ರೈಲಿಗೆ ಸಿಲುಕಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಬಳಿಕ ಹಿರೇಹಳ್ಳಿ ಸಮೀಪ ನಡೆದಿದೆ. ಸೋಮವಾರ ಮುಂಜಾನೆ ಘಟನೆ ನಡೆದಿದೆ.
ತಾಲೂಕಿನ ಮರಳೂರಿನ ಸಿದ್ಧಗಂಗಯ್ಯ (62), ಸುನಂದಾ (50) ಹಾಗೂ ಪುತ್ರಿ ಗೀತಾ (33) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿಗಳು ಎಂದು ತಿಳಿದುಬಂದಿದೆ.
ಸಿದ್ದರಂಗಯ್ಯ ಅವರು ನಿವೃತ್ತ ಬೆಸ್ಕಾಂ ಅಧಿಕಾರಿಯಾಗಿದ್ದಾರೆ. ಅವರು ತಮ್ಮ ಮಗಳು ಗೀತಾಳನ್ನು ಬೆಸ್ಕಾಂನಲ್ಲಿಯೇ ಕೆಲಸ ಮಾಡುತ್ತಿದ್ದ ಉದ್ಯೋಗಿಯೊಬ್ಬರಿಗೆ ಮದುವೆ ಮಾಡಿದ್ದರು ಎಂದು ಹೇಳಲಾಗಿದೆ.
ಸಿದ್ದರಂಗಯ್ಯ ಅವರು ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲಾಗದೆ ಅವರು ಆತ್ಮಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.