ತುಮಕೂರು | ಪ್ರಜಾಪ್ರಭುತ್ವದ ಬಲ ಮತದಾನದ ಜಾಗೃತಿಯಲ್ಲಿ ಅಡಗಿದೆ : ಜಿಲ್ಲಾಧಿಕಾರಿ

Date:

Advertisements

ಪ್ರಜಾಪ್ರಭುತ್ವದ ಬಲ ಮತದಾನದ ಜಾಗೃತಿಯಲ್ಲಿ ಅಡಗಿದೆ. ಪ್ರತಿಯೊಬ್ಬರೂ ಮತದಾನದ ಮಹತ್ವವನ್ನು ಅರಿತು, ತಮ್ಮ ಮತವನ್ನು ಪ್ರಾಮಾಣಿಕವಾಗಿ ಚಲಾಯಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹೇಳಿದರು.

ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ   ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯಕ್ರಮದ ಅಂಗವಾಗಿ ಸೋಮವಾರ ಬೆಳಿಗ್ಗೆ ಏರ್ಪಡಿಸಿದ್ದ ವಿದ್ಯಾರ್ಥಿಗಳಿಂದ ಮೆರವಣಿಗೆ ಹಾಗೂ ಸೈಕಲ್ ಜಾಥಾ ಕಾರ್ಯಕ್ರಮಕ್ಕೆ ಸೈಕಲ್ ಚಾಲನೆ ಮಾಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. 

ಭಾರತವು ವಿಶ್ವದ ಅತ್ಯಂತ ಯುವ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಯುವ ವಿದ್ಯಾರ್ಥಿಗಳು ದೇಶದ ಆಸ್ತಿಯಾಗಬೇಕು. ಆಳುವ ಹೊಣೆಗಾರಿಕೆಯನ್ನು ಹೊರುವ ಹಾಗೂ ಜವಾಬ್ದಾರಿಯುತ ನಾಗರಿಕರಾಗಿ ವಿದ್ಯಾರ್ಥಿಗಳು ಬೆಳೆಯಬೇಕು ಎಂದು ಹೇಳಿದರು.

 “ನನ್ನ ಮತ-ನನ್ನ ಹಕ್ಕು” ಎಂಬ ಧ್ಯೇಯ ವಾಕ್ಯದಡಿ ಅಂತರಾಷ್ಟ್ರೀಯ  ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಪ್ರಜಾಪ್ರಭುತ್ವದಲ್ಲಿ ಪ್ರತಿಯೊಂದು ಮತಕ್ಕೂ ಮಹತ್ವವಿದೆ ಎಂದು ತಿಳಿಸಿದ ಅವರು, ಮತ ಚಲಾಯಿಸುವ ಮೊದಲು ಯೋಚಿಸಿ ಜವಾಬ್ದಾರಿಯುತವಾಗಿ ಚಲಾಯಿಸಬೇಕು. ನಿಮ್ಮ ಮತವೇ ನಿಮ್ಮ ಭವಿಷ್ಯವನ್ನು ರೂಪಿಸುತ್ತದೆ ಎಂದು ವಿದ್ಯಾರ್ಥಿಗಳು ಹಾಗೂ ನಾಗರಿಕರಿಗೆ ಸಂದೇಶ ನೀಡಿದರು.

ಇದೇ ಸಂದರ್ಭದಲ್ಲಿ ಮಹಾನಗರದ ಪಾಲಿಕೆ ಆವರಣದ ಡಾ.ಬಿ.ಆರ್. ಅಂಬೇಡ್ಕರ್  ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಲಾಯಿತು. 

ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರಘುಚಂದ್ರ ಸೇರಿದಂತೆ ವಿದ್ಯಾರ್ಥಿಗಳು ಉತ್ಸಾಹದಿಂದ ಮೆರವಣಿಗೆಯಲ್ಲಿ ಪಾಲ್ಗೊಂಡರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

Download Eedina App Android / iOS

X