ತುಮಕೂರು | ಪರಿಸರ ಕಾಪಾಡಬೇಕಾದ ಅಧಿಕಾರಿಗಳೇ ಪರಿಸರ ನಾಶಕ್ಕೆ ಕಾರಣವಾಗುತ್ತಿದ್ದಾರೆ : ನ್ಯಾಯಮೂರ್ತಿ ಬಿ. ವೀರಪ್ಪ

Date:

ಪರಿಸರ ಉಳಿಸಬೇಕಾದ ಅಧಿಕಾರಿಗಳೇ ಪರಿಸರ ನಾಶಕ್ಕೆ ಕಾರಣವಾಗುತ್ತಿರುವುದು ಬೇಸರ ತರುತ್ತಿದೆ ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅಸಮಾಧಾನ ವ್ಯಕ್ತಪಡಿಸಿದರು.

- Advertisement -

 ತುಮಕೂರು ನಗರದ ಹೊರವಲಯ ಅಮಲಾಪುರದಲ್ಲಿರುವ ಭೈರವ ಕ್ರಷರ್‌ಗೆ ಅನಿರೀಕ್ಷಿತ ಭೇಟಿ ನೀಡಿ, ಸ್ಥಳದಲ್ಲೇ ನಡೆಯುತ್ತಿರುವ ಗಣಿಗಾರಿಕೆಯಿಂದ ಪರಿಸರಕ್ಕೆ ಹಾನಿಯುಂಟಾಗುತ್ತಿರುವುದನ್ನು ಗಂಭೀರವಾಗಿ ಗಮನಿಸಿ ಮಾತನಾಡಿದ ಅವರು, ಕ್ರಷರ್ ಮಾಲೀಕರು ಬೆಟ್ಟ-ಗುಡ್ಡಗಳನ್ನು ಕೊರೆದು ಪರಿಸರವನ್ನು ಹಾಳುಮಾಡುತ್ತಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು, ಬೆಟ್ಟಗಳನ್ನು ನಾಶಮಾಡಲು ನಿಮಗೆ ಯಾರು ಅನುಮತಿ ಕೊಟ್ಟಿದ್ದಾರೆ? ಬಫರ್ ವಲಯ ನಿಯಮವನ್ನೂ ಕೂಡ ಪಾಲಿಸದೇ ಗಣಿಗಾರಿಕೆ ನಡೆಸಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಲು ಕಾರಣರಾಗುತ್ತಿದ್ದೀರಾ? ಎಂದು ಮಾಲೀಕರನ್ನು ತರಾಟೆಗೆ ತೆಗೆದುಕೊಂಡರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಅರಣ್ಯ, ಕಂದಾಯ, ಗಣಿಗಾರಿಕೆ ಸೇರಿದಂತೆ ಸಂಬಂಧಿಸಿದ ಇಲಾಖಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಪರಿಸರವನ್ನು ಸಂರಕ್ಷಿಸಬೇಕಾದವರೇ ಕ್ರಷರ್‌ಗಳಿಗೆ ಅನುಮತಿ ನೀಡಿ ಪರಿಸರ ನಾಶಕ್ಕೆ ಮುಂದಾಗುತ್ತಿದ್ದಾರೆ. ಅಧಿಕಾರಿಗಳು ಇನ್ನು ಮುಂದಾದರೂ ಪರಿಸರ ಕಾಳಜಿವಹಿಸಿ ಸ್ಥಳೀಯ ಜನರ ಬದುಕಿಗೆ ಅವಕಾಶ ಮಾಡಿಕೊಡಬೇಕೆಂದು ಸೂಚಿಸಿದರು.

ಕ್ರಷರ್‌ನಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬ ಕಾರ್ಮಿಕರಿಗೂ ಕ್ರಷರ್ ಮಾಲೀಕರು ಕಡ್ಡಾಯವಾಗಿ ವಿಮಾ ಸೌಲಭ್ಯ ಕಲ್ಪಿಸಬೇಕು ಎಂದು ನಿರ್ದೇಶಿಸಿದರು.

ಇದೇ ವೇಳೆ ಅರಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಮಲಾಪುರದ ಹಕ್ಕಿ–ಪಿಕ್ಕಿ ಜನಾಂಗದ ನಿವಾಸಿಗಳನ್ನು ಭೇಟಿ ಮಾಡಿ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ 44 ಕುಟುಂಬಗಳಿಗೆ ಮನೆ, ಶಾಲೆ, ಪಡಿತರ ಚೀಟಿ, ವಿಧವಾ ವೇತನ, ವೃದ್ಧಾಪ್ಯ ವೇತನಗಳನ್ನು ಕಲ್ಪಿಸುವಂತೆ ತಹಸೀಲ್ದಾರ್ ರಾಜೇಶ್ವರಿಗೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಲಕ್ಷ್ಮೀನಾರಾಯಣ, ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ವೈಚಾರಿಕ ತಳಹದಿಯ ಚರ್ಚೆಗೆ ಸದಾ ಸ್ವಾಗತವಿದೆ: ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ

ಜನರು ಅಜ್ಞಾನದ ಅಂಧಕಾರದಲ್ಲಿಯೇ ಇರಬೇಕು ಎಂದು ಬಯಸುವುದು ಮಾನಸಿಕ ಭಯೋತ್ಪಾದನೆಯಾಗಿದೆ. ಮೌಢ್ಯ...

ಬೀಳಗಿ |ಬೀಳಗಿಯಲ್ಲಿ ಜಾನಪದ ಸಂಭ್ರಮ: 20 ಚೌಡಕಿ ಗಾಯನ ತಂಡಗಳಿಂದ ಸಾಂಪ್ರದಾಯಿಕ ಹಾಡುಗಳ ಅನಾವರಣ

ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕರ್ನಾಟಕ ಜಾನಪದ ಪರಿಷತ್ ಸಹಯೋಗದಲ್ಲಿ, ಲಿಂಗೈಕ್ಯ...

ವಿಜಯಪುರ | ಜಿಪಂನಿಂದ ಉಚಿತ ಕಂಪ್ಯೂಟರ್ ತರಬೇತಿ: ಅಭ್ಯರ್ಥಿಗಳಿಗೆ ₹1,500 ಸಹಾಯಧನ

ನಿರುದ್ಯೋಗಿ ಯುವಜನರನ್ನು ಸ್ವಯಂ ಉದ್ಯೋಗದತ್ತ ಪ್ರೇರೇಪಿಸುವ ಉದ್ದೇಶದಿಂದ ವಿಜಯಪುರ ಜಿಲ್ಲಾ ಪಂಚಾಯಿತಿಯ...

ಯಾದಗಿರಿ | ಜಮೀನು ವಿವಾದ; ಮುಸ್ಲಿಂ ಮುಖಂಡರಿಂದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ

ಸರ್ಕಾರಿ ಜಮೀನಿನಲ್ಲಿ ಅಂತ್ಯಸಂಸ್ಕಾರ ನಡೆಸಿದ ಸ್ಥಳವು ಮುಸ್ಲಿಂ ಸಮುದಾಯದ ಈದ್ದಾ ಜಾಗಕ್ಕೆ...