ತುಮಕೂರು | ಸ್ವಾಮೀಜಿ ಖಾಸಗಿ ವಿಡಿಯೋ ಹರಿಬಿಡುವುದಾಗಿ ಬೆದರಿಕೆ; 6 ಮಂದಿ ವಿರುದ್ಧ ಎಫ್‌ಐಆರ್

Date:

ಸಾಮಾಜಿಕ ಜಾಲತಾಣದಲ್ಲಿ ಖಾಸಗಿ ವಿಡಿಯೋ ಹರಿಬಿಡುವುದಾಗಿ ಮಠಾಧೀಶರಿಗೆ ಹೆದರಿಸಿ, ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಆರು ಮಂದಿ ವಿರುದ್ಧ ತುಮಕೂರು ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

“ಚರ್ಮ ವ್ಯಾದಿ ವಾಸಿಯಾಗದ ಬಗ್ಗೆ ಸ್ವಾಮೀಜಿಯು ಯುವತಿಯ ಬಳಿ ದೂರವಾಣಿಯಲ್ಲಿ ಹೇಳಿಕೊಂಡಿದ್ದಾರೆ. ಯುವತಿ ಸಲಹೆ ಮೇರೆಗೆ ವೀಡಿಯೊ ಕರೆ ಮಾಡಿ ಚರ್ಮರೋಗ ಕಾಣಿಸಿಕೊಂಡ ಜಾಗ ತೋರಿಸಿದ್ದಾರೆ. ಇದೇ ವಿಡಿಯೊ ಇಟ್ಟುಕೊಂಡು ಈಗ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ನಾವು ಕೇಳಿದಷ್ಟು ಹಣ ಕೊಡದಿದ್ದರೆ ವಿಡಿಯೋವನ್ನು ಫೇಸ್ ಬುಕ್, ಯ್ಯೂಟೂಬ್‌ನಲ್ಲಿ ಹಂಚಿಕೊಳ್ಳಲಾಗುವುದೆಂದು ಬೆದರಿಕೆ ಹಾಕುತ್ತಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಕುಣಿಗಲ್ ತಾಲೂಕಿನ ಹೊಸಕೆರೆ ಗ್ರಾಮದ ಎಚ್ ಎಸ್ ಅಭಿಷೇಕ್, ಬೆಂಗಳೂರಿನ 30 ವರ್ಷದ ಯುವತಿ, ಪಾಂಡುಪುರ ಬಳಿಯ ವಿಜಯಕಾಳಿ ದೇವಸ್ಥಾನದ ರಾಜೇಶ್, ಶ್ರೀನಿವಾಸ್, ರಾಮನಗರ ಜಿಲ್ಲೆಯ ಕನಕಪುರ ಗ್ರಾಮದ ಚೇತನ್, ಕುಣಿಗಲ್‌ನ ನಂದೀಶ್ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ.

“ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ಹಂಗರಹಳ್ಳಿಯ ಶ್ರೀವಿದ್ಯಾ ಚೌಡೇಶ್ವರಿ ದೇವಾಲಯದ ಬಾಲ ಮಂಜುನಾಥ ಸ್ವಾಮೀಜಿಯ ಖಾಸಗಿ ವೀಡಿಯೊ ನಮ್ಮ ಬಳಿ ಇದ್ದು, ಅದನ್ನು ಸಾಮಾಜಿಕ ಜಾಲತಾಣಕ್ಕೆ ಹಾಕುವುದಾಗಿ ಬೆದರಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ” ಎಂದು ದೇವಸ್ಥಾನದ ಟ್ರಸ್ಟಿ ಕೆ ಅಭಿಲಾಷ್ ಎಂಬುವರು ದೂರು ನೀಡಿದ್ದರು.

“ಸ್ವಾಮೀಜಿಗೆ ಖಾಸಗಿ ಜಾಗದಲ್ಲಿ ಚರ್ಮ ಸಮಸ್ಯೆ ಶುರುವಾಗಿತ್ತು. ಇದನ್ನು ಸ್ವಾಮೀಜಿ ತನ್ನ ಅಪ್ತಸಹಾಯಕನಿಗೆ ತಿಳಿಸಿದ್ದರು. ತನ್ನ ಸಂಬಂಧಿ ಚರ್ಮರೋಗ ತಜ್ಞೆಯಾಗಿದ್ದು, ಆಕೆಗೆ ತೋರಿಸಿಸುವುದು ಒಳ್ಳೆಯದೆಂದು ಆತ ಸಲಹೆ ಮಾಡಿದ್ದ. ಇದಕ್ಕೆ ಸ್ವಾಮೀಜಿ ಒಪ್ಪಲಿಲ್ಲ. ನಂತರ ಚರ್ಮರೋಗ ಕಾಣಿಸಿಕೊಂಡ ಜಾಗದ ಚಿತ್ರ ತೆಗೆದು ಯುವತಿಗೆ ಕಳಿಸಲಾಗಿತ್ತು. ಅವರು ಒಂದಷ್ಟು ಔಷಧಿ ಮುಲಾಮು ತೆಗೆದುಕೊಳ್ಳುವಂತೆ ತಿಳಿಸಿದ್ದರು” ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ಮಾ.8ರಂದು ರಾಜ್ಯ ಮಟ್ಟದ ‘ಮಹಿಳಾ ಚೈತನ್ಯ ದಿನ’

“ಸ್ವಾಮೀಜಿಯ ಆಪ್ತ ಸಹಾಯಕರಾಗಿದ್ದ ಎಚ್ ಎಸ್ ಅಭಿಷೇಕ್ ಮೂಲಕ ಸ್ವಾಮೀಜಿಗೆ ಯುವತಿಯ ಪರಿಚಯವಾಗಿತ್ತು. ಆಕೆಯನ್ನು ತನ್ನ ಸಂಬಂಧಿ ಮತ್ತು ವೈದ್ಯೆ ಎಂದು ಅಭಿಷೇಕ್ ಪರಿಚಯಿಸಿದ್ದ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಕಬ್ಬು ಬೆಳೆಗಾರರು ಹುಬ್ಬಳ್ಳಿಗೆ ಪಾದಯಾತ್ರೆ; ಕೇಂದ್ರ ಸಚಿವರ ಅಣಕು ಶವಯಾತ್ರೆ

ಕಬ್ಬಿಗೆ ಪ್ರತಿ ಟನ್‌ಗೆ ₹5500 ನೀಡಬೇಕು. ಎಮ್.ಎಸ್.ಪಿ. ದರ 31ರೂ ಇದ್ದದ್ದು,...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...