ಕಾಂಗ್ರೆಸ್‌ನಲ್ಲಿ ಪ್ರಧಾನಿಯಾಗಲು ಯಾರಿದ್ದಾರೆ? ನರೇಂದ್ರಮೋದಿ ಬಿಟ್ಟರೆ ಪ್ರಧಾನಿ ಆಗುವ ಅರ್ಹತೆ ಯಾರಿಗೂ ಇಲ್ಲ ಎಂದು ಎಚ್.ಡಿ. ದೇವೇಗೌಡರು ಹೇಳಿದ್ದಾರೆ. ಮೋದಿ ಮೆಚ್ಚಿಸಲು ಸ್ವಾರ್ಥಕ್ಕಾಗಿ ಇಂತಹ ಮಾತುಗಳನ್ನು ಆಡಿದ್ದಾರೆ. ಪ್ರಧಾನಿ ಆಗಲು ಯೋಗ್ಯರಾದ ಸಾಕಷ್ಟು ಮುಖಂಡರು ಕಾಂಗ್ರೆಸ್‌ನಲ್ಲಿ ಇದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ತುಮಕೂರು ನಗರದ ಹೊರಹೊಲ ಯಲ್ಲಪುರದಲ್ಲಿ ಮಂಗಳವಾರ (ಏ.23) ರಾತ್ರಿ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ. ಮುದ್ದಹನುಮೇಗೌಡರ ಪರ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಪಕ್ಷದಲ್ಲಿ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಅವರಿಗೆ ಪ್ರಧಾನಿಯಾಗುವ ಅರ್ಹತೆ ಇದೆ ಎಂದರು.
ಸುಳ್ಳು ಹೇಳಲು ಹಾಲಿ ಪ್ರಧಾನಿ, ಮಾಜಿ ಪ್ರಧಾನಿ ಪೖಪೋಟಿ ನಡೆಸುತಿದ್ದಾರೆ. ಮೋದಿ ಸುಳ್ಳು ಹೇಳಿದರೆ, ಗೌಡರು ಅದಕ್ಕಿಂತ ಹೆಚ್ಚು ಸುಳ್ಳು ಹೇಳುತ್ತಿದ್ದಾರೆ. ಸುಳ್ಳು ಹೇಳಿ ಇಬ್ಬರು ಮಾನ, ಮರ್ಯಾದೆ ಇಲ್ಲದಂತೆ ಮಾಡಿಕೊಂಡಿದ್ದಾರೆ. ಗೌಡರು ಯೋಗ್ಯತೆಗೆ ತಕ್ಕಂತೆ ಮಾತನಾಡುತ್ತಿಲ್ಲ ಎಂದು ಆರೋಪಿಸಿದರು.
