ಜೂಜಾಟದಲ್ಲಿ ತೊಡಗಿದ್ದ ಒಂಬತ್ತು ಮಂದಿ ಜೂಜುಕೋರರನ್ನು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಗುಬ್ಬಿ ತಾಲೂಕಿನ ಎರಡು ಹಳ್ಳಿಗಳಲ್ಲಿ ಪ್ರತ್ಯೇಕ ಪ್ರಕರಣ ಭೇದಿಸಿದ್ದು, ಗುಬ್ಬಿ ಪೊಲೀಸ್ ಠಾಣೆ ಸಿಬ್ಬಂದಿ ಒಟ್ಟು ₹11,000 ವಶಕ್ಕೆ ಪಡೆದಿದ್ದಾರೆ.
ಈ ಸುದ್ದಿ ಓದಿದ್ದೀರಾ? ಹಾಸನ | ವಾಟ್ಸ್‌ಆ್ಯಪ್ ಗುಂಪಿನಲ್ಲಿ ಬಿಜೆಪಿ ಪರ ಪ್ರಚಾರದ ಸಂದೇಶ; ಎಫ್‌ಡಿಎ ಅಮಾನತು
ಗುಬ್ಬಿ ತಾಲೂಕು ಕಸಬಾ ಹೋಬಳಿ ಜಿ ಹೊಸಹಳ್ಳಿ ಬಳಿ ನಡೆದಿದ್ದ ಜೂಜಾಟದ ಮಾಹಿತಿ ಆಧರಿಸಿ ದಾಳಿ ಮಾಡಿದ ಗುಬ್ಬಿ ಪಿಎಸ್‌ಐ ಸುನಿಲ್ ಕುಮಾರ್ ನೇತೃತ್ವದ ತಂಡ ₹7,800 ವಶಕ್ಕೆ ಪಡೆದರು. ಮತ್ತೊಂದು ಪ್ರಕರಣದಲ್ಲಿ ಪ್ರಭುವನಹಳ್ಳಿ ಗ್ರಾಮದ ಬಳಿ ನಡೆದ ದಾಳಿಯಲ್ಲಿ ಮೂವರನ್ನು ವಶಕ್ಕೆ ಪಡೆದು ₹3,200ನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.