ತುಮಕೂರು | ರೈತನಿಗೆ ಭೂ ಪರಿಹಾರ ನೀಡುವಲ್ಲಿ ವಿಫಲ: ಟೂಡಾ ಕಚೇರಿಯ ಪೀಠೋಪಕರಣ ಜಪ್ತಿ

Date:

ತುಮಕೂರಿನ ರಿಂಗ್ ರಸ್ತೆಗಾಗಿ ಸ್ವಾಧೀನಗೊಂಡ ಜಮೀನಿಗೆ ಹೆಚ್ಚಿನ ಭೂ ಪರಿಹಾರ ನೀಡದ ಹಿನ್ನೆಲೆಯಲ್ಲಿ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರ(ಟೂಡಾ) ಕಚೇರಿಯ ಪೀಠೋಪಕರಣಗಳನ್ನು ಜಪ್ತಿ ಮಾಡಲಾಗಿದೆ.

- Advertisement -

ತುಮಕೂರಿನ 1ನೇ ಅಧಿಕ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯದ ಆದೇಶದ ಮೇರೆಗೆ ಪೀಠೋಪಕರಣಗಳು ವಶಕ್ಕೆ ಪಡೆಯಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

2018ರಲ್ಲೇ 82 ಲಕ್ಷ ರೂಪಾಯಿ ಹೆಚ್ಚಿನ ಪರಿಹಾರ ನೀಡಲು ಕೋರ್ಟ್ ಆದೇಶ ನೀಡಿತ್ತು. ಕೋರ್ಟ್‌ನ ಆದೇಶದಂತೆ ಪರಿಹಾರ ನೀಡದ ಹಿನ್ನೆಲೆಯಲ್ಲಿ ಇಂದು ಪೀಠೋಪಕರಣ ಜಪ್ತಿ ಮಾಡಲಾಗಿದೆ.

ತುಮಕೂರು 2 1

ಕುರ್ಚಿ, ಟೇಬಲ್ ಹಾಗೂ ಸೋಫಾಗಳನ್ನು ಕೋರ್ಟ್ ಸಿಬ್ಬಂದಿ ಜಪ್ತಿ ಮಾಡಿದ್ದಾರೆ. ಕೋರ್ಟ್‌ನ ಆದೇಶಕ್ಕೂ ‘ಡೋಂಟ್ ಕೇರ್’ ಎನ್ನದ ತುಮಕೂರು ಟೂಡಾ ಆಯುಕ್ತರು, ಸರ್ವಾಧಿಕಾರಿಯಂತೆ ವರ್ತಿಸಿ ಕಚೇರಿ ಜಪ್ತಿಯ ತನಕ ತಂದುಕೊಂಡಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಹಿರಿಯ ವಕೀಲರಾದ ಪಿ.ಆರ್. ಜಯರಂಗಯ್ಯ ಹಾಗೂ ಕಾಂತರಾಜು ಹೆಚ್.ಆರ್. ನೇತೃತ್ವದಲ್ಲಿ ಜಪ್ತಿ ಮಾಡಲಾಗಿದೆ.

ಇದನ್ನು ಓದಿದ್ದೀರಾ? ‘ಅಡ್ವಾಣಿ ನಿಧನರಾಗಿದ್ದಾರೆ’ ಎಂದು ಹೇಳಿ ಶ್ರದ್ಧಾಂಜಲಿ ಸಲ್ಲಿಸಿದ ಕೇಂದ್ರ ಸಚಿವ ವಿ ಸೋಮಣ್ಣ!

ರಿಂಗ್ ರಸ್ತೆಗಾಗಿ ರೈತ ಲಂಕ್ಯಪ್ಪ ಅವರ 36 ಗುಂಟೆ ಜಮೀನನ್ನು ಟೂಡಾ ಭೂಸ್ವಾಧೀನ ಮಾಡಿಕೊಂಡಿತ್ತು. ಭೂ ಪರಿಹಾರವಾಗಿ ಅಲ್ಪ-ಸ್ವಲ್ಪ ಹಣ ನೀಡಿ ಕೈ ತೊಳೆದುಕೊಂಡಿತ್ತು. 82 ಲಕ್ಷ ರೂ. ಹೆಚ್ಚಿನ ಪರಿಹಾರ ನೀಡುವಂತೆ 2018ರಲ್ಲೇ ಕೋರ್ಟ್ ಆದೇಶ ಹೊರಡಿಸಿತ್ತು. ಆರು ವರ್ಷಗಳಿಂದಲೂ ಕೋರ್ಟ್‌ನ ಆದೇಶಕ್ಕೆ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಕ್ಯಾರೇ ಎಂದಿರಲಿಲ್ಲ. ಇಂದು ಕೋರ್ಟ್ ಆದೇಶದಂತೆ ಕಚೇರಿಯ ಎಲ್ಲ ಪೀಠೋಪಕರಣಗಳನ್ನು ಜಪ್ತಿ ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...