ಹಾಗೂ ಪೋಷಕರು ಕೈಜೋಡಿಸಿ ನಮ್ಮ ಸರ್ಕಾರಿ ಶಾಲೆಯನ್ನೇ ಅಭಿವೃದ್ಧಿಗೊಳಿಸಿದರೆ ಉತ್ತಮ ಕಲಿಕಾ ವಾತಾವರಣ ನಿರ್ಮಿಸಲು ಸಾಧ್ಯವಿದೆ ಎಂದರು. 

ಕಾರ್ಯಕ್ರಮದಲ್ಲಿ  ಪ್ರಾಚಾರ್ಯ ಎಂ. ಪತೇಅಹಮದ್, ಹಿರಿಯ ವಿದ್ಯಾರ್ಥಿಗಳಾದ ಚಿಕ್ಕ ಬೆಳ್ಳಾವಿ ಶಿವಣ್ಣ, ಜಯಕುಮಾರ್, ಮಹೇಶ್, ಪ್ರಸಾದ್, ಚೇತನ್, ಹನುಮಂತರಾಜು, ಮಲ್ಲಿಕಾರ್ಜುನ್, ಉಪನ್ಯಾಸಕರಾದ ಬಿ ಎನ್ ಶಿವಕುಮಾರ್, ಎಂಬಿ ಸುಜಾತ, ಟಿ ಹೆಚ್. ಪಂಚಾಕ್ಷರಯ್ಯ, ಶಿಕ್ಷಕರಾದ ಟಿ ಎನ್ ಶಾಂತಕುಮಾರಿ, ನಂಜುಂಡರಾವ್, ಸುಮಯಾ ತರನಂ, ವಿಜಯಮ್ಮ, ಮಂಜುಳಾ ವಿಭೂತಿಮಠ್, ಮೋಹನ್ ರಾಜ್, ರೇಣುಕಾ ಇತರರು ಇದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...